ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಅಂಗಡಿ ಬಂದ್‌ ಮಾಡುವಂತೆ ಸೂಚಿಸಿದ್ದಕ್ಕೆ ಭುಗಿಲೆದ್ದ ಆಕ್ರೋಶ

First Published Feb 3, 2021, 4:49 PM IST

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಹಲವು ಅಂಗಡಿಗಳನ್ನು ಒಂದು ದಿನ ಬಂದ್ ಮಾಡಲು ಸೂಚನೆ ಕೊಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.  ಜಿಲ್ಲಾಡಳಿತದ ನಡೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.