ಬೆಳಗಾವಿ ಉಪಕದನ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಜಾರಕಿಹೊಳಿ
ಬೆಳಗಾವಿ(ಮಾ.29): ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು(ಸೋಮವಾರ) ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿಗೆ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಹಾಮಾರಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಬರದಂತೆ ಈ ಮೊದಲೇ ಮನವಿ ಮಾಡಲಾಗಿತ್ತು.
ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ
ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್ ಸೇರಿದಂತೆ ಪಕ್ಷದ ಪ್ರಮುಖರು ಭಾಗಿ
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪಕ್ಷದ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆ
ಸಭೆಯಲ್ಲಿ ಆರ್.ವಿ. ದೇಶಪಾಂಡೆ, ರಾಮಲಿಂಗಾ ರೆಡ್ಡಿ, ಎಸ್.ಆರ್.ಪಾಟೀಲ್, ಹೆಚ್.ಕೆ. ಪಾಟೀಲ್, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಪ್ರಮುಖ ನಾಯಕರು ಭಾಗಿ