MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನ ಉಡಾನ್ ಯೋಜನೆಗೆ ಸೇರಿಸಿ-ಕೇಂದ್ರ ಸರ್ಕಾರಕ್ಕೆ ಎಂ.ಬಿ.ಪಾಟೀಲ್ ಪತ್ರ!

ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನ ಉಡಾನ್ ಯೋಜನೆಗೆ ಸೇರಿಸಿ-ಕೇಂದ್ರ ಸರ್ಕಾರಕ್ಕೆ ಎಂ.ಬಿ.ಪಾಟೀಲ್ ಪತ್ರ!

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಸ್ಥಗಿತಗೊಂಡಿದ್ದು, ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರಿಗೆ ತೊಂದರೆಯಾಗಿದೆ. ಈ ಸೇವೆಯನ್ನು 'ಉಡಾನ್' ಯೋಜನೆ ಅಡಿ ಪುನರಾರಂಭಿಸುವಂತೆ ಕೋರಿ ಸಚಿವ ಎಂ.ಬಿ. ಪಾಟೀಲರು ಕೇಂದ್ರ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ.

2 Min read
Author : Sathish Kumar KH
Published : Jun 11 2026, 05:15 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು (ಜೂ.11): ಮಲೆನಾಡು ಮತ್ತು ಮಧ್ಯ ಕರ್ನಾಟಕದ ಆರ್ಥಿಕ ಹಾಗೂ ಪ್ರಗತಿಗೆ ನಿರ್ಣಾಯಕವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ವಿಮಾನ ಸೇವೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : our own

ರಾಜ್ಯದಲ್ಲಿ ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ (UDAN - Ude Desh ka Aam Nagrik) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಸಚಿವ ಪಾಟೀಲರು ಮನವಿ ಮಾಡಿದ್ದಾರೆ. ಈ ಸೇವೆಯನ್ನು ಪುನಾರಂಭ ಮಾಡುವುದರಿಂದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಸಮಗ್ರ ಪ್ರಗತಿಗೆ ಭವ್ಯ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

Related Articles

Related image1
Photos: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ ಸೆರೆ
Related image2
ಇಂಡಿಗೋ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಮಾನ ಸೇವೆ ರದ್ದು..! ಟಿಕೆಟ್ ಬುಕಿಂಗ್ ಕೂಡ ಸ್ಥಗಿತ
35
Image Credit : our own

ಸ್ಥಗಿತಗೊಂಡ ಸೇವೆ, ತೊಂದರೆಗೆ ಸಿಲುಕಿದ ಜನ:

ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಆರಂಭದಲ್ಲಿ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಈ ಸೇವೆಯು ಸ್ಥಗಿತಗೊಂಡಿದ್ದು, ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ತೀವ್ರ ತೊಂದರೆಯಾಗಿದೆ. ಈ ಜಿಲ್ಲೆಗಳ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ವಿಮಾನ ಸೇವೆ ಅತ್ಯಂತ ನಿರ್ಣಾಯಕವಾಗಿತ್ತು. ಇದರ ಸ್ಥಗಿತದಿಂದ ಈ ಎಲ್ಲಾ ಕ್ಷೇತ್ರಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ.

45
Image Credit : our own

ವಿದೇಶ ಪ್ರಯಾಣಿಕರಿಗೂ ತೊಂದರೆ:

ಶಿವಮೊಗ್ಗದಿಂದ ಬೆಂಗಳೂರಿಗೆ ನೇರ ವಿಮಾನ ಸಂಪರ್ಕವಿಲ್ಲದೆ ಇರುವುದರಿಂದ, ದೇಶದ ಬೇರೆ ಬೇರೆ ಭಾಗಗಳು ಮತ್ತು ವಿದೇಶಗಳಿಗೆ ಪ್ರಯಾಣಿಸುವವರಿಗೂ ದೊಡ್ಡ ಅಡಚಣೆಯಾಗಿದೆ. ಸಮಯದ ಉಳಿತಾಯ ಮತ್ತು ಸುಗಮ ಪ್ರಯಾಣಕ್ಕೆ ವಿಮಾನ ಸೇವೆ ಅತ್ಯಗತ್ಯವಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು, ವಿಜಿಟಿ (VGF - Viability Gap Funding) ನೆರವಿನ ಮೂಲಕ 'ಉಡಾನ್' ಯೋಜನೆಯ ಉದ್ದೇಶಿತ ಬಿಡ್‌ನಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗವನ್ನು ಸೇರಿಸಲು ಕೇಂದ್ರ ಸಚಿವರು ಮಧ್ಯೆ ಪ್ರವೇಶಿಸಬೇಕು ಎಂದು ಎಂ.ಬಿ.ಪಾಟೀಲರು ಕೋರಿದ್ದಾರೆ. ಉಡಾನ್ ಯೋಜನೆಯು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ಮತ್ತು ಸಾಮಾನ್ಯ ನಾಗರಿಕರಿಗೂ ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡುವ ಉದ್ದೇಶ ಹೊಂದಿದೆ.

55
Image Credit : Asianet News

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗುತ್ತಿದ್ದು, ಉಳಿದ ಎಲ್ಲಾ ಮೂಲಸೌಕರ್ಯಗಳೂ ಇಲ್ಲಿ ಈಗಾಗಲೇ ಲಭ್ಯವಿದೆ. ಆದ್ದರಿಂದ, ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಶಿವಮೊಗ್ಗ
ವಿಮಾನಯಾನ ಸಂಸ್ಥೆಗಳು
ವಿಮಾನ ನಿಲ್ದಾಣ
ಬೆಂಗಳೂರು
Latest Videos
Recommended Stories
Recommended image1
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್? ಷಡ್ಯಂತ್ರಕ್ಕೆ ಕೇರಳದಿಂದ 200 ಕೋಟಿ ಬಜೆಟ್‌!
Recommended image2
ಜಮೀರ್ ಮೇಲೆ ಇನ್ನೂ ತಣ್ಣಗಾಗಿಲ್ಲ ಸಿದ್ದರಾಮಯ್ಯ ಸಿಟ್ಟು; ಸಚಿವ ಸ್ಥಾನ ಮಿಸ್ ಆಗಲು ಇದೇ ಕಾರಣವೇ?
Recommended image3
ದನದ ಕೊಟ್ಟಿಗೆ ಬಿಲ್ ಪಾವತಿಸದ ಅಧಿಕಾರಿ; ತಾ.ಪಂ ಕಚೇರಿಯಲ್ಲಿ ಹಸುಗಳನ್ನ ಕಟ್ಟಿ, ಕಾಲಿಗೆ ಬಿದ್ದ ಅನ್ನದಾತ!
Related Stories
Recommended image1
Photos: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ ಸೆರೆ
Recommended image2
ಇಂಡಿಗೋ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಮಾನ ಸೇವೆ ರದ್ದು..! ಟಿಕೆಟ್ ಬುಕಿಂಗ್ ಕೂಡ ಸ್ಥಗಿತ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved