ರಾಜ್ಯಾದ್ಯಂತ ಕೋವಿಡ್‌ ಕೇಂದ್ರ ಸ್ಥಾಪನೆ: ಸುಧಾಕರ್, ಇಲ್ಲಿವೆ ಫೋಟೋಸ್‌

First Published 20, Jun 2020, 11:31 AM

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಅವರು ಶುಕ್ರವಾರ ಜಿಲ್ಲಾ ಕೇಂದ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಜೊತೆಗೆ ಹೆಬ್ಬಾಳ ನಾಗವಾರ ಕೆರೆಗಳ ಸಂಸ್ಕರಿಸಿದ ತ್ಯಾಜ್ಯ ನೀರು ಹರಿಯುತ್ತಿರುವ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿವೆ ಫೋಟೋಸ್

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಅವರು ಶುಕ್ರವಾರ ಜಿಲ್ಲಾ ಕೇಂದ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಜೊತೆಗೆ ಹೆಬ್ಬಾಳ ನಾಗವಾರ ಕೆರೆಗಳ ಸಂಸ್ಕರಿಸಿದ ತ್ಯಾಜ್ಯ ನೀರು ಹರಿಯುತ್ತಿರುವ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಬಳ್ಳಾಪುರ ನಗರದ ಕೈಗಾರಿಕಾ ಸಂಕೀರ್ಣದಲ್ಲಿರುವ ರುದ್ರ ಭೂಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್‌ ಚಿತಾಗಾರ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಶುಕ್ರವಾರ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ವಿಶೇಷ ನಿಧಿಯಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿದ್ಯುತ್‌ ಚಿತಾಗಾರದಿಂದ ನಗರದ ಜನತೆ ಸದುಪಯೋಗವಾಗಲಿ ಎಂದರು.

ರಾಜ್ಯದಲ್ಲಿ ಕೊರೋನ ಸೋಂಕು ನಿವಾರಣೆಗಾಗಿ ಬೃಹತ್‌ ಮಟ್ಟದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರದಿಂದ ನೂತನ ಮಾರ್ಗಸೂಚಿಗಳನ್ನು ತಂದು ರಾಜ್ಯದಾದ್ಯಂತ ಕೋವಿಡ್‌ ಸೆಂಟರ್‌ಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಈ ಮೂಲಕ ಪ್ರತ್ಯೇಕ ಚಿಕಿತ್ಸೆ ನೀಡಿ ಸೋಂಕು ಹರಡುವಿಕೆಯನ್ನು ತಡೆಯಲಾಗುವುದು ಎಂದು ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟಕೆರೆಗೆ ಭೇಟಿ ನೀಡಿದ ಸಚಿವ ಸುಧಾಕರ್‌, ಹೆಬ್ಬಾಳ ನಾಗವಾರ ಕೆರೆಗಳ ಸಂಸ್ಕರಿಸಿದ ತ್ಯಾಜ್ಯ ನೀರು ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿದ್ದು, ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈಗಾಗಲೇ ತುಂಬಿದೆ. ಹಾಗಾಗಿ ತಾಲೂಕಿನ ಅಂಗಟ್ಟಕೆರೆಗೆ ಎಚ್‌ಎನ್‌ ವ್ಯಾಲಿ ನೀರು ಹರಿಯುತ್ತಿದ್ದು, ಈ ಕೆರೆಗೆ ಶುಕ್ರವಾರ ಸಚಿವ ಸುಧಾಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ ಶೇ.90ಕ್ಕೂ ಹೆಚ್ಚು ಮಂದಿ ಸೋಂಕಿತರಲ್ಲಿ ಯಾವುದೇ ರೀತಿಯ ಕೊರೋನಾ ಲಕ್ಷಣಗಳು ಕಂಡುಬಂದಿಲ್ಲ, ಆದರೂ ಅವರ ಮೇಲೆ ತೀವ್ರಗತಿ ದುಷ್ಪರಿಣಾಮ ಬೀರಿಲ್ಲ. ಆದರೂ ಸಾರ್ವಜನಿಕರು 60 ವರ್ಷದ ಮೇಲ್ಪಟ್ಟಹಿರಿಯರನ್ನ, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮತ್ತು ನಾನಾ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಜಾಗರೂಕತೆಯಿಂದ ನೋಡಿಕೊಳ್ಳಬೇಕಾಗಿದೆ, ಮುಂಜಾಗ್ರತ ಕ್ರಮ ವಹಿಸಿದರೆ ಕೋರೊನಾದಿಂದ ಪಾರಾಗಬಹುದಾಗಿದೆ ಎಂದು ಹೇಳಿದರು.

ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್‌. ಲತಾ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಜಿ.ಕೆ ಮಿಥುನ್‌ ಕುಮಾರ್‌, ಉಪವಿಭಾಗಾಧಿಕಾರಿ ರಘುನಂದನ್‌ ಸೇರಿಂದತೆ ಇತರರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ಕೊರೋನಾ ತಡೆಯುವುದರಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ, ಇದರಿಂದ ಜನರು ಜಾಗರೂಕತೆಯಿಂದ ಇರಬೇಕು ಕಡ್ಡಾಯವಾಗಿ ಮಾಸ್ಕ್‌ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು. ಇದರಿಂದ ಸೋಂಕಿನಿಂದ ಪಾರಾಗಲು ಸಾಧ್ಯವಾಗಲಿದ್ದು, ಪ್ರತಿಯೊಬ್ಬರೂ ಜೀವನ ಶೈಲಿ ಬದಲಿಸಿಕೊಳ್ಳುವ ಮೂಲಕ ಸೋಂಕಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.

undefined

loader