ಮಹಾಶಿವರಾತ್ರಿ; ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ, ಜಮೀರ್ ಜತೆಗಿದ್ದರು
First Published Mar 11, 2021, 7:32 PM IST
ಬೆಂಗಳೂರು (ಮಾ. 11) ಮಹಾಶಿವರಾತ್ರಿ ಸಂಭ್ರಮ. ಎಲ್ಲ ಕಡೆ ಶಿವನ ಆರಾಧನೆ ನಡೆದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಶಿವರಾತ್ರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಜತೆ ಶಾಸಕ ಜಮೀರ್ ಅಹಮದ್ ಖಾನ್ ಇದ್ದರು.

ಬಜೆಟ್ ಅಧಿವೇಶನ ನಡೆಯುತ್ತಿದ್ದು ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದರು.

ಶಿವನ ಆರಾಧನೆ ನಡೆಯುತ್ತಿದ್ದು ಹಲವು ದೇವಾಲಯಗಳಲ್ಲಿ ಜಾಗರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.