BSYಗೆ ಕೊರೋನಾ: ಶೀಘ್ರ ಗುಣಮುಖರಾಗಲು ಸಂಸದ ಬಿ. ವೈ. ರಾಘವೇಂದ್ರರಿಂದ ವಿಶೇಷ ಪೂಜೆ
ಶಿವಮೊಗ್ಗ(ಆ.03): ಡೆಡ್ಲಿ ಕೊರೋನಾ ವೈರಸ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೂ ಅಂಟಿದೆ. ಸಿಎಂ ಯಡಿಯೂರಪ್ಪ ಅವರಿಗೆ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಬಿಎಸ್‌ವೈ ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಪುತ್ರ ಹಾಗೂ ಸಂಸದ ಬಿ. ವೈ. ರಾಘವೇಂದ್ರ ಅವರು ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗಲಿ ಎಂದು ಶಿಕಾರಿಪುರದಲ್ಲಿ ಬಿಎಸ್‌ವೈ ಅವರ ಪುತ್ರ ಬಿ. ವೈ. ರಾಘವೇಂದ್ರ ಅವರಿಂದ ವಿಶೇಷ ಪೂಜೆ
ಶಿವಮೊಗ್ಗ ಜಿಲ್ಲೆಯಲ್ಲಿರುವ ಶಿಕಾರಿಪುರ ಪಟ್ಟಣ
ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿ. ವೈ. ರಾಘವೇಂದ್ರ
ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಡೆದ ವಿಶೇಷ ಪೂಜೆ
ಮುಖ್ಯಮಂತ್ರಿಗಳು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಹುಚ್ಚರಾಯಸ್ವಾಮಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಬಿ.ವೈ ರಾಘವೇಂದ್ರ
ಈ ಸಂದರ್ಭದಲ್ಲಿ ಬಿ.ವೈ ರಾಘವೇಂದ್ರ ಅವರ ಜೊತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು