ಬಳ್ಳಾರಿ: ಕೋಲ್ಡ್ ಸ್ಟೋರೆಜ್‌ನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಅಪಾರ ಪ್ರಮಾಣದ ಮೆಣಸಿನಕಾಯಿ

First Published May 16, 2021, 11:12 AM IST

ಬಳ್ಳಾರಿ(ಮೇ.16): ಕೋಲ್ಡ್ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಣಸಿನಕಾಯಿ ಸುಟ್ಟು ಕರಕಲಾದ ಘಟನೆ ನಗರದಲ್ಲಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ.  ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಅಗಮಿಸಿ ಬೆಂಕಿ ನಂದಿಸಲು ಹರಸಾಹಹ ಪಡುತ್ತಿದ್ದಾರೆ. ಇಂದು ಬೆಳಿಗ್ಗಿನವರೆಗೂ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.