MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಗಂಟೆಗೆ 15 ಲಕ್ಷ ರೂ. ವೆಚ್ಚ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ, ರೈತರಿಗೆ ನೆರವು

ಗಂಟೆಗೆ 15 ಲಕ್ಷ ರೂ. ವೆಚ್ಚ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ, ರೈತರಿಗೆ ನೆರವು

ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

2 Min read
Author : Kannadaprabha News
Published : Jul 07 2026, 08:54 AM IST
Share this Photo Gallery
  • FB
  • TW
  • Linkdin
  • Whatsapp
18
ಮೋಡ ಬಿತ್ತನೆಯ ವಿಶೇಷ ವಿಮಾನಕ್ಕೆ ಚಾಲನೆ
Image Credit : Satish Jarkiholi FB

ಮೋಡ ಬಿತ್ತನೆಯ ವಿಶೇಷ ವಿಮಾನಕ್ಕೆ ಚಾಲನೆ

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಮೋಡ ಬಿತ್ತನೆ ಅವಶ್ಯವಿದ್ದು ಇದು ಸರ್ಕಾರದಿಂದಲೇ ಈ ಕಾರ್ಯವಾಗಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಲೋಕೋಪಯೋಗಿ ಸಚಿವ, ಧಾರವಾಡ, ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆ ಉಸ್ತುವಾರಿ ಮಂತ್ರಿ ಸತೀಶ ಜಾರಕಿಹೊಳಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಭಾಗದಲ್ಲಿ ಮೋಡ ಬಿತ್ತನೆಯ ವಿಶೇಷ ವಿಮಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
 ಮಳೆ ಕೊರತೆಯಿಂದ ಮೋಡ ಬಿತ್ತನೆ
Image Credit : Satish Jarkiholi FB

ಮಳೆ ಕೊರತೆಯಿಂದ ಮೋಡ ಬಿತ್ತನೆ

ಹಾವೇರಿಯಲ್ಲಿ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಈ ಹಿಂದೆ ಸಭೆ ನಡೆಸಿ, ಮೋಡ ಬಿತ್ತನೆ ಕುರಿತು ಚರ್ಚಿಸಲಾಗಿತ್ತು. ಮುಂದುವರಿದ ಭಾಗವಾಗಿ ವಿಶೇಷ ವಿಮಾನದ ಮೂಲಕ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದು ಸರ್ಕಾರದ ಕಾರ್ಯಕ್ರಮ ಆಗಬೇಕು ಎನ್ನುವುದು ನಮ್ಮ ಆಶಯ. ಮಳೆ ಕೊರತೆಯಿಂದ ರೈತರಿಗೆ ಉಂಟಾಗಿರುವ ಸಮಸ್ಯೆ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದರು.

Related Articles

Related image1
ಬೆಂಕಿಯಂತಹ ಬರಗಾಲದಲ್ಲೂ ರಾಜ್ಯದಲ್ಲಿ ಮಾಯದಂಥ ಮಳೆ ಬಂತಣ್ಣ! ಕರಾವಳಿ, ಮಲೆನಾಡಲ್ಲಿ ಪುನರ್ವಸು ಮಳೆ ಅಬ್ಬರ । 12 ತಾಲೂಕಿನ ಶಾಲೆಗಳಿಗಿಂದು ರಜೆ ಘೋಷಣೆ!
Related image2
ಮಳೆ ಕೊರತೆಯಿಂದ ಬೆಳೆ ಒಣಗುತ್ತಿದೆ; ಮೋಡ ಬಿತ್ತನೆ ಮಾಡುವಂತೆ ಶಾಸಕ ಕೋನರೆಡ್ಡಿ ಪತ್ರ
38
ಪರಿಹಾರಕ್ಕೆ ಕ್ರಮ
Image Credit : Satish Jarkiholi FB

ಪರಿಹಾರಕ್ಕೆ ಕ್ರಮ

ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಮುಂಗಾರು ಬೆಳೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿಯ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆ ವರದಿ ಬಂದ ಬಳಿಕ ಸರ್ಕಾರ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. ಬ್ಯಾಂಕ್‌ಗಳು ಮತ್ತು ವಿಮಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

48
ಒಂದು ಗಂಟೆಗೆ 15 ಲಕ್ಷ ವೆಚ್ಚ
Image Credit : Satish Jarkiholi FB

ಒಂದು ಗಂಟೆಗೆ 15 ಲಕ್ಷ ವೆಚ್ಚ

ಮೋಡ ಬಿತ್ತನೆ ಕಾರ್ಯಕ್ರಮದ ನೇತೃತ್ವ ವಹಿಸಿದ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ರೈತರ ಒಳಿತಿಗಾಗಿ ಹಾವೇರಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಸೇರಿ ಈ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ 3 ದಿನ ನಿರಂತರ ಮೋಡ ಬಿತ್ತನೆ ನಡೆಯಲಿದೆ. ವಿಶೇಷ ವಿಮಾನ ಒಂದು ತಿಂಗಳು ಹುಬ್ಬಳ್ಳಿಯಲ್ಲೇ ಇರಲಿದ್ದು, ತೇವಾಂಶ ಸಿಕ್ಕಾಗ ವಿಜ್ಞಾನಿಗಳು ಹೇಳಿದ ಸಮಯಕ್ಕೆ ಮೋಡ ಬಿತ್ತನೆ ಮಾಡಲಾಗುವುದು. ಒಂದು ತಾಸಿಗೆ ₹15 ಲಕ್ಷ ವೆಚ್ಚವಾಗುತ್ತದೆ ಎಂದು ತಿಳಿಸಿದರು..

58
ವಿಳಂಬ ಏಕೆ?
Image Credit : Satish Jarkiholi FB

ವಿಳಂಬ ಏಕೆ?

ಉತ್ತರ ಕರ್ನಾಟಕ ಭಾಗದಲ್ಲಿ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬರದ ಛಾಯೆ ಆವರಿಸುತ್ತಿದ್ದರೂ ಸರ್ಕಾರ ಮೋಡ ಬಿತ್ತನೆಗೆ ಏಕೆ ವಿಳಂಬ ಮಾಡುತ್ತಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಪ್ರಶ್ನಿಸಿದರು.

ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮೋಡಗಳು ಕಾಣಿಸಿಕೊಳ್ಳುತ್ತಿದ್ದು, ಮೋಡ ಬಿತ್ತನೆಗೆ ಇದು ಸೂಕ್ತ ಸಮಯವಾಗಿದೆ. ಸರ್ಕಾರ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಅಧಿಕಾರಿಗಳ ಮಾತು ಕೇಳದೆ ವಿಜ್ಞಾನಿಗಳ ಮಾತು ಕೇಳಬೇಕು. ವಿಳಂಬ ಮಾಡದೆ ತಕ್ಷಣ ಮೋಡ ಬಿತ್ತನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

68
ಮೋಡ ಬಿತ್ತನೆ ಯಶಸ್ವಿ
Image Credit : Satish Jarkiholi FB

ಮೋಡ ಬಿತ್ತನೆ ಯಶಸ್ವಿ

ತಂತ್ರಜ್ಞಾನಗಳು ಸಾಕಷ್ಟು ಆವಿಷ್ಕಾರ ಆಗಿರುವುದರಿಂದ ಮೋಡ ಬಿತ್ತನೆ ಯಶಸ್ವಿಯಾಗುತ್ತಿದೆ. 2001 ಮತ್ತು 2017ರಲ್ಲಿ ಇಲ್ಲಿಂದಲೇ ಕಾರ್ಯಾಚರಣೆ ನಡೆಸಿದಾಗ, ಹುಬ್ಬಳ್ಳಿ ಸೇರಿ ಹಾವೇರಿ, ಗದಗ ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ರಕ್ಷಣಾ ಇಲಾಖೆ ವಿಮಾನಗಳು ಖಾಲಿ ನಿಂತಿರುತ್ತವೆ. ಮೋಡ ಬಿತ್ತನೆಗೆ ಅವುಗಳನ್ನು ಬಳಸಿಕೊಂಡು ರೈತರ ನೆರವಿಗೆ ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. 

78
ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ
Image Credit : Satish Jarkiholi FB

ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ

ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಹಾವೇರಿ ಭಾಗದಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಸರ್ಕಾರ ಅನುಮತಿ‌ ನೀಡದಿದ್ದರೆ, ಧಾರವಾಡ, ಗದಗ ಭಾಗದ‌ ಶಾಸಕರ ಸಹಕಾರದಲ್ಲಿ ನಾವೇ ಈ ಭಾಗದಲ್ಲೂ ಮೋಡ ಬಿತ್ತನೆ ಮಾಡುತ್ತೇವೆ ಎಂದರು.

88
ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಿ
Image Credit : Satish Jarkiholi FB

ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಿ

ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಧಾರವಾಡ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ನಡೆಸುವಂತೆ ಮನವಿ ಮಾಡಲಾಗಿದೆ. ಸರ್ಕಾರ ಈ ಕುರಿತು ಕ್ರಮಕೈಗೊಳ್ಳದಿದ್ದರೆ ಧಾರವಾಡ ಹಾಗೂ ಗದಗ ಜಿಲ್ಲೆಯ ಶಾಸಕರು ಒಗ್ಗೂಡಿ ಸ್ವಂತ ಪ್ರಯತ್ನದಿಂದ ಮೋಡ ಬಿತ್ತನೆ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು. ಮೋಡ ಬಿತ್ತನೆಗೆ ಬಳಸುವ ವಿಮಾನ ಒಂದು ತಿಂಗಳ ಕಾಲ ಈ ಭಾಗದಲ್ಲೇ ಲಭ್ಯವಿರುವುದರಿಂದ ಅಗತ್ಯವಿದ್ದರೆ ಅದರ ಪ್ರಯೋಜನ ಪಡೆಯಲು ಸಿದ್ಧರಾಗಿದ್ದೇವೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಹಾವೇರಿ
ಕ್ಷಾಮ
ರೈತರು
ಕರ್ನಾಟಕ ಮಳೆ
ಮಾನ್ಸೂನ್
ಸತೀಶ್ ಜಾರಕಿಹೊಳಿ
ಹೆಚ್. ಕೆ. ಪಾಟೀಲ

Latest Videos
Recommended Stories
Recommended image1
ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ
Recommended image2
33 ದಿನ ಯೋಗಸಮಾಧಿಗೆ ಹೋಗಿದ್ದ ರಾಚೋಟೇಶ್ವರ ಶ್ರೀಗಳ ಆರೋಗ್ಯ ಹೇಗಿದೆ? ವೈದ್ಯರಿಂದ ಮಾಹಿತಿ
Recommended image3
ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು? ಅರವತ್ತರ ಹರೆಯದಲ್ಲಿ ಅಪಾಯದ ಮುನ್ಸೂಚನೆ?
Related Stories
Recommended image1
ಬೆಂಕಿಯಂತಹ ಬರಗಾಲದಲ್ಲೂ ರಾಜ್ಯದಲ್ಲಿ ಮಾಯದಂಥ ಮಳೆ ಬಂತಣ್ಣ! ಕರಾವಳಿ, ಮಲೆನಾಡಲ್ಲಿ ಪುನರ್ವಸು ಮಳೆ ಅಬ್ಬರ । 12 ತಾಲೂಕಿನ ಶಾಲೆಗಳಿಗಿಂದು ರಜೆ ಘೋಷಣೆ!
Recommended image2
ಮಳೆ ಕೊರತೆಯಿಂದ ಬೆಳೆ ಒಣಗುತ್ತಿದೆ; ಮೋಡ ಬಿತ್ತನೆ ಮಾಡುವಂತೆ ಶಾಸಕ ಕೋನರೆಡ್ಡಿ ಪತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved