MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
PM Narendra Modi Birthday
IPL Auction Update
Karnataka Cabinet Meeting
UPI Payment Charges
Nelamangala Metro Connectivity
Karnataka Congress District Presidents
Dharwad Tehsildar
Bengaluru PVR INOX Fined 75K
Gadag's Bhishma Lake
Koppal Ancient Inscription
Coastal Karnataka Railway Connectivity
Sakleshpur Railway Project
  • Home
  • Karnataka Districts
  • ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ

ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ

ಮಾದಾವರ-ತುಮಕೂರು ಮೆಟ್ರೋ ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧವಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುಮಾರು 20 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯನ್ನು  ಪಿಪಿಪಿ ಕೈಗೆತ್ತಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.

2 Min read
Author : Gowthami K
Published : May 24 2026, 10:56 AM IST
Share this Photo Gallery
  • FB
  • TW
  • Linkdin
  • Whatsapp
15
ಮಾದಾವರ ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್‌ ಸಿದ್ಧ
Image Credit : Gemini

ಮಾದಾವರ-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್‌ ಸಿದ್ಧ

ಬೆಂಗಳೂರು: ಮಾದಾವರ- ತುಮಕೂರು ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ವಿಧಾನಸೌಧದಲ್ಲಿ ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿಯನ್ನು ಸ್ವೀಕರಿಸಿದ ಬಳಿಕ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘೋಷಣೆಯಂತೆ ಹೈದರಾಬಾದ್ ಮೂಲದ ಕಂಪನಿಗೆ 3.5 ಕೋಟಿ ರು. ವೆಚ್ಚದಲ್ಲಿ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಜವಾಬ್ದಾರಿ ನೀಡಲಾಗಿತ್ತು. ಆ ವರದಿಯಲ್ಲಿ ಯೋಜನೆ ಜಾರಿ ಸಾಧ್ಯ ಎಂದು ಶಿಫಾರಸು ಮಾಡಲಾಗಿತ್ತು. ಅದರ ಬೆನ್ನಲ್ಲೇ ಮೆಟ್ರೋ ಅಧಿಕಾರಿಗಳು ಟೆಂಡರ್ ಕರೆದು ಡಿಪಿಆರ್ ಸಿದ್ಧಪಡಿಸುವ ಕೆಲಸ ವಹಿಸಿದ್ದರು. ಈಗ ಆ ಕಂಪನಿಯು ಡಿಪಿಆರ್ ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸಿದೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸಾರ್ವಜನಿಕ-ಖಾಸಗಿ ಸಹಭಾಗಿತ್ವ
Image Credit : Asianet News

ಸಾರ್ವಜನಿಕ-ಖಾಸಗಿ ಸಹಭಾಗಿತ್ವ

ಸುಮಾರು 20 ಸಾವಿರ ಕೋಟಿ ರು. ವೆಚ್ಚದ ಈ ಬೃಹತ್ ಮೆಟ್ರೋ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ(ಪಿಪಿಪಿ) ಮಾದರಿಯಲ್ಲಿ ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಸಂಪುಟ ಸಭೆಯ ಅನುಮೋದನೆ ಸಿಕ್ಕ ತಕ್ಷಣ ಟೆಂಡರ್ ಕರೆಯುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.

Related Articles

Related image1
ಮಂಗಳೂರು-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಜೂ.19ರವರೆಗೆ ಬದಲಾವಣೆ, ಕಾರಣವೇನು?
Related image2
ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ
35
ನಿಯಮದ ಪ್ರಕಾರ ಕ್ರಮ
Image Credit : Asianet News

ನಿಯಮದ ಪ್ರಕಾರ ಕ್ರಮ

ಬಕ್ರೀದ್ ಕುರ್ಬಾನಿಗೆ‌ ರಕ್ಷಣೆ ಕೋರಿ ವಕ್ಫ್ ಪರಿಷತ್ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ. ನಿಯಮಾವಳಿಗಳ ಪ್ರಕಾರ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದರು. ಹಾಗೆಯೇ ಲಾಡ್ಲೆ ಮಶಾಕ್‌ ದರ್ಗಾಕ್ಕೆ ಸಂಬಂಧಿಸಿದ ಪ್ರಕರಣ ಹಿಂಪಡೆದಿರುವುದಕ್ಕೆ ವಿರೋಧಿಸುವುದು ಬಿಜೆಪಿಯವರಿಗೆ ಬಿಟ್ಟ ವಿಚಾರ. ಕಾಂಗ್ರೆಸ್ ಸರ್ಕಾರ ಸಂವಿಧಾನದ ತತ್ವಗಳನ್ನು ಪಾಲಿಸುತ್ತಿದೆ. ಸಂವಿಧಾನವು ಎಲ್ಲರನ್ನೂ ಸಮಾನವಾಗಿ ಕಾಣಲು ಹೇಳುತ್ತದೆ. ಹಿಂದುಳಿದ, ಶೋಷಿತ ಮತ್ತು ನಿರ್ಲಕ್ಷಿತ ವರ್ಗಗಳ ಪರವಾಗಿ ಕೆಲಸ ಮಾಡುವುದು ಕಾಂಗ್ರೆಸ್‌ನ ಕರ್ತವ್ಯವಾಗಿದ್ದು, ಅದನ್ನು ನಾವು 1947 ರಿಂದಲೂ ಮಾಡಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

45
ಕಾಕ್ರೋಚ್ ಜನತಾ ಪಾರ್ಟಿ ಬಹಿರಂಗ ಸಭೆಗೆ ಪೊಲೀಸರ ನಿರಾಕರಣೆ
Image Credit : Asianet News

ಕಾಕ್ರೋಚ್ ಜನತಾ ಪಾರ್ಟಿ ಬಹಿರಂಗ ಸಭೆಗೆ ಪೊಲೀಸರ ನಿರಾಕರಣೆ

ಟೌನ್‌ಹಾಲ್ ಬಳಿ ನಾಳೆ ನಡೆಯಬೇಕಿದ್ದ ಕಾಕ್ರೋಚ್ ಜನತಾ ಪಾರ್ಟಿ ಬಹಿರಂಗ ಸಭೆಗೆ ಪೊಲೀಸ್ ಅನುಮತಿ ನಿರಾಕರಿಸಿರುವ ಕುರಿತು ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಸಭೆ ಮಾಡುತ್ತಿದ್ದಾರೆ, ಯಾರೆಲ್ಲ ಬರುತ್ತಾರೆ ಎಂದು ಪೊಲೀಸರು ಪರಿಶೀಲಿಸುತ್ತಾರೆ, ಅನುಮತಿ ಕೊಡುವುದು, ಬಿಡುವುದು ಪೊಲೀಸರಿಗೆ ಬಿಟ್ಟ ವಿಚಾರ. ಎಂದು ಹೇಳಿದರು.

55
ದರ್ಶನ್ ಆತ್ಮ*ಹತ್ಯೆ ಯತ್ನ ವದಂತಿ
Image Credit : X

ದರ್ಶನ್ ಆತ್ಮ*ಹತ್ಯೆ ಯತ್ನ ವದಂತಿ

ದರ್ಶನ್ ಆತ್ಮ*ಹತ್ಯೆ ಯತ್ನ ವದಂತಿ ವಿಚಾರದ ಬಗ್ಗೆ ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದಾಗ, ಅಂತಹ ಘಟನೆ ನಡೆದಿಲ್ಲ ಎಂದರು. ಇದರ ಹೊರತು ಬೇರೆ ವಿಚಾರ ಇಲ್ಲ ಎಂದು ಡಾ. ಪರಮೇಶ್ವರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ನಮ್ಮ ಮೆಟ್ರೋ
ಕರ್ನಾಟಕ ಸುದ್ದಿ
ಬಿಎಂಆರ್‌ಸಿಎಲ್
 

Latest Videos
Recommended Stories
Recommended image1
ಮಳೆಗಾಲದಲ್ಲೇ ಬರಿದಾಗುತ್ತಿದೆ ಗದಗಿನ ಐತಿಹಾಸಿಕ ಭೀಷ್ಮ ಕೆರೆ; ತುಂಗಭದ್ರಾ ನದಿ ತುಂಬಿದ್ದರೂ ನೀರಿನ ದಾಹ ನೀಗುತ್ತಿಲ್ಲ
Recommended image2
ಲೋಕಸಭೆಗೆ ಸ್ಪರ್ಧಿಸಲ್ಲ, ವಿಧಾನಸಭೆಗೆ ರೆಡಿ; ಜಿ.ಎಂ.ಸಿದ್ದೇಶ್ವರ ಖಡಕ್‌ ಸಂದೇಶ
Recommended image3
'6 ತಿಂಗಳಲ್ಲಿ ಕೆಲಸ ಮಾಡಿ ಇಲ್ಲದಿದ್ರೆ..' ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಹೈಕಮಾಂಡ್ ನೀಡಿದ ಎಚ್ಚರಿಕೆ ಏನು?
Related Stories
Recommended image1
ಮಂಗಳೂರು-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಜೂ.19ರವರೆಗೆ ಬದಲಾವಣೆ, ಕಾರಣವೇನು?
Recommended image2
ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved