ಮತ್ತೆರಡು ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನೀಡಿದ ಜಿಲ್ಲಾಧಿಕಾರಿಗಳು
ಬೆಳಗಾವಿ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಯಚೂರಿನಲ್ಲಿ ಮಳೆಯಿಂದಾಗಿ ಬೆಳೆ ಹಾನಿಯ Befaru ಆತಂಕ ಎದುರಾಗಿದೆ. ಮಕ್ಕಳ ಸುರಕ್ಷತೆಗಾಗಿ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

ಬೆಳಗಾವಿಯ ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಅಬ್ಬರ ಹಿನ್ನೆಲೆ ರಜೆ ನೀಡಲಾಗಿದೆ.
ಜಿಲ್ಲೆಯ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲೂಕಿನ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಾವಣೆಗೆರೆಯಲ್ಲಿಯೂ ರಜೆ
ದಾವಣಗೆರೆ ನಗರ ಸೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ
ಭಾನುವಾರ ಸಂಜೆ ಆರಂಭವಾದ ಮಳೆಯಿಂದ ಬಿಸಿಲುನಾಡು ರಾಯಚೂರು ಮಲೆನಾಡಿನಂತಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಮಳೆಗೆ ಹತ್ತಿ ಬೆಳೆ ಹಾಗೂ ದಾಳಿಂಬೆ ಹಾಳಾಗುವ ಆತಂಕ ಎದುರಾಗಿದೆ. ಈಗಾಗಲೇ ಸುರಿದ ಮಳೆಗೆ ಹತ್ತಿ ಬೆಳೆ ನೆಲಕಚ್ಚಿದೆ.
ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ರಜೆ ನೀಡಲಾಗಿದೆ. ಮಳೆಯ ತೀವ್ರತೆಯನ್ನು ಗಮನಿಸಿಕೊಂಡು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ರಜೆ ಘೋಷಿಸಿಸುತ್ತಿದ್ದಾರೆ.