MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮಂಡ್ಯ ಕೌಟುಂಬಿಕ ಕಲಹಕ್ಕೆ ದಂಪತಿ ಸಾವು; ಮಗುವಿನ ಕತ್ತು ಹಿಸುಕಿದ್ದಾಗ ಪ್ರಜ್ಞೆ ತಪ್ಪಿದ್ದ ಕಂದಮ್ಮ ಪಾರು!

ಮಂಡ್ಯ ಕೌಟುಂಬಿಕ ಕಲಹಕ್ಕೆ ದಂಪತಿ ಸಾವು; ಮಗುವಿನ ಕತ್ತು ಹಿಸುಕಿದ್ದಾಗ ಪ್ರಜ್ಞೆ ತಪ್ಪಿದ್ದ ಕಂದಮ್ಮ ಪಾರು!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ಸಾವಿಗೆ ಶರಣಾಗಿದ್ದಾರೆ. ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವಿನ ಪ್ರಾಣ ತೆಗೆಯಲು ಯತ್ನಿಸಿದ್ದು, ಮಗು ಪ್ರಜ್ಞೆ ತಪ್ಪಿದಾಗ ಅವರು ನೇಣು ಬಿಗಿದುಕೊಂಡಿದ್ದಾರೆ. ಅದೃಷ್ಟವಶಾತ್, ಮಗು ಪ್ರಾಣಾಪಾಯದಿಂದ ಪಾರಾಗಿದೆ.

2 Min read
Author : Sathish Kumar KH
Published : Mar 09 2026, 12:37 PM IST
Share this Photo Gallery
  • FB
  • TW
  • Linkdin
  • Whatsapp
16
ಮಗು ಕತ್ತುಹಿಸುಕಿ ನೇಣಿಗೆ ಶರಣಾದ ದಂಪತಿ
Image Credit : Asianet News

ಮಗು ಕತ್ತುಹಿಸುಕಿ ನೇಣಿಗೆ ಶರಣಾದ ದಂಪತಿ

ಮಂಡ್ಯ (ಮಾ.09): ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕ್ಷಣಿಕ ಆವೇಶ ಮತ್ತು ಕೌಟುಂಬಿಕ ಕಲಹವು ಒಂದು ಸುಂದರ ಸಂಸಾರವನ್ನು ಮಸಣಕ್ಕೆ ತಳ್ಳಿದೆ. ಪತಿ-ಪತ್ನಿ ಇಬ್ಬರೂ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದು, ಸಾವಿನ ದವಡೆಯಿಂದ ಎರಡು ವರ್ಷದ ಮಗು ಪವಾಡದಂತೆ ಪಾರಾಗಿದೆ.

26
ಘಟನೆಯ ಹಿನ್ನೆಲೆ:
Image Credit : Asianet News

ಘಟನೆಯ ಹಿನ್ನೆಲೆ:

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದ ಮೂಲದ ದರ್ಶನ್ ಮತ್ತು ದಿವ್ಯಶ್ರೀ ಮೃತಪಟ್ಟ ದಂಪತಿಗಳು. ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಸುಂದರವಾದ ಬದುಕು ಕಟ್ಟಿಕೊಳ್ಳಬೇಕಿದ್ದ ಈ ದಂಪತಿಗಳ ನಡುವೆ ಇತ್ತೀಚೆಗೆ ಸಣ್ಣಪುಟ್ಟ ಕೌಟುಂಬಿಕ ವಿಚಾರವಾಗಿ ಭಿನ್ನಾಭಿಪ್ರಾಯಗಳು ಮೂಡಿದ್ದವು ಎನ್ನಲಾಗಿದೆ.

Related Articles

Related image1
ಫ್ಯಾಮಿಲಿ ಟ್ರಿಪ್‌ ನೆಪದಲ್ಲಿ ರಾಜಧಾನಿಗೆ 7.5 ಕೋಟಿ ಮೊತ್ತದ ಹೆರಾಯಿನ್ ಸಾಗಿಸುತ್ತಿದ್ದ ದಂಪತಿ ಅಂದರ್
Related image2
ಬಾರ್‌ಗೆ ಕುಡಿಯಲು ಬಂದ ದಂಪತಿ ಬಳಿ ಗಾಂಜಾ ಕೇಳಿ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ
36
ಕಂದಮ್ಮನ ಮೇಲೆ ನಡೆದ ದೌರ್ಜನ್ಯ:
Image Credit : Asianet News

ಕಂದಮ್ಮನ ಮೇಲೆ ನಡೆದ ದೌರ್ಜನ್ಯ:

ಇಂದು ಬೆಳಿಗ್ಗೆ ಇಬ್ಬರ ನಡುವೆ ಕಲಹ ವಿಕೋಪಕ್ಕೆ ಹೋಗಿದ್ದು, ಮನನೊಂದ ದಂಪತಿಗಳು ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತಾವು ಈ ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವನ್ನೂ ಜೊತೆಗೆ ಕರೆದೊಯ್ಯಲು ನಿರ್ಧರಿಸಿದ ದಂಪತಿಗಳು, ಮಗುವಿನ ಕತ್ತು ಹಿಸುಕಿ ಪ್ರಾಣ ತೆಗೆಯಲು ಯತ್ನಿಸಿದ್ದಾರೆ. ಮಗು ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದಾಗ, ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಪೋಷಕರು ನಂತರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

46
ಅದೃಷ್ಟವಶಾತ್ ಬದುಕಿದ ಮಗು:
Image Credit : Asianet News

ಅದೃಷ್ಟವಶಾತ್ ಬದುಕಿದ ಮಗು:

ದಂಪತಿಗಳು ಅಂತಿಮ ನಿರ್ಧಾರ ಕೈಗೊಂಡ ನಂತರ ಮನೆಯಲ್ಲಿ ಮಗುವಿನ ಅಳುವಿನ ಧ್ವನಿ ಕೇಳಿ ಬಂದಾಗ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಪರಿಶೀಲಿಸಿದಾಗ ದಂಪತಿಗಳು ಮೃತಪಟ್ಟಿದ್ದು, ಮಗು ಮಾತ್ರ ಉಸಿರಾಡುತ್ತಿರುವುದು ಕಂಡುಬಂದಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದೆ. ಆದರೆ ಕಣ್ಣೆದುರೇ ಪೋಷಕರನ್ನು ಕಳೆದುಕೊಂಡ ಮಗು ಈಗ ಅನಾಥವಾಗಿದೆ.

56
ತನಿಖೆ ಕೈಗೊಂಡ ಪೊಲೀಸರು:
Image Credit : Asianet News

ತನಿಖೆ ಕೈಗೊಂಡ ಪೊಲೀಸರು:

ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ದಂಪತಿಗಳ ಇಂತಹ ಕಠಿಣ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.

66
ಸಹಾಯವಾಣಿ:
Image Credit : Asianet News

ಸಹಾಯವಾಣಿ:

ಜೀವನದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಾವು ಒಂದೇ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ತಜ್ಞರ ಸಲಹೆ ಪಡೆಯಿರಿ. ಸಹಾಯಕ್ಕಾಗಿ ಸರ್ಕಾರಿ ಸಹಾಯವಾಣಿ 'ಆರೋಗ್ಯ ಸಹಾಯವಾಣಿ 104' ಅಥವಾ 'ಸಹಾಯ್' ನಂತಹ ಸಂಸ್ಥೆಗಳನ್ನು ಸಂಪರ್ಕಿಸಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಮಂಡ್ಯ
ಪ್ರೀತಿ
ಕುಟುಂಬ

Latest Videos
Recommended Stories
Recommended image1
ನವಮಂಗಳೂರು ಬಂದರಿಗೆ ಬಂದಿಳಿದ 600ಕ್ಕೂ ಹೆಚ್ಚು ವಿದೇಶಿ ಅತಿಥಿಗಳು: ಕರಾವಳಿ ಸಂಸ್ಕೃತಿಯ ವೈಭವಕ್ಕೆ ಪ್ರವಾಸಿಗರು ಫಿದಾ!
Recommended image2
ಗ್ಯಾಂಗ್‌ಸ್ಟರ್ ರವಿ ಪೂಜಾರಿ ಬೆಂಗಳೂರಿಗೆ ವಾಪಸ್: ಮುಂಬೈ ಪೊಲೀಸರ ವಿಚಾರಣೆ ಅಂತ್ಯ, ಕೋರ್ಟ್‌ಗೆ ಹಾಜರು!
Recommended image3
ಗದಗ: ರೋಗಿಗಳನ್ನ ಸಾಗಿಸಬೇಕಿದ್ದ ಜಿಮ್ಸ್ ಆಂಬುಲೆನ್ಸ್‌ನಲ್ಲಿ ಕುರಿಗಳಂತೆ ಪ್ರಯಾಣಿಕರ ಸಾಗಾಟ! ವಿಡಿಯೋ ವೈರಲ್
Related Stories
Recommended image1
ಫ್ಯಾಮಿಲಿ ಟ್ರಿಪ್‌ ನೆಪದಲ್ಲಿ ರಾಜಧಾನಿಗೆ 7.5 ಕೋಟಿ ಮೊತ್ತದ ಹೆರಾಯಿನ್ ಸಾಗಿಸುತ್ತಿದ್ದ ದಂಪತಿ ಅಂದರ್
Recommended image2
ಬಾರ್‌ಗೆ ಕುಡಿಯಲು ಬಂದ ದಂಪತಿ ಬಳಿ ಗಾಂಜಾ ಕೇಳಿ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved