MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಜನರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಅಪ್ಪಳಿಸಲಿದೆ ಗುಡುಗು ಸಹಿತ ಭಾರಿ ಮಳೆ!

ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಜನರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಅಪ್ಪಳಿಸಲಿದೆ ಗುಡುಗು ಸಹಿತ ಭಾರಿ ಮಳೆ!

ಬಂಗಾಳ ಉಪಸಾಗರದ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದ ಸುಳಿಗಾಳಿಯಿಂದಾಗಿ, ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

2 Min read
Author : Sathish Kumar KH
Published : May 11 2026, 03:47 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿನ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred
27
Image Credit : Getty

ಶ್ರೀಲಂಕಾ ಕರಾವಳಿಯ ಉತ್ತರಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇದು ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಇದರ ಜೊತೆಗೆ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳ ಬಳಿ ಕೇರಳ ಕರಾವಳಿಯ ಮೇಲೆ ಸುಳಿಗಾಳಿ ಕಂಡುಬಂದಿದೆ. ಈ ಎಲ್ಲ ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿದೆ.

Related Articles

Related image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯಾದ್ಯಂತ 5 ದಿನ ಮಳೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!
Related image2
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ; ಅಗತ್ಯ ಜಾಗವೇ ಇಲ್ಲ
37
Image Credit : Gemini AI

ಯಾವ ಜಿಲ್ಲೆಗಳಲ್ಲಿ ಮಳೆ?

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 11 ರಿಂದ ಮೇ 15 ರವರೆಗೆ ರಾಜ್ಯದಾದ್ಯಂತ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ:

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

47
Image Credit : Kannada Prabha

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು: ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ. ವಿಶೇಷವಾಗಿ ಮೇ 15 ಮತ್ತು 16 ರಂದು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Heavy Rain) ಮುನ್ಸೂಚನೆ ನೀಡಲಾಗಿದೆ.

57
Image Credit : FB

ತಾಪಮಾನ ಏರಿಕೆ:

ಒಂದೆಡೆ ಮಳೆಯ ಮುನ್ಸೂಚನೆ ಇದ್ದರೆ, ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಮುಂದಿನ 5 ದಿನಗಳಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದರಿಂದಾಗಿ ಬಿಸಿಲ ತಾಪವೂ ಜನರನ್ನು ಕಾಡಲಿದೆ.

67
Image Credit : Getty

ಬೆಂಗಳೂರಿನ ಹವಾಮಾನ:

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

77
Image Credit : Gemini AI

ಸಾರ್ವಜನಿಕರಿಗೆ ಸೂಚನೆ:

ಗುಡುಗು ಮಿಂಚು ಕಂಡುಬಂದಾಗ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರೈತರು ಮತ್ತು ಸಾರ್ವಜನಿಕರು ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕ ಹವಾಮಾನ
ಹವಾಮಾನ ಮುನ್ಸೂಚನೆ
ಮಳೆ
ಕರ್ನಾಟಕ ಮಳೆ

Latest Videos
Recommended Stories
Recommended image1
ಶೃಂಗೇರಿ ಅಂಚೆ ಮತ ಮರುಎಣಿಕೆ: ಬಿಜೆಪಿ ಏಜೆಂಟರಿಂದಲೇ ಹೊಸ ಟ್ವಿಸ್ಟ್
Recommended image2
ಆಂಜನೇಯನಿಗೆ 'ನಾಮ' ಹಾಕಿದ ಉದ್ಯಮಿ: ಅಂಜನಾದ್ರಿಗೆ ಕೊಟ್ಟಿದ್ದು ₹2.50Cr ಚಿನ್ನವಲ್ಲ, ತಾಮ್ರ ಲೇಪಿತ 28 ಗ್ರಾಂ ಬಂಗಾರ!
Recommended image3
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
Related Stories
Recommended image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯಾದ್ಯಂತ 5 ದಿನ ಮಳೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!
Recommended image2
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ; ಅಗತ್ಯ ಜಾಗವೇ ಇಲ್ಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved