ಚಾಮರಾಜನಗರ: ಮಲೈ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ
ಚಾಮರಾಜನಗರ(ನ.26): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು(ಗುರುವಾರ) ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ನಾಡಿನ ಮುಖ್ಯ ಶ್ರದ್ಧಾಕೇಂದ್ರ ಮಲೈ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಹದೇಶ್ವರಸ್ವಾಮಿಯ ದರ್ಶನವನ್ನ ಪಡೆದುಕೊಂಡಿದ್ದಾರೆ.
ಜಿಲ್ಲೆಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿ ಕೊಂಡ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ಮಲೈ ಮಹದೇಶ್ವರ ದೇವಸ್ಥಾನದ ಆಡಳಿತ ಮಂಡಳಿ
ಮಲೈ ಮಹದೇಶ್ವರ ಸ್ವಾಮೀಯ ದರ್ಶನ ಪಡೆದ ಸಿಎಂ
ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 11ನೇ ಸಭೆ ಜರುಗಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು