MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ವಿಜಯಪುರ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಯಾವುದೇ ದಾಖಲೆಗಳಿಲ್ಲದ ₹50,000 ನಗದು ಜಪ್ತಿ!

ವಿಜಯಪುರ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಯಾವುದೇ ದಾಖಲೆಗಳಿಲ್ಲದ ₹50,000 ನಗದು ಜಪ್ತಿ!

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಲೆಕ್ಕವಿಲ್ಲದ ಸುಮಾರು 50,000 ರೂ. ನಗದು ವಶಪಡಿಸಿಕೊಳ್ಳಲಾಗಿದ್ದು, ಹಲವು ಖಾಸಗಿ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

2 Min read
Author : Sathish Kumar KH
Published : Jul 01 2026, 10:35 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಎನ್ನಲಾದ ಭ್ರಷ್ಟಾಚಾರದ ವಾಸನೆ ಹಿಡಿದ ಲೋಕಾಯುಕ್ತ ಪೊಲೀಸರು ಇಂದು ಮಿಂಚಿನ ದಾಳಿ ನಡೆಸಿದ್ದಾರೆ. ಇಂಡಿ ಉಪ ನೋಂದಣಿ ಕಚೇರಿ (Sub-Registrar Office) ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಸಿಬ್ಬಂದಿ ದಾಳಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

50 ಸಾವಿರ ನಗದು ವಶ:

ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಕಚೇರಿಯಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದ ಸುಮಾರು 50,000 ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಣವು ಸಾರ್ವಜನಿಕರಿಂದ ಅಕ್ರಮವಾಗಿ ಪಡೆದ ಲಂಚದ ಹಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Related Articles

Related image1
ಬಳ್ಳಾರಿ RDPR ಎಇಇ ತಿಪ್ಪೇಸ್ವಾಮಿಗೆ ಲೋಕಾಯುಕ್ತ ಶಾಕ್! ನಗದು, ಚಿನ್ನಾಭರಣ, ಕೋಟ್ಯಂತರ ಮೌಲ್ಯದ ಸೈಟ್‌ಗಳು ಪತ್ತೆ!
Related image2
Bengaluru: ಮದ್ಯದ ಲೆಕ್ಕದಲ್ಲಿ ಗೋಲ್ಮಾಲ್: ಅಬಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಸರಣಿ ದಾಳಿ
35
Image Credit : Asianet News

ಖಾಸಗಿ ವ್ಯಕ್ತಿಗಳ ವಿಚಾರಣೆ:

ಕಚೇರಿಯ ಒಳಗೆ ಅನಧಿಕೃತವಾಗಿ ಓಡಾಡಿಕೊಂಡಿದ್ದ ಕೆಲವು ಖಾಸಗಿ ವ್ಯಕ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರನ್ನು ಪೀಡಿಸುತ್ತಿದ್ದ ಮಧ್ಯವರ್ತಿಗಳ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಬಾಂಡ್ ರೈಟರ್‌ಗಳ (Bond Writers) ಬಳಿ ಇದ್ದ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.

45
Image Credit : Asianet News

ತಂಡದಲ್ಲಿ ಯಾರಿದ್ದರು?

ಲೋಕಾಯುಕ್ತ ಡಿವೈಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ತಂಡದಲ್ಲಿ ಸಿಪಿಐ ಆನಂದ ಟಕ್ಕನವರ, ಸಿಪಿಐ ಆನಂದ ಡೊಣ್ಣಿ ಹಾಗೂ ಲೋಕಾಯುಕ್ತದ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಕಚೇರಿಯ ಪ್ರತಿಯೊಂದು ವಿಭಾಗದ ದಾಖಲೆಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.

55
Image Credit : Asianet News

ಮುಂದುವರಿಯಲಿರುವ ಪರಿಶೀಲನೆ:

ಮೂಲಗಳ ಪ್ರಕಾರ, ಕಚೇರಿಯಲ್ಲಿನ ದಾಖಲೆಗಳ ಪ್ರಮಾಣ ಹೆಚ್ಚಿರುವುದರಿಂದ ಈ ಪರಿಶೀಲನಾ ಕಾರ್ಯವು ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ. ದಾಳಿಯ ವೇಳೆ ಸಿಕ್ಕಿರುವ ನಗದು ಹಾಗೂ ದಾಖಲೆಗಳಲ್ಲಿನ ವ್ಯತ್ಯಾಸಗಳ ಬಗ್ಗೆ ವರದಿ ಸಿದ್ಧಪಡಿಸಿದ ನಂತರ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ನಡೆಯುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಲೋಕಾಯುಕ್ತರ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಪರಿಶೀಲನೆಯ ನಂತರ ಮತ್ಯಾವ ದೊಡ್ಡ ತಿಮಿಂಗಿಲಗಳು ಬಲೆಗೆ ಬೀಳಲಿವೆ ಎಂಬುದನ್ನು ಕಾದು ನೋಡಬೇಕಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಲೋಕಾಯುಕ್ತ

Latest Videos
Recommended Stories
Recommended image1
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
Recommended image2
ಬೆಂಗಳೂರು ಫುಟ್‌ಪಾತ್ ಕ್ಲೀನ್ ಅಪ್: ಒಂದೇ ದಿನ 13 KM ಒತ್ತುವರಿ ತೆರವು; ನೂರಾರು ಪೆಟ್ಟಿಅಂಗಡಿ, ತಳ್ಳುಗಾಡಿ ಎತ್ತಂಗಡಿ
Recommended image3
Kottur Bindu: ಉಗಾಂಡಾದಲ್ಲಿ ಕೊಟ್ಟೂರು ಮೂಲದ ಯುವತಿ ಸಾವು: ಪಾರ್ಥಿವ ಶರೀರ ತರಲು ನೆರವಾದ ತರಳಬಾಳು ಶ್ರೀಗಳು
Related Stories
Recommended image1
ಬಳ್ಳಾರಿ RDPR ಎಇಇ ತಿಪ್ಪೇಸ್ವಾಮಿಗೆ ಲೋಕಾಯುಕ್ತ ಶಾಕ್! ನಗದು, ಚಿನ್ನಾಭರಣ, ಕೋಟ್ಯಂತರ ಮೌಲ್ಯದ ಸೈಟ್‌ಗಳು ಪತ್ತೆ!
Recommended image2
Bengaluru: ಮದ್ಯದ ಲೆಕ್ಕದಲ್ಲಿ ಗೋಲ್ಮಾಲ್: ಅಬಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಸರಣಿ ದಾಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved