ನಿರಂತರ ಮಳೆಯಿಂದಾಗಿ ಭೂಕುಸಿತ; ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ
ಶಿವಮೊಗ್ಗ ಜಿಲ್ಲೆಯ ಬಾಳೇಬರೆ ಘಾಟಿಯಲ್ಲಿ ನಿರಂತರ ಮಳೆಯಿಂದಾಗಿ ಮಣ್ಣು ಕುಸಿತ ಉಂಟಾಗಿದೆ. ಮುಂಜಾಗ್ರತಾ ಕ್ರಮವಾಗಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ನಿರ್ಬಂಧ ಮುಂದುವರಿಯಲಿದೆ.

ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆಯಿಂದ ಹೊಸಂಗಡಿ ಸಂಪರ್ಕಿಸುವ ಬಾಳೇಬರೆ ಘಾಟಿಯ ತಿರುವು ಬಳಿ ಮಣ್ಣು ಕುಸಿತವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಿರುವ ಭಾಗದಲ್ಲಿ ಮಣ್ಣು ಕುಸಿತವಾಗಿದೆ.
ಮುಂದಿನ ದಿನಗಳಲ್ಲಿ ಮತ್ತೆ ಮಳೆ ಸುರಿದ್ರೆ ಮತ್ತಷ್ಟು ಮಣ್ಣು ಕುಸಿತವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಮಳೆ ಮತ್ತೆ ಚುರುಕಾಗಿರುವುದರಿಂದ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಪರ್ಯಾಯ ಮಾರ್ಗ
ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಅನಾಹುತ ಸಂಭವಿಸುವ ಅಪಾಯದ ಹಿನ್ನೆಲೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಹಾಕಲಾಗಿದೆ. ಈ ಮಾರ್ಗದಲ್ಲಿ ಚಲಿಸುತ್ತಿದ್ದ ಭಾರಿ ವಾಹನಗಳು ಇನ್ನು ಮುಂದೆ ಕೊಲ್ಲೂರು ಇಲ್ಲವೇ ಹೊನ್ನಾವರದ ಮೂಲಕ ಕುಂದಾಪುರ ತಲುಪುವಂತೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಮಳೆಗಾಲ ಮುಗಿಯುವವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ
ಮಣ್ಣು ಕುಸಿತವಾಗಿರುವ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ. ಈ ಕಾರಣದಿಂದಲೂ ಭಾರೀ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಮಣ್ಣು ಕುಸಿತಗೊಂಡಿರುವ ಸ್ಥಳದಲ್ಲಿ ತಾಡಪತ್ರಿ ಹೊದಿಕೆ ಹಾಕಲಾಗಿದೆ. ತಿರುವು ಭಾಗದಲ್ಲಿ ಮರಳಿನ ಮೂಟೆಗಳನ್ನು ಇರಿಸಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.