ಲಾಕ್‌ಡೌನ್ ನಡುವೆ ಸಿದ್ದರಾಮಯ್ಯ ಏನು ಮಾಡ್ತಿದ್ದಾರೆ?
ಬೆಂಗಳೂರು(ಮೇ 26) ಕೊರೋನಾ ಅಟ್ಟಹಾಸ ಇಡೀ ಜಗತ್ತನ್ನು ಕಾಡುತ್ತಿದೆ. ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಜನರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ. ಜನರ ಸಂಕಷ್ಟ ಆಲಿಸುತ್ತ ಬಂದಿದ್ದಾರೆ. ಪರಿಹಾರ ನೀಡಲು ಸರ್ಕಾರಕ್ಕೆ ಆಗ್ರಹ ಮಾಡುತ್ತಿದ್ದಾರೆ. ಕೊರೋನಾ ನಡುವೆ ಸಿದ್ದರಾಮಯ್ಯ ಏನು ಮಾಡುತ್ತಿದ್ದಾರೆ?
ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ ಸಂದರ್ಭ.
ದುಬೈನಲ್ಲಿರುವ ಕನ್ನಡಿಗರ ಜೊತೆ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ತಾಯ್ನಾಡಿಗೆ ಮರಳಲು ಯಾವುದೇ ವ್ಯವಸ್ಥೆ ಇಲ್ಲ. ವಿಮಾನ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕನ್ನಡಿಗರು ಮನವಿ ಮಾಡಿದರು.
ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ರೈತ ಮುಖಂಡರಾದ ಸುನಂದಾ ಜಯರಾಂ ಮತ್ತಿತರರು ಹಾಜರಿದ್ದರು.
ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ದಿನಸಿ ಹಾಗೂ ತರಕಾರಿ ಕಿಟ್ ಗಳನ್ನು ವಿತರಿಸಿದರು. ಕಾರ್ಯಕ್ರಮ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರಾದ ಕೃಷ್ಣಮೂರ್ತಿ, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಎಚ್.ಎಂ.ರೇವಣ್ಣ, ಮೋಟಮ್ಮ ಮತ್ತಿತರರು ಹಾಜರಿದ್ದರು.