MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಶಕ್ತಿ ಯೋಜನೆಯಿಂದಾಗಿ ಬಸ್‌ ಸಿಗದೇ ವಿದ್ಯಾರ್ಥಿಗಳ ಪರದಾಟ, ಜೀವ ಭಯಬಿಟ್ಟು ಗೂಡ್ಸ್‌ ವಾಹನದಲ್ಲಿ ಓಡಾಟ!

ಶಕ್ತಿ ಯೋಜನೆಯಿಂದಾಗಿ ಬಸ್‌ ಸಿಗದೇ ವಿದ್ಯಾರ್ಥಿಗಳ ಪರದಾಟ, ಜೀವ ಭಯಬಿಟ್ಟು ಗೂಡ್ಸ್‌ ವಾಹನದಲ್ಲಿ ಓಡಾಟ!

ಬಳ್ಳಾರಿ (ಜ.07): ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂಧ ಕೂಡಲೇ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಈ ಶಕ್ತಿ ಯೋಜನೆ ಜಾರಿಯಿಂದಾಗಿ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಸೀಟಿಲ್ಲದೇ ಪರದಾಡುವಂತಾಗಿದೆ. 

1 Min read
Author : Sathish Kumar KH
| Updated : Jan 07 2024, 03:16 PM IST
Share this Photo Gallery
  • FB
  • TW
  • Linkdin
  • Whatsapp
18

ಈಗಾಗಲೇ ಶಕ್ತಿ ಯೋಜನೆ ಜಾರಿಯಿಂದಾಗಿ ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ತೆರಳುವ ವಿದ್ಯಾರ್ಥಿಗಳು ಸೀಟಿಲ್ಲದೇ, ಬಾಗಿಲ ಬಳಿ ನಿಂತುಕೊಂಡು ಜೀವ ಭಯದಲ್ಲಿಯೇ ಓಡಾಡಬೇಕಿದೆ.
 

28

ಬಳ್ಳಾರಿಯಲ್ಲಿಯೂ ಕೂಡ ಶಕ್ತಿ ಯೋಜನೆ ಎಫೆಕ್ಟ್ ಬಸ್ ಇಲ್ಲದೇ, ವಿದ್ಯಾರ್ಥಿಗಳ ಪರದಾಡುತ್ತಿರುವ ಘಟನೆಗಳು ಹಲವೆಡೆ ವರದಿ ಆಗುತ್ತಲಿವೆ. ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸ್ವ ಕ್ಷೇತ್ರದ ವಿದ್ಯಾರ್ಥಿಗಳ ಪರದಾಟ ಕಿಂಚಿತ್ತೂ ಗಮನ ಹರಿಸುತ್ತಿಲ್ಲ.

38

ಇನ್ನು ವಿದ್ಯಾರ್ಥಿಗಳು ಬಸ್‌ನಲ್ಲಿ ಜಾಗವಿಲ್ಲದೇ ಪರೀಕ್ಷೆಗೆ ಹೋಗಲಾದ ಪರಿಸ್ಥಿತಿ ಬರಬಾರದು ಎಂದು ಗೂಡ್ಸ್‌ ವಾಹನದಲ್ಲಿ ಸಂಚಾರ ಮಾಡುತ್ತಿದ್ದಾರೆ.

48

ಗಣಿ ನಾಡು ಬಳ್ಳಾರಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನ ಕುರಿ ಹಿಂಡಿನಂತೆ ಟಾಟಾ ಏಸ್‌ ಗೂಡ್ಸ್‌ ವಾನಹದಲ್ಗಲಿ ತುಂಬಿಕೊಂಡು ನಗರ ಪ್ರದೇಶದ ಶಾಲೆಗಳಿಗೆ ಕರೆದೊಯ್ಯಲಾಗುತ್ತಿದೆ. ಕನಿಷ್ಠ ಬಸ್ ವ್ಯವಸ್ಥೆ ಮಾಡಿಸುವಂತೆ ವಿದ್ಯಾರ್ಥಿಗಳ ಒತ್ತಾಯಿಸಿದರೂ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಕಿವಿಗೊಡುತ್ತಿಲ್ಲ.
 

58

ಭಾನುವಾರದ ಹಿನ್ನೆಲೆಯಲ್ಲಿ ಕೆಲವು ಪರೀಕ್ಷೆಗಳನ್ನು ಬರೆಯಲು ಹೋಗುವ ಬ್ಯಾಲಚಿಂತೆ, ನಾಗೇನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳನ್ನು ಟಾಟಾ ಏಸ್‌ನಲ್ಲಿ ತುಂಬಿಕೊಂಡು ಹೋಗಲಾಗುತ್ತಿದೆ.
 

68

ಕರ್ನಾಟಕದ ಶಕ್ತಿ ಯೋಜನೆ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಇಲ್ಲಿಯೂ ಕೂಡ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಸೀಟಿಗಾಗಿ ಪರಸ್ಪರ ಹೊಡೆದಾಡಿಕೊಂಡಿರುವ ವೀಡಿಯೋ ವೈರಲ್ ಆಗುತ್ತಿವೆ.
 

78

ಇನ್ನು ಕಳೆದೊಂದು ವಾರದ ಹಿಂದೆ ಬಸ್‌ ನಿಲ್ಲಿಸಲಿಲ್ಲವೆಂಬ ಕಾರಣಕ್ಕೆ ಮಹಿಳೆಯ ಕಡೆಯ ಯುವಕರ ಗುಂಪೊಂದು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿತ್ತು.
 

88

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂಧ ಕೂಡಲೇ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಈ ಶಕ್ತಿ ಯೋಜನೆ ಜಾರಿಯಿಂದಾಗಿ ವಿದ್ಯಾಧರ್ತಿಗಳು ಬಸ್‌ಗಳಲ್ಲಿ ಸೀಟಿಲ್ಲದೇ ಪರದಾಡುವಂತಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬಳ್ಳಾರಿ

Latest Videos
Recommended Stories
Recommended image1
ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯುಲೆನ್ಸ್ ಚಾಲಕನ ಮೇಲೆ ಮಾಲೀಕನಿಂದ ಭೀಕರ ಹಲ್ಲೆ!
Recommended image2
Yellapur Ranjitha murder case: ಶಾಸಕ ಶಿವರಾಮ್ ಹೆಬ್ಬಾರ್ ಕೆಂಡಾಮಂಡಲ, ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ
Recommended image3
ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ನಡೆಯುತ್ತಿದೆ; ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ಲಕ್ಷ್ಮಣ್ ಸವದಿ ವಾಗ್ದಾಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved