Coronavirus: ಕೋವಿಡ್ 3ನೇ ಅಲೆ ಎದುರಿಸಲು ಸಜ್ಜು: ಸಚಿವ ಬಿ.ಸಿ.ಪಾಟೀಲ್
ಹಿರೇಕೆರೂರು(ಡಿ.03): ಕೋವಿಡ್-19(Covid19) ಮೂರನೇ ಅಲೆ ಎದುರಿಸಲು ಹಿರೇಕೆರೂರು(Hirekerur) ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧವಾಗಿದ್ದು, ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ(BC Patil) ಹೇಳಿದ್ದಾರೆ.
ಹಿರೇಕೆರೂರಿನ(Hirekerur) ಕಚೇರಿಯಲ್ಲಿ ಭಾನುವಾರ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳ ತಹಸಿಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿ, ತಾಲೂಕಿನ ಎಲ್ಲ ವೈದ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಬಿ.ಸಿ. ಪಾಟೀಲ ಅವರು, ಚಿಕಿತ್ಸೆಗೆ ಅವಶ್ಯವಿರುವ ಆಕ್ಸಿಜನ್(Oxygen), ವೆಂಟಿಲೇಟರ್ ಸೇರಿದಂತೆ ಎಲ್ಲ ರೀತಿಯ ಚಿಕಿತ್ಸಾ ಉಪಕರಣಗಳು ಹಾಗೂ ಔಷಧಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ(Narendra Modi ) ಸೂಚನೆಯಂತೆ ಇಂದಿನಿಂದ(ಜ.03) 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ(Covid Vaccine0 ಹಾಕಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಹಾಗೂ ಮಕ್ಕಳ ಪಾಲಕರಲ್ಲಿ ಮತ್ತು ಮಕ್ಕಳಲ್ಲಿ(Children) ಜಾಗೃತಿ ಮೂಡಿಸುವ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳುವಂತೆ ಆದೇಶಿಸಿದ ಸಚಿವ ಬಿ.ಸಿ. ಪಾಟೀಲ
ಕೋವಿಡ್ 3ನೇ ಅಲೆಯನ್ನು ತಪ್ಪಿಸಲು ಹಾಗೂ ಒಮಿಕ್ರಾನ್(Omicron) ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಶಾಲಾ ಶಿಕ್ಷಕರು ಶಾಲೆಯ ಮಕ್ಕಳಲ್ಲಿ ಹಾಗೂ ಅವರ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದ ಸಚಿವ ಪಾಟೀಲ.
ಇದೇ ವೇಳೆ ಸಾರ್ವಜನಿಕರು ವೈದ್ಯರ ತಪಾಸಣೆ ಇಲ್ಲದೆ ಅಥವಾ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ಅನಧಿಕೃತವಾಗಿ ಔಷಧಿ ಪಡೆಯದೆ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡ ಸಚಿವರು