ಪುರಸಭೆ ಸದಸ್ಯೆ ಗರ್ಭಪಾತ: ಸಿದ್ದು ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

First Published Dec 6, 2020, 8:52 AM IST

ಮುಧೋಳ/ಬಾಗಲಕೋಟೆ(ಡಿ.06): ಪುರಸಭಾ ಮಹಿಳಾ ಸದಸ್ಯೆಯನ್ನು ಶಾಸಕ ಸಿದ್ದು ಸವದಿ ಅವರು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ನಿಗದಿಯಂತೆ ಮಧ್ಯಾಹ್ನ 1 ಗಂಟೆಗೆ ಮೆರವಣಿಗೆ ನಡೆಸಿ ಮಹಾಲಿಂಗಪುರ ಪುರಸಭೆ ಎದುರು ಪ್ರತಿಭಟನೆಯನ್ನು ನಡೆಸಬೇಕಿತ್ತು. ಆದರೆ, ಉಭಯ ನಾಯಕರು ಪಟ್ಟಣಕ್ಕೆ ಸಂಜೆ 4ಗಂಟೆಗೆ ಆಗಮಿಸಿದ್ದರಿಂದ ಪ್ರತಿಭಟನಾ ಮೆರವಣಿಗೆಯನ್ನು ಕೈಬಿಡಲಾಯಿತು. ಹೀಗಾಗಿ ಮಹಾಲಿಂಗಪುರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಸುಮಾರು 4 ರಿಂದ 5 ಸಾವಿರ ಜನರು ಪಾಲ್ಗೊಂಡಿದ್ದರು.

ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ರಾಕ್ಷಸ ಪ್ರವೃತ್ತಿಯ ನಾಲಾಯಕ ಶಾಸಕ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದು ಸವದಿ ಅವರು ಮಹಿಳೆಯರ ಜೊತೆ ಹೇಗೆ ವರ್ತಿಸಬೇಕೆಂಬ ಸಾಮಾನ್ಯ ಜ್ಞಾನ ಹೊಂದದಿರುವುದು ದುರ್ದೈವಾಗಿದೆ ಎಂದ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ.

ಇದು ಸಾಮಾನ್ಯ ಅಪರಾಧವಲ್ಲ, ಮಹಿಳಾ ಸದಸ್ಯರನ್ನು ಯದ್ವಾತದ್ವಾ ಪುರಸಭೆ ಕಾಂಪೌಂಡ್‌ ಗೋಡೆ ಮೇಲೆ ಎಸೆದು ಕ್ರಿಮಿನಲ್‌ ಮಾದರಿಯ ಕೃತ್ಯ ಎಸಗಿರುವುದು ಅಮಾನವೀಯವಾದದು. ಸಿದ್ದು ಸವದಿ ಅವರಿಗೆ ಮಾನ ಮರ್ಯಾದೆ ಇದ್ದರೆ ತಮ್ಮ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ತೆರಳಬೇಕು. ಅಧಿಕಾರದಲ್ಲಿ ಮುಂದುವರೆಯುವಲ್ಲಿ ಅವರಿಗೆ ನೈತಿಕ ಹಕ್ಕು ಇಲ್ಲ ಎಂದರು.

ಈ ಪ್ರಕರಣದಲ್ಲಿ ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಇಲ್ಲದಿದ್ದರೆ ನಾನು ವಿಧಾನಸಭೆ ಮತ್ತು ವಿಧಾನ ಪರಿಷತ್‌ ಅಧಿವೇಶನದಲ್ಲಿ ಈ ಕುರಿತು ಚರ್ಚಿಸುತ್ತೇನೆ. ರಾಜ್ಯದೆಲ್ಲೆಡೆ ಈ ಕುರಿತು ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಮಹಾಲಿಂಗಪುರದ ಪುರಸಭೆ ಚುನಾವಣೆಯಲ್ಲಿ ಮಹಿಳೆಯರ ಮೇಲಿನ ನೂಕಾಟ ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕ ಸಿದ್ದು ಸವದಿ ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದರು. ಮಹಾಲಿಂಗಪುರ ಘಟನೆ ಗಮನಿಸಿದರೆ ರಾಷ್ಟ್ರದಲ್ಲಿಯೇ ಹೆಣ್ಣುಮಗಳ ಮೇಲೆ ದೊಡ್ಡ ಅವಮಾನ ಆಗಿರುವ ಘಟನೆ ಇದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ನಡೆದಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವೆ ಉಮಾಶ್ರಿ, ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸೇರಿದಂತೆ ಸುಮಾರು 4 ರಿಂದ 5 ಸಾವಿರ ಜನ ಸೇರಿದ್ದರು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?