MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!

ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!

ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಟಿಕೆಟ್ ಘೋಷಣೆ ತಕ್ಷಣವೇ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ, ಟಿಕೆಟ್ ಆಕಾಂಕ್ಷಿ ಅಜಯಕುಮಾರ್ ಅವರನ್ನೂ ಭೇಟಿ ಮಾಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ಸಂದೇಶ ರವಾನಿಸಿದ್ದಾರೆ.

2 Min read
Author : Sathish Kumar KH
Published : Mar 19 2026, 07:32 PM IST
Share this Photo Gallery
  • FB
  • TW
  • Linkdin
  • Whatsapp
14
ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಶ್ರೀನಿವಾಸ
Image Credit : Asianet News

ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಶ್ರೀನಿವಾಸ

ದಾವಣಗೆರೆ (ಮಾ.19): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಹೆಸರು ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಟಿಕೆಟ್ ಸಿಕ್ಕಿದ ಬೆನ್ನಲ್ಲೇ ಅಭ್ಯರ್ಥಿ ಶ್ರೀನಿವಾಸ ಅವರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವ ಮೂಲಕ ತಮ್ಮ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.

ಭೀಮಸಮುದ್ರದಲ್ಲಿ ಸಿದ್ದೇಶ್ವರ ಆಶೀರ್ವಾದ:

ಅಭ್ಯರ್ಥಿ ಘೋಷಣೆಯಾದ ನಂತರ ಶ್ರೀನಿವಾಸ ದಾಸಕರಿಯಪ್ಪ ಅವರು ನೇರವಾಗಿ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಕಾಲಿಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಶ್ರೀನಿವಾಸ ಅವರ ಬೆನ್ನು ತಟ್ಟಿದ ಜಿ.ಎಂ. ಸಿದ್ದೇಶ್ವರ ಅವರು, 'ಕ್ಷೇತ್ರದಲ್ಲಿ ಎಲ್ಲಾ ಕಡೆ ಉತ್ತಮ ಪ್ರಚಾರ ಮಾಡಿ, ಗೆದ್ದು ಬಾ' ಎಂದು ಶುಭ ಹಾರೈಸಿದರು. ಅಲ್ಲದೆ, ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರ ಕಾಲಿಗೆ ಬಿದ್ದು ಶ್ರೀನಿವಾಸ ಆಶೀರ್ವಾದ ಪಡೆದರು.

24
ಬಣ ರಾಜಕಾರಣಕ್ಕೆ ಬ್ರೇಕ್ ಹಾಕುವ ಪ್ರಯತ್ನ:
Image Credit : Asianet News

ಬಣ ರಾಜಕಾರಣಕ್ಕೆ ಬ್ರೇಕ್ ಹಾಕುವ ಪ್ರಯತ್ನ:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯೊಳಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಣ್ಣಪುಟ್ಟ ಅಸಮಾಧಾನಗಳಿದ್ದವು. ಇದನ್ನು ಶಮನಗೊಳಿಸಲು ಮುಂದಾದ ಶ್ರೀನಿವಾಸ ಅವರು, ಟಿಕೆಟ್ ಆಕಾಂಕ್ಷಿಯಾಗಿದ್ದ ಮತ್ತೋರ್ವ ಪ್ರಬಲ ನಾಯಕ ಬಿ.ಜೆ. ಅಜಯಕುಮಾರ್ ಅವರನ್ನು ಭೇಟಿ ಮಾಡಿದರು. ಅಜಯಕುಮಾರ್ ಅವರೊಂದಿಗೆ ಮಾತುಕತೆ ನಡೆಸಿ, ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದರು. ಇದು ಕ್ಷೇತ್ರದಲ್ಲಿ ಬಣ ರಾಜಕಾರಣಕ್ಕೆ ಬ್ರೇಕ್ ಹಾಕಿ, ಎಲ್ಲರನ್ನೂ ಜೊತೆಯಲ್ಲಿ ಕೊಂಡೊಯ್ಯುವ ಶ್ರೀನಿವಾಸ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.

Related Articles

Related image1
ದಾವಣಗೆರೆ ದಕ್ಷಿಣ ಉಪಚುನಾವಣೆ 'ಬಿಜೆಪಿಯ ಮಾಸ್ಟರ್ ಪ್ಲಾನ್'ಗೆ ಕಾಂಗ್ರೆಸ್ ಕಂಗಾಲು; ಕೈ ಪಾಳಯದಲ್ಲೂ ಅಹಿಂದ ಜಪ!
Related image2
ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ
34
ಹರಿಹರ ಶಾಸಕ ಬಿ.ಪಿ. ಹರೀಶ್ ಭೇಟಿ
Image Credit : Asianet News

ಹರಿಹರ ಶಾಸಕ ಬಿ.ಪಿ. ಹರೀಶ್ ಭೇಟಿ

ನಂತರ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರನ್ನು ಭೇಟಿ ಮಾಡಿದ ಶ್ರೀನಿವಾಸ ದಾಸಕರಿಯಪ್ಪ, ಚುನಾವಣಾ ರಣತಂತ್ರದ ಬಗ್ಗೆ ಚರ್ಚಿಸಿ ಆಶೀರ್ವಾದ ಪಡೆದರು. ಜಿಲ್ಲೆಯ ಪ್ರಮುಖ ನಾಯಕರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಬಲಿಷ್ಠ ಅಡಿಪಾಯ ಹಾಕಲು ಅವರು ಮುಂದಾಗಿದ್ದಾರೆ.

ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ:

ಸಾಮಾನ್ಯ ಕ್ಷೇತ್ರವಾಗಿದ್ದರೂ ದಾವಣಗೆರೆ ದಕ್ಷಿಣದಲ್ಲಿ ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಬಿಜೆಪಿ ಮಣೆ ಹಾಕಿದೆ. ಇದು ಜಾತಿ ಸಮೀಕರಣದ ದೃಷ್ಟಿಯಿಂದ ಬಿಜೆಪಿಗೆ ಲಾಭ ತಂದುಕೊಡಬಹುದು ಎಂಬ ಲೆಕ್ಕಾಚಾರವಿದೆ. ಜಿ.ಎಂ. ಸಿದ್ದೇಶ್ವರ ಅಂತಹ ಪ್ರಭಾವಿ ನಾಯಕರ ಬೆಂಬಲ ಮತ್ತು ಅಜಯಕುಮಾರ್ ಅವರಂತಹ ಸ್ಥಳೀಯ ನಾಯಕರ ಒಮ್ಮತ ಸಿಕ್ಕರೆ ಕ್ಷೇತ್ರದಲ್ಲಿ ಕಮಲ ಅರಳುವುದು ಸುಲಭ ಎಂಬುದು ಕಾರ್ಯಕರ್ತರ ನಂಬಿಕೆಯಾಗಿದೆ.

44
ಒಗ್ಗಟ್ಟಿನ ಪ್ರದರ್ಶನಕ್ಕೆ ಮನವಿ
Image Credit : Asianet News

ಒಗ್ಗಟ್ಟಿನ ಪ್ರದರ್ಶನಕ್ಕೆ ಮನವಿ

ಒಟ್ಟಾರೆಯಾಗಿ, ಟಿಕೆಟ್ ಸಿಕ್ಕ ಮೊದಲ ದಿನವೇ ಶ್ರೀನಿವಾಸ ದಾಸಕರಿಯಪ್ಪ ಅವರು ಜಿಲ್ಲೆಯ ಪ್ರಮುಖ ನಾಯಕರ ಮನೆ ಬಾಗಿಲಿಗೆ ಹೋಗಿ ಆಶೀರ್ವಾದ ಪಡೆಯುವ ಮೂಲಕ 'ನಾವೆಲ್ಲರೂ ಒಂದು' ಎಂಬ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಗೊಂದಲದಲ್ಲಿರುವಾಗ, ಬಿಜೆಪಿ ಮಾತ್ರ ಈಗಿನಿಂದಲೇ ಚುನಾವಣಾ ಅಖಾಡದಲ್ಲಿ ಮುನ್ನಡೆ ಸಾಧಿಸಲು ಸಜ್ಜಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ರಾಜಕೀಯ
ರಾಜಕೀಯ ಸುದ್ದಿ
ದಾವಣಗೆರೆ ದಕ್ಷಿಣ
ಬಿಜೆಪಿ
Latest Videos
Recommended Stories
Recommended image1
ಯುಗಾದಿ ಹಬ್ಬ ಮಾಡುತ್ತಿದ್ದವರ ಮೇಲೆ ಆಸಿಡ್ ಎರಚಿದ ಸುಹಿಲ್ ಭಾಷಾ; ಮಗು ಸೇರಿ ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ!
Recommended image2
ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಅಣ್ಣ!
Recommended image3
ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಜನರನ್ನ ಶಿವನ ಪಾದ ಸೇರಿಸುತ್ತಾ BMTC? ಒಬ್ಬರಿಗೆ ಎಣ್ಣೆಕಿಕ್, ಮತ್ತೊಬ್ಬರಿಗೆ ಪಿಟ್ಸ್!
Related Stories
Recommended image1
ದಾವಣಗೆರೆ ದಕ್ಷಿಣ ಉಪಚುನಾವಣೆ 'ಬಿಜೆಪಿಯ ಮಾಸ್ಟರ್ ಪ್ಲಾನ್'ಗೆ ಕಾಂಗ್ರೆಸ್ ಕಂಗಾಲು; ಕೈ ಪಾಳಯದಲ್ಲೂ ಅಹಿಂದ ಜಪ!
Recommended image2
ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved