ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗೆ ಹೀಗೊಂದು ಗೌರವ

First Published Jun 11, 2020, 2:59 PM IST

ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ನಡೆಸಿದ ವೈದ್ಯರು, ಪೊಲೀಸರು, ಆರೋಗ್ಯ ಕಾರ್ಯಕರ್ತರು, ಪೌರಕಾರ್ಮಿಕರು ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕೋವಿಡ್‌- 19 ಮಹಾಮಾರಿಯ ವಿರುದ್ಧ ಹೋರಾಟ ನಡೆಸಿದವರ ಪುಷ್ಪ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಲಾಗುತ್ತಿದೆ.  ಫ್ಲವರ್ ಕೌನ್ಸಿಲ್‌ ಆಫ್ ಇಂಡಿಯಾ ಹಾಗೂ ಝೀಹ್ ವಿಡ್ಡಿಂಗ್ಸ್ ಸಂಸ್ಥೆಗಳ ಸಹಯೋಗದಲ್ಲಿ ವಿಭಿನ್ನ ಮಾದರಿಯಲ್ಲಿ ಕೊರೋನಾ ಸೋಂಕು ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದವರಿಗೆ ಈ ಗೌರವವನ್ನು ನೀಡಲಾಗುತ್ತಿದೆ. ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಹೂವಿನ ಅಲಂಕಾರವನ್ನು ಮಾಡಲಾಗಿದ್ದು, ಕನ್ನಡ ಪ್ರಭ ಛಾಯಚಿತ್ರಗಾರ ವೀರಮಣಿ ಅವರು ಕ್ಲಿಕ್ಕಿಸಿದ ಕೆಲ ಫೋಟೋಗಳು ಇಲ್ಲಿವೆ ನೋಡಿ.