MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಭೀಕರ ಅಪಘಾತದಲ್ಲಿ ಐವರ ಸಾವು: ಯುವಕರು ಮದ್ಯಪಾನ ಮಾಡಿದ್ರಾ? ಪೊಲೀಸರು ಹೇಳಿದ್ದೇನು?

ಭೀಕರ ಅಪಘಾತದಲ್ಲಿ ಐವರ ಸಾವು: ಯುವಕರು ಮದ್ಯಪಾನ ಮಾಡಿದ್ರಾ? ಪೊಲೀಸರು ಹೇಳಿದ್ದೇನು?

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಮೂಲದ ಐವರು ಕಾರಿನಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

2 Min read
Author : Kannadaprabha News
Published : Feb 16 2026, 08:25 AM IST
Share this Photo Gallery
  • FB
  • TW
  • Linkdin
  • Whatsapp
18
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಐವರು ಸಾವು
Image Credit : Asianet News

ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಐವರು ಸಾವು

ಬೆಂಗಳೂರು: ತುಮಕೂರು ಕಡೆಯಿಂದ ಅತಿ ವೇಗವಾಗಿ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದುರ್ಗಾಪ್ರಸಾದ್‌(20), ಕೇಶವ್‌(19), ಲಲಿತ್‌(22) ಹರ್ಷಿತ್‌(20) ಮತ್ತು ಧನುಷ್‌(17) ಮೃತ ದುರ್ದೈವಿಗಳು.

ಶನಿವಾರ ರಾತ್ರಿ ಸುಮಾರು 11.30ಕ್ಕೆ ತುಮಕೂರು-ಬೆಂಗಳೂರು ಹೆದ್ದಾರಿಯ ಜಿಂದಾಲ್‌ ಆಸ್ಪತ್ರೆ ಸಮೀಪದ ಮೇಲ್ಸೇತುವೆಯಲ್ಲಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ, ನಿರ್ವಾಹಕ ಹಾಗೂ ಆರು ಮಂದಿಗೆ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

28
ಘಟನೆ ವಿವರ
Image Credit : Asianet News

ಘಟನೆ ವಿವರ

ಮೃತ ಐವರ ಪೈಕಿ ಹರ್ಷಿತ್‌ ಖಾಸಗಿ ಕಾಲೇಜಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಧನುಷ್‌ ದ್ವಿತೀಯ ಪಿಯುಸಿ ಓದುತ್ತಿದ್ದ. ಉಳಿದಂತೆ ದುರ್ಗಾ ಪ್ರಸಾದ್‌, ಕೇಶವ್‌, ಲಲಿತ್‌ ಕೆಲಸ ಮಾಡಿಕೊಂಡಿದ್ದವರು. ದೊಡ್ಡಬಳ್ಳಾಪುರ ಮೂಲದ ಈ ಐವರೂ ಸ್ನೇಹಿತರು. ಇತ್ತೀಚೆಗೆ ಲಲಿತ್‌ ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಿದ್ದ. ಶನಿವಾರ ರಾತ್ರಿ ಐವರು ಸ್ನೇಹಿತರು ಕಾರಿನಲ್ಲಿ ದೊಡ್ಡಬಳ್ಳಾಪುರ ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದರು.

Related Articles

Related image1
ಪುರಸಭೆ ಚುನಾವಣೆಯಲ್ಲಿ ಸೋಲು: ಕೊಟ್ಟ ಕುಕ್ಕರ್, ಹಣ ವಾಪಸ್ ಕೇಳಿದ ಕಾಂಗ್ರೆಸ್ ಅಭ್ಯರ್ಥಿ!
Related image2
ಬೇಡವಾಗಿದ್ದ ಗಂಡ, ಬೇಕಿದ್ದ ಡೇವಿಡ್: ಪೊಲೀಸರ ಮುಂದೆ ಇಂಚಿಂಚು ಲವ್ ಕಹಾನಿ ಹೇಳಿದ ಪ್ರಿಯಾಂಕಾ
38
ತುಮಕೂರು-ಬೆಂಗಳೂರು ಹೆದ್ದಾರಿ ಮೇಲ್ಸೇತುವೆ
Image Credit : Asianet News

ತುಮಕೂರು-ಬೆಂಗಳೂರು ಹೆದ್ದಾರಿ ಮೇಲ್ಸೇತುವೆ

ತಡರಾತ್ರಿ ತುಮಕೂರು-ಬೆಂಗಳೂರು ಹೆದ್ದಾರಿ ಮೇಲ್ಸೇತುವೆಯಲ್ಲಿ ಕೇಶವ್‌ ವೇಗವಾಗಿ ಕಾರು ಚಲಾಯಿಸಿಕೊಂಡು ಬರುವಾಗ ಜಿಂದಾಲ್ ಆಸ್ಪತ್ರೆ ಬಳಿ ನಿಯಂತ್ರಣ ತಪ್ಪಿದ ಕಾರು, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದೆ. ಇದೇ ಸಮಯಕ್ಕೆ ಬೆಂಗಳೂರಿನಿಂದ ತುಮಕೂರು ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗಜ್ಜಾಗಿದ್ದು, ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

48
ಬಸ್‌ ಪ್ರಯಾಣಿಕರು ಸೇಫ್‌
Image Credit : Asianet News

ಬಸ್‌ ಪ್ರಯಾಣಿಕರು ಸೇಫ್‌

ಘಟನೆಯಲ್ಲಿ ಕೆಎಸ್ಆರ್‌ಟಿಸಿ ಬಸ್‌ ಮುಂಭಾಗದ ಗಾಜು ಒಡೆದು ಜಖಂ ಆಗಿದೆ. ಕಾರು ಗುದ್ದಿದ ರಭಸಕ್ಕೆ ಬಸ್‌ ಚಾಲಕ, ನಿರ್ವಾಹಕ ಸೇರಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಳಿಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 43 ಮಂದಿ ಪ್ರಯಾಣಿಕರಿದ್ದರು. ಉಳಿದ ಪ್ರಯಾಣಿಕರಿಗೆ ಬೇರೆ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

58
ಪೊಲೀಸರಿಂದ ತನಿಖೆ
Image Credit : Asianet News

ಪೊಲೀಸರಿಂದ ತನಿಖೆ

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಮೇಲ್ಸೇತುವೆಯಲ್ಲಿ ಜಖಂ ಆಗಿದ್ದ ಬಸ್‌ ಮತ್ತು ಕಾರು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

68
ಘಟನೆ ಕುರಿತು ತನಿಖೆ: ಜಂಟಿ ಪೊಲೀಸ್‌ ಆಯುಕ್ತ ರೆಡ್ಡಿ
Image Credit : Asianet News

ಘಟನೆ ಕುರಿತು ತನಿಖೆ: ಜಂಟಿ ಪೊಲೀಸ್‌ ಆಯುಕ್ತ ರೆಡ್ಡಿ

ಅಪಘಾತದ ಹಿನ್ನೆಲೆಯಲ್ಲಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಕಾರ್ತಿಕ್‌ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶನಿವಾರ ರಾತ್ರಿ ಸುಮಾರು 11.30ಕ್ಕೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂಡಿಕಾ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಬಸ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇಶವ್‌ ಎಂಬಾತ ಕಾರು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. 

ಕಾರು ಚಾಲನೆ ವೇಳೆ ಮದ್ಯಪಾನ ಮಾಡಿದ್ದರಾ ಅಥವಾ ಇಲ್ಲವಾ ಎಂಬ ಬಗ್ಗೆ ಪರಿಶೀಲಿಸಲು ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಮೃತರಿಗೆ ಅಪರಾಧದ ಹಿನ್ನೆಲೆ ಇತ್ತಾ? ಎಂಬುದರ ಬಗ್ಗೆಯೂ ತನಿಖೆ ಮಾಡುವುದಾಗಿ ಹೇಳಿದರು.

78
ಆಸ್ಪತ್ರೆ ಬಳಿ ಮೃತರ ಪೋಷಕರ ಆಕ್ರಂದನ
Image Credit : Asianet News

ಆಸ್ಪತ್ರೆ ಬಳಿ ಮೃತರ ಪೋಷಕರ ಆಕ್ರಂದನ

ನೆಲಮಂಗಲದ ಸರ್ಕಾರಿ ಆಸ್ಪತ್ರೆ ಬಳಿ ಐವರು ಮೃತರ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ನೇಹಿತನನ್ನು ಭೇಟಿಯಾಗಿ ಬರುವುದಾಗಿ ಹೇಳಿ ಬಂದವನು ಈಗ ಮೃತಪಟ್ಟಿದ್ದಾನೆ ಎಂದು ಮೃತ ಹರ್ಷಿತ್‌ ತಾಯಿ ಗೋಳಾಡಿದರು. ಹತ್ತೇ ನಿಮಿಷದಲ್ಲಿ ಬರುತ್ತೇನೆಂದು ಮನೆಯಿಂದ ಬಂದವನು ಬಾರದ ಲೋಕಕ್ಕೆ ಹೋಗಿದ್ದಾನೆ ಎಂದು ಮೃತ ದುರ್ಗಾಪ್ರಸಾದ್‌ ತಾಯಿ ಕಣ್ಣೀರಿಟ್ಟರು.

88
 ಮೃತ ಧನುಷ್‌ ತಂದೆ
Image Credit : Asianet News

ಮೃತ ಧನುಷ್‌ ತಂದೆ

ರಾತ್ರಿ ಅಮ್ಮ ಮತ್ತು ತಮ್ಮನನ್ನು ಬೇಕರಿಗೆ ಕರೆದೊಯ್ದು ಸ್ವೀಟ್‌ ಕೊಡಿಸಿ ಮನೆಯಿಂದ ಹೊರ ಬಂದಿದ್ದ ಮಗ ಈಗ ಶವವಾಗಿ ಮಲಗಿದ್ದಾನೆ ಎಂದು ಮೃತ ಧನುಷ್‌ ತಂದೆ ಗೋಳಾಡಿದರು. ಮೃತ ಲಲಿತ್‌ ತಾಯಿ ಆಕ್ರಂದನವಂತೂ ಮುಗಿಲು ಮುಟ್ಟಿತ್ತು. ಮೃತ ಯುವಕರ ಕುಟುಂಬದ ಸದಸ್ಯರ ಗೋಳಾಟ ನೋಡುಗರನ್ನು ಭಾವುಕರಾಗಿಸಿತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
ಅಪಘಾತ
ಕೆಎಸ್ಆರ್ಟಿಸಿ

Latest Videos
Recommended Stories
Recommended image1
ಬೇಡವಾಗಿದ್ದ ಗಂಡ, ಬೇಕಿದ್ದ ಡೇವಿಡ್: ಪೊಲೀಸರ ಮುಂದೆ ಇಂಚಿಂಚು ಲವ್ ಕಹಾನಿ ಹೇಳಿದ ಪ್ರಿಯಾಂಕಾ
Recommended image2
ಬಿಡಿಎ ಖಾಲಿ ನಿವೇಶನಗಳ ದಂಡದ ಶುಲ್ಕ ಇಳಿಕೆ
Recommended image3
₹400 ಕೋಟಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು; ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ?
Related Stories
Recommended image1
ಪುರಸಭೆ ಚುನಾವಣೆಯಲ್ಲಿ ಸೋಲು: ಕೊಟ್ಟ ಕುಕ್ಕರ್, ಹಣ ವಾಪಸ್ ಕೇಳಿದ ಕಾಂಗ್ರೆಸ್ ಅಭ್ಯರ್ಥಿ!
Recommended image2
ಬೇಡವಾಗಿದ್ದ ಗಂಡ, ಬೇಕಿದ್ದ ಡೇವಿಡ್: ಪೊಲೀಸರ ಮುಂದೆ ಇಂಚಿಂಚು ಲವ್ ಕಹಾನಿ ಹೇಳಿದ ಪ್ರಿಯಾಂಕಾ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved