MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ವೇಳಾಪಟ್ಟಿ ಬದಲಾಗಲಿದೆಯೇ? ಕರಾವಳಿ ಜನರ ಕೂಗು ಇಲ್ಲಿದೆ...

ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ವೇಳಾಪಟ್ಟಿ ಬದಲಾಗಲಿದೆಯೇ? ಕರಾವಳಿ ಜನರ ಕೂಗು ಇಲ್ಲಿದೆ...

ಮಂಗಳೂರು-ಯಶವಂತಪುರ (ಬೆಂಗಳೂರು) ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಬದಲಾಯಿಸುವಂತೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಒತ್ತಾಯಿಸಿದೆ. ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಈ ರೈಲು ಮುಂಜಾನೆ ಮಂಗಳೂರಿನಿಂದಲೇ ಹೊರಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿದೆ.

2 Min read
Author : Sathish Kumar KH
Published : Sep 21 2026, 08:33 AM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಶೀಘ್ರದಲ್ಲೇ ಆರಂಭವಾಗಲಿರುವ ಮಂಗಳೂರು ಸೆಂಟ್ರಲ್-ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿಯನ್ನು ಪರಿಷ್ಕರಿಸಿ, ಮಂಗಳೂರಿನಿಂದಲೇ ಮುಂಜಾನೆ ಸೇವೆಯನ್ನು ಪ್ರಾರಂಭಿಸುವಂತೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಹಾಗೂ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಮನವಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
Image Credit : Asianet News

ಪ್ರಸ್ತುತ ಪ್ರಸ್ತಾಪಿಸಲಾಗಿರುವ ವೇಳಾಪಟ್ಟಿಯ ಪ್ರಕಾರ, ರೈಲು ಯಶವಂತಪುರದಿಂದ ಬೆಳಗ್ಗೆ 7.00 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದ್ದು, ಮರುಪ್ರಯಾಣದಲ್ಲಿ ಮಂಗಳೂರಿನಿಂದ ಸಂಜೆ 3.00 ಗಂಟೆಗೆ ಹೊರಟು ರಾತ್ರಿ 10.30ಕ್ಕೆ ಯಶವಂತಪುರ ತಲುಪುವ ನಿರೀಕ್ಷೆಯಿದೆ.

ಆದರೆ ಈ ವೇಳಾಪಟ್ಟಿಯಿಂದಾಗಿ ಕಚೇರಿ, ವಾಣಿಜ್ಯ ಹಾಗೂ ಇತರೆ ತುರ್ತು ಕೆಲಸಗಳಿಗಾಗಿ ಮಂಗಳೂರು ಮತ್ತು ಕರಾವಳಿ ಕರ್ನಾಟಕದಿಂದ ಬೆಂಗಳೂರಿಗೆ ಹಗಲಿನ ವೇಳೆ ಪ್ರಯಾಣಿಸುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

Related Articles

Related image1
ಬೆಂಗಳೂರು-ಮಂಗಳೂರು ವಂದೇ ಭಾರತ್ 2ನೇ ಟ್ರಯಲ್ ರನ್ ಯಶಸ್ವಿ: ಪುತ್ತೂರಲ್ಲಿ ನಿಲ್ಲದೆ ನಿರಾಸೆ ಮೂಡಿಸಿದ ರೈಲು!
Related image2
ಬದಲಾಗುತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಮಾರ್ಗ: 12 ರೈಲುಗಳ ನಿಲುಗಡೆಗೆ ಆಗ್ರಹ!
38
Image Credit : Asianet News

ಆದ್ದರಿಂದ ವಂದೇ ಭಾರತ್ ರೈಲು ಸೇವೆಯನ್ನು ಮಂಗಳೂರು ಸೆಂಟ್ರಲ್‌ನಿಂದ ಬೆಳಗ್ಗೆ ಸುಮಾರು 5.45ಕ್ಕೆ ಹೊರಟು, ಮಧ್ಯಾಹ್ನ ಸುಮಾರು 1.00 ಗಂಟೆಗೆ ಯಶವಂತಪುರ ತಲುಪುವಂತೆ ರೂಪಿಸಬೇಕು. ಮರುಪ್ರಯಾಣದಲ್ಲಿ ಯಶವಂತಪುರದಿಂದ ಸಂಜೆ ಸುಮಾರು 4.00 ಗಂಟೆಗೆ ಹೊರಟು ರಾತ್ರಿ 11.00ರ ಸುಮಾರಿಗೆ ಮಂಗಳೂರು ಸೆಂಟ್ರಲ್ ತಲುಪುವಂತೆ ವೇಳಾಪಟ್ಟಿ ನಿಗದಿಪಡಿಸಬೇಕು ಎಂದು ಸಮಿತಿ ವಿನಂತಿಸಿದೆ.

48
Image Credit : others

ಮಂಗಳೂರಿನಿಂದ ಮುಂಜಾನೆಯೇ ರೈಲು ಸಂಚರಿಸಿದರೆ ಪ್ರಯಾಣಿಕರು ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪಿ, ತಮ್ಮ ಕಚೇರಿ ಹಾಗೂ ವಾಣಿಜ್ಯ ಕೆಲಸಗಳನ್ನು ಮುಗಿಸಿಕೊಂಡು ಅದೇ ದಿನ ರಾತ್ರಿ ರೈಲುಗಳಲ್ಲಿ ಮಂಗಳೂರಿಗೆ ಹಿಂತಿರುಗಲು ಸಾಧ್ಯವಾಗುತ್ತದೆ. ಇದರಿಂದ ಬೆಂಗಳೂರಿಗೆ ಹಗಲಿನ ಸಂಪರ್ಕ ಬಯಸುವ ಪ್ರಯಾಣಿಕರಿಗೆ ಈ ರೈಲು ಹೆಚ್ಚು ಉಪಯುಕ್ತವಾಗಲಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

58
Image Credit : Asianet News

ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ತಿರುವನಂತಪುರಂ-ಮಂಗಳೂರು ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನಿಂದ ಮುಂಜಾನೆ ಹೊರಟು, ರಾತ್ರಿ ಮರಳಿ ಆಗಮಿಸುವ ಮಾದರಿಯಲ್ಲೇ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಭಾಗದ ಜನರ ಪ್ರಯಾಣದ ಅಗತ್ಯತೆಗಳನ್ನು ಪೂರೈಸಲು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗೂ ಇದೇ ಮಾದರಿಯ ಕಾರ್ಯಾಚರಣೆ ಜಾರಿಗೊಳಿಸಬೇಕು ಎಂದು ಸಮಿತಿ ಗಮನಸೆಳೆದಿದೆ.

68
Image Credit : Asianet News

ಮಂಗಳೂರು ರೈಲ್ವೆ ಜಾಲ ಅಕ್ಟೋಬರ್ 1 ರಿಂದ ನೈರುತ್ಯ ರೈಲ್ವೆ ವ್ಯಾಪ್ತಿಗೆ ಒಳಪಡಲಿದೆ. ನಂತರ ಈ ರೈಲಿನ ಸಂಪೂರ್ಣ ಕಾರ್ಯಾಚರಣೆ ಮತ್ತು ನಿರ್ವಹಣೆ ಒಂದೇ ರೈಲ್ವೆ ವಲಯ (ಮೈಸೂರು ವಿಭಾಗದ) ಅಡಿಯಲ್ಲಿ ಬರಲಿದೆ. ಆದ್ದರಿಂದ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅದನ್ನು ಪರಿಹರಿಸಿ ಮಂಗಳೂರು ಸೆಂಟ್ರಲ್‌ನಿಂದಲೇ ಬೆಳಗ್ಗೆ ಆರಂಭಿಸುವಂತೆ ಆಗ್ರಹಿಸಲಾಗಿದೆ.

78
Image Credit : Asianet News

ಮಂಗಳೂರು ಹಾಗೂ ಸಮಗ್ರ ಕರಾವಳಿ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟಿಸುವ ಮುನ್ನ ಈ ಸಮಯ ಪರಿಷ್ಕರಣೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯು ರೈಲ್ವೆ ಸಚಿವಾಲಯ ಹಾಗೂ ನೈರುತ್ಯ ರೈಲ್ವೆಗೆ ಮನವಿ ಮಾಡಿದೆ.

88
Image Credit : X

ರೈಲ್ವೆ ಬಳಕೆದಾರರ ವೇದಿಕೆ ಕೋರಿದ ವೇಳಾಪಟ್ಟಿ:

  • ಮಂಗಳೂರು ಸೆಂಟ್ರಲ್ → ಯಶವಂತಪುರ
  • ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಡುವ ಸಮಯ: ಬೆಳಗ್ಗೆ 5.45
  • ಯಶವಂತಪುರ ಜುಂಕ್ಷನ್ ತಲುಪುವ ಸಮಯ: ಮಧ್ಯಾಹ್ನ 1.00
  • ಯಶವಂತಪುರ → ಮಂಗಳೂರು ಸೆಂಟ್ರಲ್
  • ಯಶವಂತಪುರ ಜಂಕ್ಷನ್ ರೈಲು ನಿಲ್ದಾಣದಿಂದ ಹೊರಡುವ ಸಮಯ: ಸಂಜೆ 4.00
  • ಮಂಗಳೂರು ಸೆಂಟ್ರಲ್ ತಲುಪುವ ಸಮಯ: ರಾತ್ರಿ 11.30

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ವಂದೇ ಭಾರತ್ ಎಕ್ಸ್‌ಪ್ರೆಸ್
ಮಂಗಳೂರು
ಬೆಂಗಳೂರು
ಭಾರತೀಯ ರೈಲ್ವೆ
 

Latest Videos
Recommended Stories
Recommended image1
ಪೋಷಕರೇ ಎಚ್ಚರ! ಸಿರಪ್ ಕುಡಿದ ಕೆಲವೇ ಹೊತ್ತಲ್ಲಿ ಮಗು ಅನುಮಾನಾಸ್ಪದ ಸಾವು
Recommended image2
‘ಪ್ರೇಮದ ಊರಲಿ’ಗೂ ‘ಬೃಂದಾವಿಹಾರಿ’ಗೂ ಏನು ಸಂಬಂಧ? ಗೋಲ್ಡನ್ ಸ್ಟಾರ್ ಗಣೇಶ್ ಏನ್ ಹೇಳಿದ್ರು?
Recommended image3
Chikkaballapura: ಸೈಬರ್‌ಸೈಕಾಲಜಿ ಕ್ಷೇತ್ರದಲ್ಲಿ ಅಪರೂಪದ ಸಾಧನೆ, ವಿಶ್ವದ ಅಗ್ರ ವಿಜ್ಞಾನಿಗಳ ಸಾಲಿನಲ್ಲಿ ಚಿಕ್ಕಬಳ್ಳಾಪುರದ ಡಾ. ಮೆನನ್
Related Stories
Recommended image1
ಬೆಂಗಳೂರು-ಮಂಗಳೂರು ವಂದೇ ಭಾರತ್ 2ನೇ ಟ್ರಯಲ್ ರನ್ ಯಶಸ್ವಿ: ಪುತ್ತೂರಲ್ಲಿ ನಿಲ್ಲದೆ ನಿರಾಸೆ ಮೂಡಿಸಿದ ರೈಲು!
Recommended image2
ಬದಲಾಗುತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಮಾರ್ಗ: 12 ರೈಲುಗಳ ನಿಲುಗಡೆಗೆ ಆಗ್ರಹ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved