MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕಲಬುರಗಿ ಸರ್ಕಾರಿ ಕಾಲೇಜಿನಲ್ಲಿ ಪಾಠ ಕೇಳುತ್ತಿದ್ದಾಗಲೇ ಮೇಲ್ಛಾವಣಿ ಕುಸಿತ; ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ!

ಕಲಬುರಗಿ ಸರ್ಕಾರಿ ಕಾಲೇಜಿನಲ್ಲಿ ಪಾಠ ಕೇಳುತ್ತಿದ್ದಾಗಲೇ ಮೇಲ್ಛಾವಣಿ ಕುಸಿತ; ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ!

ಕಲಬುರಗಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದು ಐವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಕಟ್ಟಡದ ದುಸ್ಥಿತಿಯೇ ಈ ಅವಘಡಕ್ಕೆ ಕಾರಣವೆಂದು ಹೇಳಲಾಗಿದೆ.

2 Min read
Author : Sathish Kumar KH
Published : Jun 12 2026, 02:11 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಕಲಬುರಗಿ ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಕಾಲೇಜೊಂದರಲ್ಲಿ ಶುಕಗ್ರವಾರ ಬೆಳಗ್ಗೆ ಭೀಕರ ಅವಘಡವೊಂದು ಸಂಭವಿಸಿದೆ. ಪಾಠ ಕೇಳುತ್ತಾ ಕುಳಿತಿದ್ದ ವಿದ್ಯಾರ್ಥಿನಿಯರ ಮೇಲೆ ಏಕಾಏಕಿ ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Asianet News

ಘಟನೆಯ ವಿವರ:

ಕಲಬುರಗಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಾಲ್ಕನೇ ಮಹಡಿಯ ಕ್ಲಾಸ್ ರೂಂನಲ್ಲಿ ಇಂದು ಎಂದಿನಂತೆ ತರಗತಿಗಳು ನಡೆಯುತ್ತಿದ್ದವು. ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದ ವಿದ್ಯಾರ್ಥಿನಿಯರಿಗೆ 'ಅಕೌಂಟೆನ್ಸಿ' (Accountancy) ಪಾಠ ಭೋದನೆ ನಡೆಯುತ್ತಿತ್ತು. ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತುಂಬಿದ್ದ ಕೊಠಡಿಯಲ್ಲಿ ಪಾಠ ಕೇಳುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮೇಲ್ಚಾವಣಿಯ ಕಾಂಕ್ರೀಟ್ ಭಾಗ ವಿದ್ಯಾರ್ಥಿನಿಯರ ಮೇಲೆ ಕುಸಿದು ಬಿದ್ದಿದೆ.

Related Articles

Related image1
Travel Good News: ಕಲಬುರಗಿ-ಬೆಂಗಳೂರು ವಿಮಾನಯಾನ ಸೇವೆ ಪುನಾರಂಭ: ನಾಳೆಯಿಂದಲೇ ಹಾರಲಿವೆ 'ಲೋಹದ ಹಕ್ಕಿಗಳು'!
Related image2
ಕಲಬುರಗಿ-ಬೆಂಗಳೂರು ವಿಮಾನ ಸೇವೆ ಪುನರಾರಂಭ ಬೆನ್ನಲ್ಲೇ ಏರ್ಪೋರ್ಟ್‌ನಿಂದ ವಿಶೇಷ ಕೆಕೆಆರ್‌ಟಿಸಿ ಬಸ್ ಸಂಚಾರ ಆರಂಭ
36
Image Credit : Asianet News

ವಿದ್ಯಾರ್ಥಿನಿಯರ ಆಕ್ರಂದನ, ನೂಕುನುಗ್ಗಲು:

ಮೇಲ್ಚಾವಣಿ ಕುಸಿಯುತ್ತಿದ್ದಂತೆ ಗಾಬರಿಗೊಂಡ ವಿದ್ಯಾರ್ಥಿನಿಯರು ಪ್ರಾಣ ಉಳಿಸಿಕೊಳ್ಳಲು ಏಕಕಾಲಕ್ಕೆ ಕೊಠಡಿಯಿಂದ ಹೊರಗೆ ಓಡಲು ಯತ್ನಿಸಿದರು. ಇದರಿಂದಾಗಿ ಕ್ಲಾಸ್ ರೂಂನಲ್ಲಿ ನೂಕುನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳನ್ನೂ ಮಾಡಿಕೊಂಡಿದ್ದಾರೆ. ಮೇಲ್ಚಾವಣಿಯ ದೊಡ್ಡ ಕಾಂಕ್ರೀಟ್ ತುಂಡುಗಳು ನೇರವಾಗಿ ತಲೆಯ ಮೇಲೆ ಬಿದ್ದಿದ್ದರಿಂದ ಮೂವರು ವಿದ್ಯಾರ್ಥಿನಿಯರು ರಕ್ತದ ಮಡುವಿನಲ್ಲಿ ಬಿದ್ದಿದ್ದರು.

46
Image Credit : Asianet News

ಗಾಯಾಳುಗಳ ವಿವರ:

ಈ ಘಟನೆಯಲ್ಲಿ ಶೀತಲ್ (ತಂದೆ ಬಸವರಾಜ್), ಸ್ನೇಹಾ (ತಂದೆ ಕಾಶಿನಾಥ್), ದಿವ್ಯಾ ಸುಭಾಷ್ ಎಂಬುವವರಿಗೆ ತೀವ್ರ ರಕ್ತಗಾಯಗಳಾಗಿವೆ. ಇವರ ಜೊತೆಗೆ ಪೂಜಾ ಗುಂಡಪ್ಪ ಹಾಗೂ ಸೃಷ್ಟಿ ಶಿವಾನಂದ ಎಂಬುವವರಿಗೂ ಗಾಯಗಳಾಗಿವೆ. ತಕ್ಷಣವೇ ಕಾಲೇಜು ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಾಳುಗಳನ್ನು ಕಲಬುರಗಿಯ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಿದ್ದು, ಸದ್ಯ ಅಲ್ಲಿ ಚಿಕಿತ್ಸೆ ಮುಂದುವರಿದಿದೆ.

56
Image Credit : Asianet News

ಪ್ರಾಂಶುಪಾಲರ ಆತಂಕದ ಮಾತು:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಲೇಜು ಪ್ರಾಂಶುಪಾಲ ದೇವನಗೌಡ ಅವರು, 'ಕಟ್ಟಡವು ತುಂಬಾ ಹಳೆಯದೇನಲ್ಲ, ಆದರೆ ಮೇಲ್ಛಾವಣಿಯ ಮೇಲೆ ಮಳೆ ನೀರು ನಿಲ್ಲುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ. ಇಡೀ ಕಟ್ಟಡದ ಸ್ಥಿತಿ ಸದ್ಯ ಹೀಗೆಯೇ ಇದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿದಿನ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ,' ಎಂದು ತಿಳಿಸಿದ್ದಾರೆ.

66
Image Credit : Asianet News

ಈ ಘಟನೆಯಿಂದಾಗಿ ಕಾಲೇಜಿನ ಇತರ ವಿದ್ಯಾರ್ಥಿನಿಯರು ಮತ್ತು ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಸರ್ಕಾರಿ ಕಟ್ಟಡಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಈಗ ತೀವ್ರ ಚರ್ಚೆ ಆರಂಭವಾಗಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂಬ ಎಚ್ಚರಿಕೆ ಕೇಳಿಬರುತ್ತಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕಲಬುರಗಿ
ವಿದ್ಯಾರ್ಥಿ
ಪ್ರಿಯಾಂಕ್ ಖರ್ಗೆ

Latest Videos
Recommended Stories
Recommended image1
ರಾಮನ ಬಗ್ಗೆ ಅವಹೇಳನ: ತಲೆಹಿಡುಕ ಭಗವಾನ್‌ರನ್ನ ಬಂಧಿಸಿ, ಇಲ್ಲಂದ್ರೆ ನಾವೇ ಮನೆಗೆ ನುಗ್ಗಿ ಹೊಡ್ತೇವೆ: ಮುತಾಲಿಕ್ ವಾರ್ನ್!
Recommended image2
ಆರು ತಿಂಗಳ ಹಿಂದೆ ಸತ್ತಿದ್ದ ಅಜ್ಜಿ ಮತ್ತೆ ಕಾಣಿಸಿಕೊಂಡಳಾ? ಚಿಕ್ಕಮಗಳೂರಿನ ನಿಗೂಢ ಘಟನೆ
Recommended image3
ಬಳ್ಳಾರಿಯಲ್ಲಿ ಸಿಕ್ಕ ಬಂಡೆಯಲ್ಲಿ ಬಯಲಾಯ್ತು 17ನೇ ಶತಮಾನದ ನಿಗೂಢ ರಹಸ್ಯ, 8 ಸಾಲಿನ ಅಪರೂಪದ ಶಾಸನ ಪತ್ತೆ!
Related Stories
Recommended image1
Travel Good News: ಕಲಬುರಗಿ-ಬೆಂಗಳೂರು ವಿಮಾನಯಾನ ಸೇವೆ ಪುನಾರಂಭ: ನಾಳೆಯಿಂದಲೇ ಹಾರಲಿವೆ 'ಲೋಹದ ಹಕ್ಕಿಗಳು'!
Recommended image2
ಕಲಬುರಗಿ-ಬೆಂಗಳೂರು ವಿಮಾನ ಸೇವೆ ಪುನರಾರಂಭ ಬೆನ್ನಲ್ಲೇ ಏರ್ಪೋರ್ಟ್‌ನಿಂದ ವಿಶೇಷ ಕೆಕೆಆರ್‌ಟಿಸಿ ಬಸ್ ಸಂಚಾರ ಆರಂಭ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved