- Home
- Karnataka Districts
- ಫೇಸ್‌ಬುಕ್ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ಫೇಸ್‌ಬುಕ್ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ ಪೊಲೀಸರಿಗೆ ದೂರು ನೀಡಿದ್ದು, ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಶಂಕಿಸಲಾಗಿದೆ.

ಮಂಡ್ಯದಿಂದ ಮಡಿಕೇರಿಗೆ ಬಂದ
ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿ ಭೇಟಿಗಾಗಿ ಮಂಡ್ಯದಿಂದ ಮಡಿಕೇರಿಗೆ ಬಂದಿದ್ದ ಯುವಕ ಅಕ್ಷರಶಃ ನರಕ ನೋಡಿದ್ದಾನೆ. ಮಡಿಕೇರಿಗೆ ಬಂದಿದ್ದ ಯುವಕನನ್ನು ಮನೆಯೊಂದರಲ್ಲಿ ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು.
ಒಂಟಿ ಮನೆ
ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹದೇವ್ ಶುಕ್ರವಾರ ಸಂಜೆ ಮಡಿಕೇರಿಗೆ ಬಂದಿದ್ದಾನೆ. ಮಹದೇವ್‌ಗೆ ಫೇಸ್‌ಬುಕ್‌ನಲ್ಲಿ ಯುವತಿಯೊಬ್ಬಳ ಪರಿಚಯವಾಗಿತ್ತು. ಯುವತಿಯ ಭೇಟಿಗಾಗಿಯೇ ಮಡಿಕೇರಿಗೆ ಬಂದಿದ್ದನು. ಒಂಟಿಯಾಗಿ ಬಂದಿದ್ದ ಮಹದೇವ್‌ನನ್ನು ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು.
ಹಣಕ್ಕಾಗಿ ಬೇಡಿಕೆ
ಹಣಕ್ಕಾಗಿ ಬೇಡಿಕೆ ಇರಿಸಿದ್ದ ಮೂವರು, ರಾತ್ರಿಯೆಲ್ಲಾ ಮಹದೇವ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಣ ನೀಡುವಂತೆ ಮಹದೇವ್‌ಗೆ ಹೇಳಿದ್ದಾರೆ. ಮೂವರಿಂದ ಮಹದೇವ್ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಬಂದಿದ್ದಾನೆ. ಮಹದೇವ್‌ನನ್ನು ಬೆನ್ನಟ್ಟಿದ ಮೂವರು ಆಟೋದಲ್ಲಿ ಅಪಹರಣ ಮಾಡಲು ಮುಂದಾಗಿದ್ದಾರೆ. ಅಪಹರಣಕ್ಕೆ ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಬೆತ್ತಲೆಯಾಗಿ ಓಡೋಡಿ ಬಂದ
ಅಲ್ಲಿಂದಲೂ ಮೂವರಿಂದ ತಪ್ಪಿಸಿಕೊಂಡ ಮಹದೇವ್, ಮಡಿಕೇರಿ ನಗರ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಹದೇವ್ ಹೇಳಿದ ಸ್ಥಳಕ್ಕೆ ಪೊಲೀಸರು ಭೇಟಿ ನೀಡುವಷ್ಟರಲ್ಲಿ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಹನಿಟ್ರ್ಯಾಪ್ ಶಂಕೆ
ಮಹದೇವ್ ಹಲ್ಲೆಗೆ ಬಳಸಲಾಗದ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೊಂದು ಹನಿಟ್ರ್ಯಾಪ್ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
