- Home
- Karnataka Districts
- ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
Car-KSRTC Bus Accident: ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳಿಂದ ಅಂಗಾಂಗಗಳು ಹೊರಬಂದು ಚೆಲ್ಲಾಪಿಲ್ಲಿಯಾಗಿವೆ. ಮೃತ ಮೂವರು ಕಾರ್ ಪ್ರಯಾಣಿಕರಾಗಿದ್ದಾರೆ.

ಭೀಕರ ಅಪಘಾತ
ಕಾರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳಿಂದ ಅಂಗಾಂಗಗಳು ಹೊರಬಂದು ಚೆಲ್ಲಾಪಿಲ್ಲಿಯಾಗಿವೆ. ಮೃತ ಮೂವರು ಕಾರ್ ಪ್ರಯಾಣಿಕರಾಗಿದ್ದಾರೆ.
ಸಾರಿಗೆ ಬಸ್‌ಗೆ ಡಿಕ್ಕಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರವಾದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್, ಡಿವೈಡರ್ ಹಾರಿ ಪಕ್ಕದ ರಸ್ತೆಯಲ್ಲಿ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅತಿಯಾದ ವೇಗ
KA 50 MA 0789 ಸಂಖ್ಯೆಯ ಕಾರ್ ವೇಗವಾಗಿ ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿಯತ್ತ ತೆರಳುತ್ತಿತ್ತು. ಮೃತರನ್ನು ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಅತಿಯಾದ ವೇಗ ಕಾರಣ ಎಂದು ಹೇಳಲಾಗುತ್ತಿದೆ.
ಟ್ರಾಫಿಕ್
ಗಾಯಗೊಂಡು ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತದಿಂದಾಗಿ ಟ್ರಾಫಿಕ್ ತಿಳಿಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ಮಾಡ್ತಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
