MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • 3 ಜಿಲ್ಲೆಗೆ ರೆಡ್, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮಾರ್ಕಂಡೇಯ ನದಿ ಅಬ್ಬರ, ಬೆಳೆ ಜಲಾವೃತ

3 ಜಿಲ್ಲೆಗೆ ರೆಡ್, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮಾರ್ಕಂಡೇಯ ನದಿ ಅಬ್ಬರ, ಬೆಳೆ ಜಲಾವೃತ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

2 Min read
Author : Mahmad Rafik
| Updated : Jul 20 2025, 09:20 AM IST
Share this Photo Gallery
  • FB
  • TW
  • Linkdin
  • Whatsapp
16
ಮುಂದುವರಿದ ಮುಂಗಾರು ಮಳೆ
Image Credit : social media

ಮುಂದುವರಿದ ಮುಂಗಾರು ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದೆ. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಜೊತೆ ಬೀಸುತ್ತಿರುವ ಗಾಳಿ ಜನರನ್ನು ಮನೆಯಿಂದ ಹೊರಬರದಂತೆ ತಡೆಯುತ್ತಿದೆ. ಇಂದು ಸಹ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹಾಗಾಗಿ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ನಿಲ್ಲಿಸಿ.

26
ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್
Image Credit : our own

ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದ 3 ಜಿಲ್ಲೆಗಳಿಗೆ ರೆಡ್, 4 ಜಿಲ್ಲೆಗಳಿಗೆ ಆರೆಂಜ್, ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಅತ್ಯಧಿಕ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Related Articles

Related image1
ಜೋರು ಮಳೆ, ಭೂಕುಸಿತದಿಂದ 67 ಜನರ ಪ್ರಾಣ ಉಳಿಸಿದ ಜಾಣ ಸಾಕು ನಾಯಿ
Related image2
Now Playing
5 ಗಂಟೆ ಸುರಿದ ಮಳೆಗೆ ಅಲ್ಲಲ್ಲಿ ಭೂ ಕುಸಿತ । Udupi Rain
36
ಆರೆಂಜ್, ಯೆಲ್ಲೋ ಅಲರ್ಟ್
Image Credit : our own

ಆರೆಂಜ್, ಯೆಲ್ಲೋ ಅಲರ್ಟ್

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರುವ ಸಾಧ್ಯತೆಗಳಿವೆ.

46
ಯಾದಗಿರಿ ಮಳೆ
Image Credit : our own

ಯಾದಗಿರಿ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಯಾದಗಿರಿ ತಾಲೂಕಿನ ಗುರುಸಣಗಿ, ನಾಯ್ಕಲ್ ಸೇರಿ ಹಲವು ಗ್ರಾಮದ ಜಮೀನುಗಳು ಜಲಾವೃತಗೊಂಡಿದ್ದು, ಹತ್ತಿ, ತೊಗರಿ, ಭತ್ತ, ಉದ್ದು, ಹೆಸರುಬೆಳೆ ನೀರು ಪಾಲಾಗಿದೆ. ರೈತರು‌ ಜಮೀನುಗಳು ಕೆರೆಯಂತಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಇಷ್ಟು ದಿನ ಮಳೆ ಇಲ್ಲ ಅಂತಿದ್ದೀವಿ. ಇದೀಗ ಮಳೆ ಹೆಚ್ಚಾದ ಕಾರಣ ಬೆಳೆಯೆಲ್ಲಾ ನಾಶವಾಗಿದೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ.

56
ಸಂಜೆ ಮಳೆಗೆ ಹೈರಾಣದ ರಾಯಚೂರು ಜನತೆ
Image Credit : our own

ಸಂಜೆ ಮಳೆಗೆ ಹೈರಾಣದ ರಾಯಚೂರು ಜನತೆ

ಶನಿವಾರ ಸಂಜೆ ಸುರಿದ ಮಳೆಗೆರ ರಾಯಚೂರಿನ ಜನರು ಹೈರಾಣು ಆಗಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಅಡವಿಖಾನಾಪುರದಲ್ಲಿ ಮಳೆಗೆ ಹಳ್ಳ ತುಂಬಿದ್ದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಅಡವಿ ಖಾನಾಪುರದಿಂದ ಹೀರಾಪುರ ಗ್ರಾಮದ ಖಾಸಗಿ ಶಾಲೆಗೆ ಹೋಗಿದ್ದ ಮಕ್ಕಳು ಹಳ್ಳ ದಾಟಲು ಭಯಗೊಂಡಿದ್ದರು. ಕೊನೆಗೆ ಪೋಷಕರು ಬಂದು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ. ಮಳೆಯಿಂದಾಗಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.

66
ಮಾರ್ಕಂಡೇಯ ನದಿ ಅಬ್ಬರ, ರೈತರ ಬೆಳೆಗಳು ಸಂಪೂರ್ಣ ನಾಶ
Image Credit : our own

ಮಾರ್ಕಂಡೇಯ ನದಿ ಅಬ್ಬರ, ರೈತರ ಬೆಳೆಗಳು ಸಂಪೂರ್ಣ ನಾಶ

ಪಶ್ಚಿಮಘಟ್ಟ ಪ್ರದೇಶ ಮತ್ತು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಾರ್ಕಂಡೇಯ ನದಿ ತುಂಬಿ ಹರಿಯುತ್ತಿದೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿವೆ. ಮಾರ್ಕಂಡೇಯ ನದಿ ಅಬ್ಬರಕ್ಕೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಮೆಕ್ಕೆಜೋಳ, ಗೋವಿನಜೋಳ, ಮೆಣಸಿನಕಾಯಿ, ಇಂದ್ರಾಣಿ, ಬೆಳಗಾವಿ ಬಾಸುಮತಿ ಸೇರಿ ವಿವಿಧ ತಳಿಯ ಭತ್ತ ನಾಶವಾಗಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಮತ್ತೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕುವಂತಾಗಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಳೆ
ಮಾನ್ಸೂನ್
ಮುಂಗಾರು ಮಳೆ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಸ್ವತ್ತುಗಳಿಗೆ ನಕಲಿ ಇ-ಖಾತಾ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಆಗ್ರಹ
Recommended image2
ಬೆಂಗಳೂರು ನಗರಕ್ಕೆ 3 ಜಿಲ್ಲೆಯಿಂದಲೇ ಅಧಿಕ ತರಕಾರಿ ಪೂರೈಕೆ!
Recommended image3
Karnataka News Live: ಸ್ವತ್ತುಗಳಿಗೆ ನಕಲಿ ಇ-ಖಾತಾ - ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಆಗ್ರಹ
Related Stories
Recommended image1
ಜೋರು ಮಳೆ, ಭೂಕುಸಿತದಿಂದ 67 ಜನರ ಪ್ರಾಣ ಉಳಿಸಿದ ಜಾಣ ಸಾಕು ನಾಯಿ
Recommended image2
Now Playing
5 ಗಂಟೆ ಸುರಿದ ಮಳೆಗೆ ಅಲ್ಲಲ್ಲಿ ಭೂ ಕುಸಿತ । Udupi Rain
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved