- Home
- Karnataka Districts
- ನೇಣಿಗೆ ಕೊರಳೊಡ್ಡಿದ ಪತ್ನಿ, ವಿಷ ಸೇವಿಸಿದ ಗಂಡ; ಪ್ರೀತಿಸಿ ಮದ್ವೆಯಾದ ಜೋಡಿ ಬಾಳಲ್ಲಿ ದುರಂತ
ನೇಣಿಗೆ ಕೊರಳೊಡ್ಡಿದ ಪತ್ನಿ, ವಿಷ ಸೇವಿಸಿದ ಗಂಡ; ಪ್ರೀತಿಸಿ ಮದ್ವೆಯಾದ ಜೋಡಿ ಬಾಳಲ್ಲಿ ದುರಂತ
ಪತ್ನಿ ನೇಣುಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಪತಿ ಕೂಡ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾನೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿಯ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎಂದು ಹೇಳಲಾಗಿದ್ದು, ಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮ
ಪತ್ನಿ ನೇಣುಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದ ಗಂಡ ಸಹ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಡ ಆಸ್ಪತ್ರೆಗೆ ದಾಖಲು
ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಸಾವು ನೋಡಿದ ಪತಿ ಲಗಮಣ್ಣ ಹೆಗ್ಗನ್ನವರ್ (27) ವಿಷ ಸೇವಿಸಿದ್ದಾರೆ.
ವಿಷ ಸೇವಿಸಿದ್ದ ಲಗಮಣ್ಣನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಉಮಾಶ್ರೀ ಮತ್ತು ಲಗಮಣ್ಣ ಜಗಳವಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಲಹ
ಉಮಾಶ್ರೀ ಹಾಗೂ ಲಗಮಣ್ಣ ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಸಂಬಂಧಿಗಳಾಗಿದ್ದರಿಂದ ಕುಟುಂಬಸ್ಥುರು ಇಬ್ಬರ ಮದುವೆಗೆ ಒಪ್ಪಿದ್ದರು. ಕೌಟುಂಬಿಕ ಕಲಹದಿಂದ ನೊಂದ ಉಮಾಶ್ರೀ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವರ್ಷಾಚರಣೆ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆಯತ್ನ : 8.73 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಸಂಬಂಧಿಯ ಹೇಳಿಕೆ
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಂಬಂಧಿ ಸತ್ಯಪ್ಪ, ಒಂದೂವರೆ ವರ್ಷದ ಹಿಂದೆಯೇ ಇಬ್ಬರು ಪ್ರೀತಿಸಿ ಮದುವೆಯಾಗಿ ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಮೊದಲು ಉಮಾಶ್ರೀ ನೇಣು ಬಿಗಿದುಕೊಂಡಿದ್ದಾಳೆ. ಪತ್ನಿ ಸಾವು ನೋಡಿ ಆಘಾತಕ್ಕೊಳಗಾದ ಲಗಮಣ್ಣ ವಿಷ ಸೇವಿಸಿದ್ದಾನೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಈ ಘಟನೆಗೆ ಕಾರಣ ನಮಗೆ ಗೊತ್ತಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಮದ್ವೆಯಾದ್ರೂ ಬೇರೆಯವಳೊಟ್ಟಿಗೆ ಲಿವಿಂಗ್ ಟುಗೆದರ್, ಅವಳ ತಂಗಿಗೆ ದೌರ್ಜನ್ಯ

