MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಲಕ್ಕುಂಡಿಯ ಗುಪ್ತ ಸತ್ಯ: ದೇವಾಲಯಗಳ ಪತ್ತೆಗೆ ಸ್ಯಾಟಲೈಟ್ ಬಳಕೆ, ಲಕ್ಕುಂಡಿಯ ನೂರೊಂದು ಬಾವಿ, ದೇಗುಲ ಶೀಘ್ರ ಅನಾವರಣ

ಲಕ್ಕುಂಡಿಯ ಗುಪ್ತ ಸತ್ಯ: ದೇವಾಲಯಗಳ ಪತ್ತೆಗೆ ಸ್ಯಾಟಲೈಟ್ ಬಳಕೆ, ಲಕ್ಕುಂಡಿಯ ನೂರೊಂದು ಬಾವಿ, ದೇಗುಲ ಶೀಘ್ರ ಅನಾವರಣ

ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ಮತ್ತು ನೂರೊಂದು ದೇವಾಲಯಗಳನ್ನು ಪತ್ತೆಹಚ್ಚಲು ಎನ್‌ಐಎಎಸ್‌ ಸಂಸ್ಥೆಯ ಸಹಕಾರದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಈ ಸ್ಥಳವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ.

2 Min read
Author : Gowthami K
Published : May 21 2026, 03:56 PM IST
Share this Photo Gallery
  • FB
  • TW
  • Linkdin
  • Whatsapp
16
ಪತ್ತೆ ಹಚ್ಚಿ ದೇಶಕ್ಕೆ ಅನಾವರಣ
Image Credit : Asianet News

ಪತ್ತೆ ಹಚ್ಚಿ ದೇಶಕ್ಕೆ ಅನಾವರಣ

ಗದಗ/ಬೆಂಗಳೂರು: ಐತಿಹಾಸಿಕ ಲಕ್ಕುಂಡಿಯಲ್ಲಿ ಇರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಎನ್‌ಐಎಎಸ್‌ ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

Add Asianetnews Kannada as a Preferred SourcegooglePreferred
26
 ಎನ್‌ಐಎಎಸ್‌ ಸಂಸ್ಥೆ ವಿಜ್ಞಾನಿಗಳೊಂದಿಗೆ ನಡೆದ ಸಭೆ
Image Credit : Asianet News

ಎನ್‌ಐಎಎಸ್‌ ಸಂಸ್ಥೆ ವಿಜ್ಞಾನಿಗಳೊಂದಿಗೆ ನಡೆದ ಸಭೆ

ಬೆಂಗಳೂರಿನ ವಿಧಾನಸೌಧದಲ್ಲಿ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ನೂರೊಂದು ದೇವಾಲಯಗಳನ್ನು ಹೊರತರುವ ಸಲುವಾಗಿ ಎನ್‌ಐಎಎಸ್‌ ಸಂಸ್ಥೆ ವಿಜ್ಞಾನಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 2023ರಿಂದ ಲಕ್ಕುಂಡಿಯಲ್ಲಿ 32 ದೇವಾಲಯಗಳು, 28 ಬಾವಿಗಳು ಹಾಗೂ 7 ಇತರೆ ಸ್ಮಾರಕಗಳನ್ನು ಒಳಗೊಂಡಂತೆ ಒಟ್ಟು 70ಕ್ಕೂ ಹೆಚ್ಚು ಸ್ಮಾರಕಗಳನ್ನು ಗುರುತಿಸಲಾಗಿದೆ. ಮುಂಬರುವ ಡಿ. 31ರೊಳಗೆ ಲಕ್ಕುಂಡಿಯಲ್ಲಿ 101 ಬಾವಿ 101 ದೇವಾಲಯಗಳನ್ನು ಎನ್‌ಐಎಎಸ್‌ ಸಂಸ್ಥೆ ಹಾಗೂ ಸ್ಥಳೀಯರ ಸಹಭಾಗಿತ್ವದೊಂದಿಗೆ ಅನಾವರಣಗೊಳಿಸಲು ಅಗತ್ಯ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Related Articles

Related image1
ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?
Related image2
ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ
36
ಯುನೆಸ್ಕೋ ಸೇರಿಸಲು ಪ್ರಸ್ತಾವನೆ ಸಿದ್ಧ
Image Credit : Asianet News

ಯುನೆಸ್ಕೋ ಸೇರಿಸಲು ಪ್ರಸ್ತಾವನೆ ಸಿದ್ಧ

ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ(ಯುನೆಸ್ಕೋ) ಸೇರಿಸಲು ಪ್ರಸ್ತಾವನೆ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಯುನೆಸ್ಕೋ ಪಟ್ಟಿಗೆ ಸೇರಿಸಲು 2024ರ ನವೆಂಬರ್‌ನಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 1ನ್ನು ನಡೆಸಿ 1500ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಲಾಗಿದೆ. ಜತೆಗೆ 2026ರ ಮೇ 2ರಿಂದ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 2 ನಡೆಸುತ್ತಿದ್ದು, ಈಗಾಗಲೇ ಎರಡನೇ ಹಂತದಲ್ಲಿ 1800ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿವೆ. ಮೊದಲ ಹಂತ ಮತ್ತು ಎರಡನೇ ಹಂತದ ಪ್ರಾಚ್ಯಾವಶೇಷಗಳನ್ನು ಸೇರಿಸಿ ಜೂ. 30ರ ಒಳಗಾಗಿ ದಾಖಲೆಯ ರೀತಿಯ 5000ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಿ ಅವುಗಳನ್ನು ಬಯಲು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಸಹ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

46
ದೇವಸ್ಥಾನಗಳಿಗೆ ಹೊಸ ರೂಪ
Image Credit : Asianet News

ದೇವಸ್ಥಾನಗಳಿಗೆ ಹೊಸ ರೂಪ

ಲಕ್ಕುಂಡಿಯಲ್ಲಿರುವ ದೇವಸ್ಥಾನಗಳಿಗೆ ಹೊಸ ರೂಪ ನೀಡಲು ಈಗಾಗಲೇ ಫೆಬ್ರವರಿ ಮಾಹೆಯಲ್ಲಿ ಪಂಚ ದೇವಾಲಯ ಮತ್ತು ಪಂಚ ಬಾವಿಗಳ ಅನಾವರಣ ಕೈಗೊಂಡಿದ್ದು, ಮೇ 2ರಿಂದ ದಶಬಾವಿ, ದಶ ದೇವಾಲಯಗಳ ಅನಾವರಣ ಕಾರ್ಯವೂ ನಡೆಯುತ್ತಿದ್ದು, ₹10 ಕೋಟಿ ವೆಚ್ಚದಲ್ಲಿ 6 ಸ್ಮಾರಕಗಳನ್ನು ಸಂಪೂರ್ಣವಾಗಿ ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2026- 27ನೇ ಸಾಲಿನ ಕ್ರಿಯಾಯೋಜನೆಯಲ್ಲಿ 10ಕ್ಕಿಂತ ಹೆಚ್ಚು ಸ್ಮಾರಕಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಲಾಗುವುದು. ಒಟ್ಟಾರೆಯಾಗಿ ಲಕ್ಕುಂಡಿಯನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಕಾರ್ಯಕ್ಕೆ(ಯುನೆಸ್ಕೋ ಪಟ್ಟಿಗೆ ಸೇರಿಸಲು) ಮತ್ತಷ್ಟು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

56
ಇಸ್ರೋ ಮಾಜಿ ಹೇಳಿದ್ದೇನು?
Image Credit : Asianet News

ಇಸ್ರೋ ಮಾಜಿ ಹೇಳಿದ್ದೇನು?

ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ ಕುಮಾರ್ ಮಾತನಾಡಿ, ಲಕ್ಕುಂಡಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗುವುದು ಅಗತ್ಯವಾಗಿದೆ. ಆ ದಿಸೆಯಲಿ ಪ್ರಯತ್ನ ಸ್ವಾಗತಾರ್ಹ. ಸ್ಯಾಟಲೈಟ್ ತಂತ್ರಜ್ಞಾನ ಬಳಸಿ ಲಕ್ಕುಂಡಿಯಲ್ಲಿರುವ 101 ಬಾವಿ ಹಾಗೂ 101 ದೇವಾಲಯಗಳನ್ನು ಅನಾವರಣಗೊಳಿಸುವ ಪ್ರಯತ್ನಕ್ಕೆ ಕೈಜೊಡಿಸುವುದಾಗಿ ತಿಳಿಸಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದಲಿಂಗೇಶ್ವರ ಪಾಟೀಲ ಮಾತನಾಡಿ, ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರವಾಸೋದ್ಯಮ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಕೈಗೊಂಡಿರುವ ಎಲ್ಲ ಕಾರ್ಯಗಳಿಗೆ ಸ್ಥಳೀಯರ ಸಂಪೂರ್ಣ ಸಹಕಾರವಿದೆ ಎಂದರು.

66
 ಸ್ಯಾಟಲೈಟ್ ತಂತ್ರಜ್ಞಾನದ ಬಳಕೆ
Image Credit : Asianet News

ಸ್ಯಾಟಲೈಟ್ ತಂತ್ರಜ್ಞಾನದ ಬಳಕೆ

ಸಭೆಯಲ್ಲಿ 2023ರಿಂದ ಇಲ್ಲಿಯವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಕುರಿತು ಪ್ರಾಧಿಕಾರದ ಆಯುಕ್ತ ಡಾ: ಶರಣು ಗೋಗೇರಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. 101 ಬಾವಿ 101 ದೇವಾಲಯಗಳನ್ನು ಪತ್ತೆ ಹಚ್ಚುವಲ್ಲಿ ಸ್ಯಾಟಲೈಟ್ ತಂತ್ರಜ್ಞಾನದ ಬಳಕೆ ಕುರಿತು ಎನ್‌ಐಎಎಸ್‌ ಸಂಸ್ಥೆಯ ಪ್ರೊ. ಎಂ.ಬಿ. ರಜನಿ ಪ್ರಾತ್ಯಕ್ಷಿಕೆ ನೀಡಿದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಪ್ರವಾಸೋದ್ಯಮ ಇಲಾಖೆ ಆಯುಕ್ತ ಅಕ್ರಂ ಪಾಷಾ, ಇಸ್ರೋದ ವಿಜ್ಞಾನಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರೊ. ರಾಮನಗೌಡ ನಾಡಗೌಡರ, ಅ.ಧ. ಕಟ್ಟಿಮನಿ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ. ಆರ್. ಶೇಜೇಶ್ವರ, ಸ್ಮಿತಾ ರೆಡ್ಡಿ ಸೇರಿದಂತೆ ಇಸ್ರೋ ಹಾಗೂ ಎನ್‌ಐಎಎಸ್‌ ಸಂಸ್ಥೆಯ ವಿಜ್ಞಾನಿಗಳು, ಸಂಶೋಧಕರು ಸೇರಿದಂತೆ ಮೊದಲಾದವರು ಇದ್ದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಲಕ್ಕುಂಡಿ
ಕರ್ನಾಟಕ ಸುದ್ದಿ
ಗದಗ
ಪುರಾತತ್ವ ಇಲಾಖೆ

Latest Videos
Recommended Stories
Recommended image1
ಗದಗ: ಪ್ರೀತಿಸಿ ಮದುವೆಯಾದ ಗಂಡನಿಗೆ ಬೆಡ್ ರೂಂ ನಲ್ಲಿ ಕಬ್ಬಿಣದ ಸಲಾಕೆಯಿಂದ ಹೊಡೆದು ಚಟ್ಟ ಕಟ್ಟಿದ ಹೆಂಡತಿ!
Recommended image2
ತುಮಕೂರು-ಯಶವಂತಪುರ ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ: KSRಗೆ ವಿಸ್ತರಣೆ ಆಗುತ್ತಾ?
Recommended image3
ಹಣ ವಾಪಸ್ ಕೇಳಿದ ವ್ಯಕ್ತಿಗೆ ನರಕ ದರ್ಶನ! ಕಾರಿನ ಬಾನೆಟ್ ಮೇಲೆಯೇ ಎಳೆದೊಯ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು?
Related Stories
Recommended image1
ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?
Recommended image2
ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved