MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Kalaburagi PSI Death: ಗೃಹ ಸಚಿವರ ತವರಲ್ಲಿ ಪಿಎಸ್‌ಐ ಬಸವರಾಜ್ ಆತ್ಮ*ಹತ್ಯೆ ಹಿಂದಿದೆಯೇ ನಿಗೂಢ ರಹಸ್ಯ?

Kalaburagi PSI Death: ಗೃಹ ಸಚಿವರ ತವರಲ್ಲಿ ಪಿಎಸ್‌ಐ ಬಸವರಾಜ್ ಆತ್ಮ*ಹತ್ಯೆ ಹಿಂದಿದೆಯೇ ನಿಗೂಢ ರಹಸ್ಯ?

ಕಲಬುರಗಿಯಲ್ಲಿ ಡಿಜಿಆರ್‌ಬಿ ಘಟಕದ ಪಿಎಸ್‌ಐ ಬಸವರಾಜ್ ಹೇರೂರ್ (PSI Basavaraj Herur) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಪದೋನ್ನತಿ ಹೊಂದಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಹೊಟ್ಟೆನೋವು ಎಂದು ಹೇಳಲಾಗುತ್ತಿದ್ದರೂ, ವೃತ್ತಿ ಒತ್ತಡದ ಶಂಕೆ ವ್ಯಕ್ತವಾಗಿದೆ.

2 Min read
Author : Sathish Kumar KH
Published : Jun 17 2026, 05:05 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ಕಲಬುರಗಿ (ಜೂ.17): ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯೇ ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲಾ ಪೊಲೀಸ್ ಇಲಾಖೆಯ ಡಿಜಿಆರ್‌ಬಿ (DCRB) ಘಟಕದಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ್ ಹೇರೂರ್ (42) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಂಡು ಸಾವಿಗೆ ಶರಣಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
Image Credit : Asianet News

ಘಟನೆಯಲ್ಲಿ ನಡೆದಿದ್ದೇನು?

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರ ಗ್ರಾಮದವರಾದ ಬಸವರಾಜ್ ಹೇರೂರ್, ಇತ್ತೀಚೆಗಷ್ಟೇ ಪಿಎಸ್‌ಐ ಆಗಿ ಪದೋನ್ನತಿ ಹೊಂದಿದ್ದರು. ಎಂದಿನಂತೆ ರಾತ್ರಿ ಕರ್ತವ್ಯ ಮುಗಿಸಿ ಕಲಬುರಗಿ ನಗರದ ಗಂಗಾ ನಗರ ಬಡಾವಣೆಯಲ್ಲಿರುವ ತಮ್ಮ ಮನೆಗೆ ಬಂದಿದ್ದರು. ತಡರಾತ್ರಿ ಹಠಾತ್ ಆಗಿ ತಮ್ಮ ಸ್ನೇಹಿತರಿಗೆ ಕರೆ ಮಾಡಿದ ಬಸವರಾಜ್, 'ನಾನು ಆತ್ಮಹ*ತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಗಾಬರಿಗೊಂಡ ಸ್ನೇಹಿತರು ಕೂಡಲೇ ಬಸವರಾಜ್ ತಂದೆ ಶಾಂತಪ್ಪ ಅವರಿಗೆ ವಿಷಯ ಮುಟ್ಟಿಸಿದ್ದಾರೆ.

ತಂದೆ ಶಾಂತಪ್ಪ ಮಗನ ಕೋಣೆಯ ಬಳಿ ಹೋದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಓಗೊಡದಿದ್ದಾಗ, ಕಬ್ಬಿಣದ ರಾಡ್‌ನಿಂದ ಬಾಗಿಲು ಒಡೆದು ಒಳಹೋಗಿದ್ದಾರೆ. ಆದರೆ ಅಷ್ಟರಲ್ಲೇ ಕಾಲ ಮಿಂಚಿಹೋಗಿತ್ತು. ಬಸವರಾಜ್ ಪತ್ನಿಯ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದರು.

Related Articles

Related image1
Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Related image2
ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಸ್ಪೋಟಕ ಪತ್ತೆ: ಭದ್ರತಾ ಲೋಪ ಹಿನ್ನೆಲೆ ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು!
34
Image Credit : Asianet News

ವೃತ್ತಿ ಜೀವನ ಮತ್ತು ಹಿನ್ನೆಲೆ:

2014ರ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾದ ಬಸವರಾಜ್, ಈ ಹಿಂದೆ ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಕ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪತ್ನಿ ಮತ್ತು ಮಕ್ಕಳು ತವರು ಮನೆಗೆ ಹೋಗಿದ್ದರು ಎನ್ನಲಾಗಿದೆ.

ಸಾವಿನ ಸುತ್ತ ಅನುಮಾನದ ಹುತ್ತ:

ಬಸವರಾಜ್ ಅವರ ಈ ನಿರ್ಧಾರಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಂದೆ ಶಾಂತಪ್ಪ ಅವರ ಪ್ರಕಾರ, ಬಸವರಾಜ್‌ಗೆ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವು ಇತ್ತು. ಅಲ್ಲದೆ ಅವರು ಆಗಾಗ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಒಬ್ಬ ಪೊಲೀಸ್ ಅಧಿಕಾರಿಯಾಗಿ ಕೇವಲ ಹೊಟ್ಟೆ ನೋವಿನ ಕಾರಣಕ್ಕೆ ಆತ್ಮ*ಹ*ತ್ಯೆ ಮಾಡಿಕೊಂಡರಾ ಅಥವಾ ಇದರ ಹಿಂದೆ ವೃತ್ತಿ ಜೀವನದ ಒತ್ತಡ ಅಥವಾ ಬೇರೆನಾದರೂ ಕಾರಣಗಳಿವೆಯೇ ಎಂಬ ಪ್ರಶ್ನೆ ಮೂಡಿದೆ.

44
Image Credit : Asianet News

ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಲಬುರಗಿಯ ಆರ್‌ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರ ಈ ಸಾವು ಇಡೀ ಜಿಲ್ಲೆಯನ್ನು ಕಂಬನಿ ಮಿಡಿಯುವಂತೆ ಮಾಡಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕ ಪೊಲೀಸ್
ಪೊಲೀಸ್

Latest Videos
Recommended Stories
Recommended image1
ಕರಾವಳಿ ರೈಲು ಪ್ರಯಾಣಿಕರ ಗಮನಕ್ಕೆ! ಕೊಂಕಣ ಮಾರ್ಗದಲ್ಲಿ 4 ತಿಂಗಳು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ
Recommended image2
Karnataka weather: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ಮುಂಗಾರು ಕೊರತೆ ಸರಿದೂಗಿಸುತ್ತಾ 7 ದಿನದ ಮಳೆ!
Recommended image3
Dharmasthala Case: ಪ್ರಕಾಶ್ ರಾಜ್‌ಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ - ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ
Related Stories
Recommended image1
Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Recommended image2
ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಸ್ಪೋಟಕ ಪತ್ತೆ: ಭದ್ರತಾ ಲೋಪ ಹಿನ್ನೆಲೆ ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved