ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ; ಮುಂದಿನ 4 ದಿನ ಎಲ್ಲೆಲ್ಲಿ ಮಳೆ?
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದ್ದು, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಹವಾಮಾನ ಇಲಾಖೆಯು ಕಲಬುರಗಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ರೂಪಗೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. (ಸಾಂದರ್ಭಿಕ ಚಿತ್ರ)
ರಾಜ್ಯದಲ್ಲಿ 4 ದಿನ ಮಳೆ
ವಾಯುಭಾರ ಕುಸಿತದಿಂದಾಗಿ ಮುಂದಿನ 4 ದಿನ ಅತ್ಯಧಿಕ ಮಳೆಯಾಗಲಿದೆ. ರಾಜ್ಯದ ಕಲಬುರಗಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
ಸಾಧಾರಣ ಮಳೆ
ಇನ್ನುಳಿದಂತೆ ಕೊಡಗು, ಕೋಲಾರ , ಹಾಸನ ಮತ್ತು ಚಾಮರಾಜನಗರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
ಓಡಿಶಾದಲ್ಲಿ ಕಟ್ಟೆಚ್ಚರ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ರೂಪುಗೊಳ್ಳುತ್ತಿರುವುದರಿಂದ ಒಡಿಶಾದ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರದಲ್ಲಿವೆ. ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದಿಂದಾಗಿ, ಅಕ್ಟೋಬರ್ 27 ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)
ಮೂರು ದಿನ ಮಳೆ ಜೊತೆ ವೇಗದ ಗಾಳಿ
ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆಯಾಗಬಹುದು. ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ. ಈ ಚಂಡಮಾರುತಕ್ಕೆ ರಾಜ್ಯವು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
ಇದನ್ನೂ ಓದಿ: ಅರ್ಹರು ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಣೆ: ಮುನಿಯಪ್ಪ ಭರವಸೆ
ಚಂಡಮಾರುತ ಮತ್ತು ಮಳೆಯ ಎಚ್ಚರಿಕೆ
ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 27, 28 ಮತ್ತು 29 ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 26 ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಪರಿಹಾರ ಕೇಂದ್ರಗಳಿಗೆ ಅಗತ್ಯ ಆಹಾರ ಸಾಮಾಗ್ರಿ ಪೂರೈಕೆ ಮಾಡಲಾಗಿದೆ ಎಂದು ಸುರೇಶ್ ಪೂಜಾರಿ ಮಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
ಇದನ್ನೂ ಓದಿ: ಲಾಲ್‌ಬಾಗ್ ಅಡಿಯಲ್ಲಿ ಸುರಂಗ ಮಾರ್ಗ: ಜಿಎಸ್‌ಐ ಅಭಿಪ್ರಾಯ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ