ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ: ನಳಿನ್ ಕುಮಾರ್ ಕಟೀಲ್
ಉಡುಪಿ/ಕುಂದಾಪುರ(ನ.28): ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಪೂರ್ಣವಾಗಿ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟವಿಚಾರ, ಅವರು ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ, ಸಮಯ ಬಂದಾಗ ವಿಸ್ತರಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

<p>ರಾಜ್ಯಾದ್ಯಂತ ನಡೆಯುವ ಸರಣಿಗೆ ಅನುಗುಣವಾಗಿ, ಉಡುಪಿ ಗ್ರಾಮಾಂತರ, ಕುಂದಾಪುರ ಮಂಡಲ ಹಾಗೂ ಬೈಂದೂರು ಬಿಜೆಪಿ ಮಂಡಲದ ಆಶ್ರಯದಲ್ಲಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್ ಕುಮಾರ್ ಕಟೀಲ್ </p>
ರಾಜ್ಯಾದ್ಯಂತ ನಡೆಯುವ ಸರಣಿಗೆ ಅನುಗುಣವಾಗಿ, ಉಡುಪಿ ಗ್ರಾಮಾಂತರ, ಕುಂದಾಪುರ ಮಂಡಲ ಹಾಗೂ ಬೈಂದೂರು ಬಿಜೆಪಿ ಮಂಡಲದ ಆಶ್ರಯದಲ್ಲಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್ ಕುಮಾರ್ ಕಟೀಲ್
<p>ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಕಾಂಗ್ರೆಸ್ ಮಣ್ಣುಪಾಲು ಮಾಡಿದೆ. ಕಾಂಗ್ರೆಸ್ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಿದೆ ಬಿಟ್ಟರೆ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಗಾಂಧೀಜಿ ಕಂಡ ಕನಸನ್ನು ನರೇಂದ್ರ ಮೋದಿಯವರು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದ ಕಟೀಲ್</p>
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಕಾಂಗ್ರೆಸ್ ಮಣ್ಣುಪಾಲು ಮಾಡಿದೆ. ಕಾಂಗ್ರೆಸ್ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಿದೆ ಬಿಟ್ಟರೆ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಗಾಂಧೀಜಿ ಕಂಡ ಕನಸನ್ನು ನರೇಂದ್ರ ಮೋದಿಯವರು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದ ಕಟೀಲ್
<p>ರಾಜ್ಯದಲ್ಲಿ 96,000 ಸದಸ್ಯರಿರುವ 5808 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಶೇ.80ರಷ್ಟುಸದಸ್ಯ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ರಾಜ್ಯದಲ್ಲಿ ಪಕ್ಷದ ನಾಯಕರೂ, ಸಚಿವರೂ ಸೇರಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಗ್ರಾಮಾಂತರ ಜಿಲ್ಲೆಗಳಲ್ಲಿ ನ.27ರಿಂದ ಡಿ.3ರವರೆಗೆ 52 ಗ್ರಾಮ ಸ್ವರಾಜ್ ಸಮಾವೇಶಗಳನ್ನು ನಡೆಸಲಿದೆ ಎಂದರು.</p>
ರಾಜ್ಯದಲ್ಲಿ 96,000 ಸದಸ್ಯರಿರುವ 5808 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಶೇ.80ರಷ್ಟುಸದಸ್ಯ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ರಾಜ್ಯದಲ್ಲಿ ಪಕ್ಷದ ನಾಯಕರೂ, ಸಚಿವರೂ ಸೇರಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಗ್ರಾಮಾಂತರ ಜಿಲ್ಲೆಗಳಲ್ಲಿ ನ.27ರಿಂದ ಡಿ.3ರವರೆಗೆ 52 ಗ್ರಾಮ ಸ್ವರಾಜ್ ಸಮಾವೇಶಗಳನ್ನು ನಡೆಸಲಿದೆ ಎಂದರು.
<p>ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಕಾನೂನಿನ ವಿಚಾರ. ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ, ಅವರನ್ನು ಮಾತ್ರವಲ್ಲದೆ ಬೇರೆಯವರನ್ನೂ ಸಿಬಿಐ ತನಿಖೆ ಮಾಡುತ್ತಿದೆ ಎಂದರು.</p>
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಕಾನೂನಿನ ವಿಚಾರ. ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ, ಅವರನ್ನು ಮಾತ್ರವಲ್ಲದೆ ಬೇರೆಯವರನ್ನೂ ಸಿಬಿಐ ತನಿಖೆ ಮಾಡುತ್ತಿದೆ ಎಂದರು.