MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಹುಬ್ಬಳ್ಳಿ ಮನೆಗೆಂದು ಜಾಗ ಖರೀದಿಸಿ ಅಕ್ರಮವಾಗಿ ಮಸೀದಿ ನಿರ್ಮಾಣ; ರೊಚ್ಚಿಗೆದ್ದ ಜನರಿಂದ ದಿಡೀರ್ ಪ್ರತಿಭಟನೆ

ಹುಬ್ಬಳ್ಳಿ ಮನೆಗೆಂದು ಜಾಗ ಖರೀದಿಸಿ ಅಕ್ರಮವಾಗಿ ಮಸೀದಿ ನಿರ್ಮಾಣ; ರೊಚ್ಚಿಗೆದ್ದ ಜನರಿಂದ ದಿಡೀರ್ ಪ್ರತಿಭಟನೆ

ಹುಬ್ಬಳ್ಳಿಯ ಸವಣೂರು ಲೇಔಟ್‌ನಲ್ಲಿ ವಸತಿ ನಿವೇಶನದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪಾಲಿಕೆ ನೌಕರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನಿರ್ಮಾಣವನ್ನು ತಕ್ಷಣವೇ ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

2 Min read
Author : Sathish Kumar KH
Published : Mar 24 2026, 03:12 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಹುಬ್ಬಳ್ಳಿ-ಧಾರವಾಡ (ಮಾ.24): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈಗ ಅಕ್ರಮ ಮಸೀದಿ ನಿರ್ಮಾಣದ ವಿಚಾರವೊಂದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಗರದ ಗೋಕುಲ ರಸ್ತೆಯಲ್ಲಿರುವ ಸವಣೂರು ಲೇಔಟ್‌ನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

26
Image Credit : Asianet News

ಪ್ರತಿಭಟನಾಕಾರರ ಆರೋಪದ ಪ್ರಕಾರ, ಸುಮಾರು 3-4 ವರ್ಷಗಳ ಹಿಂದೆ ಸವಣೂರು ಲೇಔಟ್‌ನಲ್ಲಿ ಸಾಮಾನ್ಯ ನಿವೇಶನದ (Site) ಹೆಸರಿನಲ್ಲಿ ಜಾಗವನ್ನು ಖರೀದಿ ಮಾಡಲಾಗಿತ್ತು. ವಸತಿ ಉದ್ದೇಶಕ್ಕಾಗಿ ಜಾಗ ಪಡೆಯಲಾಗಿದೆ ಎಂದು ನಂಬಿಸಿ, ಈಗ ಅಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ವಸತಿ ಪ್ರದೇಶದಲ್ಲಿ ಧಾರ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಇರುವ ಕಾನೂನುಬದ್ಧ ನಿಯಮಗಳನ್ನು ಪಾಲಿಸದೆ ಈ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Related image1
ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈದ್ ಸಂಭ್ರಮಕ್ಕೆ ತೆರೆಯದ ಅಲ್‌ ಅಕ್ಸಾ ಮಸೀದಿ ಬಾಗಿಲು!
Related image2
ಮಂಗಳೂರು: ಉಳ್ಳಾಲ ಮಸೀದಿ ಎದುರು ಬಾಂಬ್ ಸ್ಪೋಟಿಸುವ ಬೆದರಿಕೆ, ಗಂಭೀರವಾಗಿ ಪರಿಗಣಿಸಿದ ಪೊಲೀಸರು
36
Image Credit : Asianet News

ಈ ಅಕ್ರಮ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳೇ ನೇರ ಹೊಣೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳೀಯರು ಆರಂಭದಿಂದಲೂ ಈ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮವಾಗಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಲು ಪಾಲಿಕೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.

46
Image Credit : Asianet News

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮುಂದೆಯೇ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಮಹಿಳೆಯರು, ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಪಟ್ಟು ಹಿಡಿದರು. ‘ವಸತಿ ಬಡಾವಣೆಗಳಲ್ಲಿ ಇಂತಹ ಅಕ್ರಮ ನಿರ್ಮಾಣಗಳಿಂದ ಶಾಂತಿ ಕದಡುತ್ತದೆ. ನಿವೇಶನ ಎಂದು ಹೇಳಿ ಈಗ ಪ್ರಾರ್ಥನಾ ಮಂದಿರ ಕಟ್ಟುತ್ತಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

56
Image Credit : Asianet News

ಸದ್ಯಕ್ಕೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಪ್ರತಿಭಟನಾಕಾರರು ಮಾತ್ರ ಪಟ್ಟು ಬಿಡುತ್ತಿಲ್ಲ. 'ಕೂಡಲೇ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಮಸೀದಿಯನ್ನು ತೆರವುಗೊಳಿಸಬೇಕು ಅಥವಾ ಕಾಮಗಾರಿ ನಿಲ್ಲಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ನಗರದಾದ್ಯಂತ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

66
Image Credit : Asianet News

ಇನ್ನು ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧಿಕಾರಿಗಳು ಈ ವಿವಾದಕ್ಕೆ ಹೇಗೆ ಅಂತ್ಯ ಹಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಧಾರವಾಡ
ಕರ್ನಾಟಕ ಸುದ್ದಿ
ಮಸೀದಿ
ಹುಬ್ಬಳ್ಳಿ
Latest Videos
Recommended Stories
Recommended image1
ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಗೆ ಜಿಬಿಎ ಹೊಸ ರೂಲ್ಸ್; ನಿಮ್ಮ ಆಸ್ತಿಯನ್ನ ಉಳಿಸಿಕೊಳ್ಳಲು ಲಾಸ್ಟ್ ಚಾನ್ಸ್!
Recommended image2
ಆನ್‌ಲೈನ್ ಗೇಮ್‌ ಸುಳಿಗೆ ಸಿಲುಕಿ ಜೀವ ಬಿಟ್ಟ ಬೀದರ್ MBBS ವಿದ್ಯಾರ್ಥಿ, ಬಡತನದಲ್ಲಿ ಓದಿಸಿದ್ದೆ ಸರ್ ತಂದೆ ಕಣ್ಣೀರು
Recommended image3
₹50 ಲಕ್ಷ ಇದ್ದರೆ ಸಾಕು ಬೆಂಗಳೂರಲ್ಲಿ ಸ್ವಂತ ಮನೆ ಮಾಲೀಕರಾಗಬಹುದು; ಈ ಏರಿಯಾದಲ್ಲಿ ಈಗಲೇ ಸರ್ಚ್ ಮಾಡಿ!
Related Stories
Recommended image1
ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈದ್ ಸಂಭ್ರಮಕ್ಕೆ ತೆರೆಯದ ಅಲ್‌ ಅಕ್ಸಾ ಮಸೀದಿ ಬಾಗಿಲು!
Recommended image2
ಮಂಗಳೂರು: ಉಳ್ಳಾಲ ಮಸೀದಿ ಎದುರು ಬಾಂಬ್ ಸ್ಪೋಟಿಸುವ ಬೆದರಿಕೆ, ಗಂಭೀರವಾಗಿ ಪರಿಗಣಿಸಿದ ಪೊಲೀಸರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved