MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • V Somanna: ಬೆಂಗಳೂರು -ಮಂಗಳೂರಿಗೆ ಜೂನ್ 3ರಿಂದ ವಂದೇ ಭಾರತ್‌ ರೈಲು ಪ್ರಾಯೋಗಿಕ ಓಟ ಆರಂಭ

V Somanna: ಬೆಂಗಳೂರು -ಮಂಗಳೂರಿಗೆ ಜೂನ್ 3ರಿಂದ ವಂದೇ ಭಾರತ್‌ ರೈಲು ಪ್ರಾಯೋಗಿಕ ಓಟ ಆರಂಭ

ಬೆಂಗಳೂರಿನಿಂದ ಮಂಗಳೂರಿಗೆ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವು ಜೂನ್ 3 ರಿಂದ ಆರಂಭವಾಗಲಿದೆ. ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವಿನ ವಿದ್ಯುದೀಕರಣ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಸೇವೆ ಸಾಧ್ಯವಾಗಿದ್ದು, ಮುಂದಿನ 15-20 ದಿನಗಳಲ್ಲಿ ಪೂರ್ಣ ಪ್ರಮಾಣದ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

2 Min read
Author : Kannadaprabha News
Published : Jun 01 2026, 08:28 AM IST
Share this Photo Gallery
  • FB
  • TW
  • Linkdin
  • Whatsapp
16
ಜೂನ್ 3 ರಿಂದ ವಂದೇ ಭಾರತ್
Image Credit : V Somanna FB

ಜೂನ್ 3 ರಿಂದ ವಂದೇ ಭಾರತ್

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ಜೂನ್ 3 ರಿಂದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭಿಸಲಾಗುತ್ತಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ‌ ಸಚಿವ ವಿ.ಸೋಮಣ್ಣ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಬೆಂಗಳೂರಿನಿಂದ‌ ಮಂಗಳೂರಿಗೆ, ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು
Image Credit : V Somanna FB

ಬೆಂಗಳೂರಿನಿಂದ‌ ಮಂಗಳೂರಿಗೆ, ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು

ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಭಾನುವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ‌ನೆರವೇರಿಸಿ ಮಾತನಾಡಿ ರಾಜ್ಯದಲ್ಲಿ ಶೇ.99 ರಷ್ಟು ವಿದ್ಯುದೀಕರಣ ಪೂರ್ಣಗೊಂಡಿದ್ದು, ಕೇವಲ ಶೇ.1 ರಷ್ಟು ಬಾಕಿ ಇದೆ. ಸಕಲೇಶಪುರದಿಂದ ಕುಕ್ಕೆ ಸುಬ್ರಮಣ್ಯದ ವರೆಗೆ 55 ಕಿ.ಮೀ ವಿದ್ಯುದೀಕರಣ ಬಾಕಿ ಇತ್ತು.‌ ನಾಲ್ಕೈದು ಬಾರಿ ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ, ಸಮಸ್ಯೆ ಪರಿಹರಿಸಿ ಇದೀಗ ಪೂರ್ಣಗೊಳಿಸಲಾಗಿದೆ.

 ಜೂ‌ನ್ 3 ರಿಂದ ಪ್ರಾಯೋಗಿಕವಾಗಿ ವಂದೇ ಭಾರತ್ ರೈಲು ಸಂಚಾರ ಆರಂಭ ವಾಗಲಿದ್ದು, ಮುಂದಿ‌ನ 15 ರಿಂದ 20 ದಿನದಲ್ಲಿ ಬೆಂಗಳೂರಿನಿಂದ‌ ಮಂಗಳೂರಿಗೆ, ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

Related Articles

Related image1
ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್‌ಗೆ ಡಿಮ್ಯಾಂಡ್
Related image2
ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ, 3,300 ಕೋಟಿ ರು. ಯೋಜನಾ ವೆಚ್ಚ, ವಂದೇ ಭಾರತ್ ಶೀಘ್ರ!
36
 14 ಜಿಲ್ಲೆಗಳಲ್ಲಿ ವಂದೇ ಭಾರತ್ ರೈಲು
Image Credit : V Somanna FB

14 ಜಿಲ್ಲೆಗಳಲ್ಲಿ ವಂದೇ ಭಾರತ್ ರೈಲು

ಸದ್ಯ12 ವಂದೇ ಭಾರತ್ ರೈಲು ರಾಜ್ಯದ 14 ಜಿಲ್ಲೆಗಳಲ್ಲಿ ಸಂಚಾರ ಮಾಡುತ್ತಿವೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚಾರ ಮಾಡುವ 13 ನೇ ವಂದೇ ಭಾರತ್ ರೈಲು ಶೀಘ್ರದಲ್ಲಿ ಸೇರ್ಪಡೆಯಾಗಲಿದೆ. ಇನ್ನೂ ಮಂಜೂರಾದ 6 ಅಮೃತ್ ಭಾರತ್ ರೈಲು ಪೈಕಿ ಐದು ರಾಜ್ಯದಲ್ಲಿ ಸಂಚಾರ ಮಾಡುತ್ತಿವೆ. ಸುರಕ್ಷತೆ ದೃಷ್ಟಿಯಿಂದ ರಾಜ್ಯದ ರೈಲ್ವೆ ನಿಲ್ದಾಣದಲ್ಲಿ 835 ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ ಎಂದು ತಿಳಿಸಿದರು.

46
3,840 ಕಿ.ಮೀ ಹೊಸ ರೈಲ್ವೆ ಮಾರ್ಗ ನಿರ್ಮಾಣ
Image Credit : V Somanna FB

3,840 ಕಿ.ಮೀ ಹೊಸ ರೈಲ್ವೆ ಮಾರ್ಗ ನಿರ್ಮಾಣ

10 ರಿಂದ 15 ದಿನದಲ್ಲಿ ಅರಸೀಕೆರೆ ಯಿಂದ ಬೆಂಗಳೂರಿಗೆ ಮೆಮೋ ರೈಲು ಸಂಚಾರ ಆರಂಭಿಸಲಿದ್ದೇವೆ. ಅರಸೀಕೆರೆಯಿಂದ ಬೆಂಗಳೂರಿಗೆ ಕೇವಲ ₹35 ರು. ದರ‌ ನಿಗದಿ‌‌ಪಡಿಸಲಾಗಿದೆ ಎಂದರು. ಕೋವಿಡ್ ಅವಧಿಯಲ್ಲಿ ರಾಜ್ಯದಲ್ಲಿ ನಿಂತು ಹೋಗಿದ್ದ‌ 30 ರೈಲುಗಳನ್ನು ಪುನರ್ ಆರಂಭಿಸಲಾಗಿದೆ. ರಾಜ್ಯದ 61 ರೈಲ್ವೆ‌ ನಿಲ್ದಾಣ‌ಗಳಲ್ಲಿ ₹2 ಸಾವಿರ ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ರೈಲ್ವೆ ಸಚಿವನಾದ ಬಳಿಕ 3,840 ಕಿ.ಮೀ ಹೊಸ ರೈಲ್ವೆ ಮಾರ್ಗ ನಿರ್ಮಾಣ ಮಾಡಲಾಗಿದೆ. 31 ಹೊಸ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ ಎಂದು‌‌ ಮಾಹಿತಿ ನೀಡಿದರು..

56
 ₹52,900 ಕೋಟಿ ವೆಚ್ಚದ ಯೋಜನೆ
Image Credit : V Somanna FB

₹52,900 ಕೋಟಿ ವೆಚ್ಚದ ಯೋಜನೆ

ಕೇಂದ್ರ ಸರ್ಕಾರ 2026-27ನೇ ಸಾಲಿಗೆ ಕರ್ನಾಟಕಕ್ಕೆ ರೈಲ್ವೆ ಅಭಿವೃದ್ಧಿಗೆ ₹7748 ಕೋಟಿ ಅನುದಾನ ನೀಡಿದೆ. ಹಿಂದೆ ಇದ್ದ ಸರ್ಕಾರಗಳು ಕೇವಲ ₹300 ರಿಂದ 340 ಕೋಟಿ ನೀಡುತ್ತಿದ್ದವು. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ವರ್ಷಗಳಲ್ಲಿ ₹52,900 ಕೋಟಿ ವೆಚ್ಚದ ಯೋಜನೆಗಳನ್ನು ಪೂರ್ಣಗೊಳಿಸಿ ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ.

ತುಮಕೂರು-ರಾಯದುರ್ಗ, ತುಮಕೂರು- ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಬಾಕಿ ಉಳಿದಿದ್ದ 33-34ರ ಕೆಳಸೇತುವೆ ಹಾಗೂ ಮೇಲ್ಸೇತುವೆ ಕಾಮಗಾರಿಗಳನ್ನು ಯಶಸ್ವಿಯಾಗಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

66
2 ವರ್ಷದಲ್ಲಿ 400 ಲೆವಲ್ ಕ್ರಾಸಿಂಗ್ ಮುಕ್ತ
Image Credit : V Somanna FB

2 ವರ್ಷದಲ್ಲಿ 400 ಲೆವಲ್ ಕ್ರಾಸಿಂಗ್ ಮುಕ್ತ

ಬೆಂಗಳೂರಿನಿಂದ 100 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಲೆವೆಲ್ ಕ್ರಾಸಿಂಗ್ (ಎಲ್‌ಸಿ) ಗೇಟ್‌ಗಳು ಇರಬಾರದು ಎಂಬುದು ಪ್ರಧಾನಿರ ಸೂಚಿಸಿದ್ದರು. ರಾಜ್ಯದಲ್ಲಿ ಈಗಾಗಲೇ 707 ಲೆವಲ್ ಕ್ರಾಸ್ ಗೇಟ್‌ಗಳನ್ನು ತೆರವುಗೊಳಿಸಿ ಮೇಲ್ಸೇತುವೆ, ಕೆಳ ಸೇತುವೆ ನಿರ್ಮಿಸಲಾಗಿದೆ. ಇನ್ನುಳಿದ 400 ಕ್ಕೂ ಹೆಚ್ಚು ಗೇಟ್‌ಗಳನ್ನು ಮುಂದಿನ 2 ವರ್ಷಗಳಲ್ಲಿ ಮುಕ್ತಾಯ ಗೊಳಿಸಲಾಗುವುದು. ಇದರಿಂದ ಸಾರ್ವಜನಿಕರ ಪ್ರಯಾಣದ ಸಮಯ ಉಳಿತಾಯವಾಗಲಿದೆ ಎಂದರು.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಒಂದು‌ ಊರಿಗೆ ಮೂರು‌ ರೈಲ್ವೆ ಲೆವಲ್ ಕ್ರಾಸಿಂಗ್ ಇತ್ತು. ರೈಲ್ವೆ ಇಲಾಖೆ ₹150 ಕೋಟಿ‌ ವೆಚ್ಚದಲ್ಲಿ ಕಾಮಗಾರಿ ಮಾಡಲಾಗುತ್ತಿದೆ. ಅಲ್ಲಿನ ಸಂಸದರು ಕಾಂಗ್ರೆಸ್ ಪಕ್ಷದವರು. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
ಐಆರ್‌ಸಿಟಿಸಿ
ವಂದೇ ಭಾರತ್ ಎಕ್ಸ್‌ಪ್ರೆಸ್
ಭಾರತೀಯ ರೈಲ್ವೆ
ಮಂಗಳೂರು
ವಿ. ಸೋಮಣ್ಣ

Latest Videos
Recommended Stories
Recommended image1
ಕುದುರೆಮುಖದ ಹಸಿರು ದ್ವಾರ ಮುಕ್ತ; ಚಾರಣಿಗರಿಗೆ ಹೊಸ ಕರೆಯೋಲೆ, ಇಂದಿನಿಂದ ಅಧಿಕೃತ ಅನುಮತಿ
Recommended image2
GBA ವಿರುದ್ಧ 1 ಕಿ.ಮೀ ಚಾಲೆಂಜ್ ಆರಂಭಿಸಿದ ಬೆಂಗಳೂರಿಗರು: ಫುಟ್‌ಪಾತ್‌ಗಾಗಿ ಹುಡುಕಾಟ
Recommended image3
ಗದಗ: 101 ವರ್ಷ ಹಳೆಯ ಅಪರೂಪದ ಔಷಧಿ ಗುಣದ ಮಡ್ಡಿ ಮರ ಪತ್ತೆ; ಮಧುಮೇಹ ನಿಯಂತ್ರಣಕ್ಕೆ ರಾಮಬಾಣ
Related Stories
Recommended image1
ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್‌ಗೆ ಡಿಮ್ಯಾಂಡ್
Recommended image2
ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ, 3,300 ಕೋಟಿ ರು. ಯೋಜನಾ ವೆಚ್ಚ, ವಂದೇ ಭಾರತ್ ಶೀಘ್ರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved