- Home
- Karnataka Districts
- Shivamogga: ಕೆರೆಯ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ: ಕ್ರೀಡಾಕೂಟ ಮುಗಿಸಿ ಮನೆಗೆ ವಾಪಸ್ ಆಗಬೇಕಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
Shivamogga: ಕೆರೆಯ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ: ಕ್ರೀಡಾಕೂಟ ಮುಗಿಸಿ ಮನೆಗೆ ವಾಪಸ್ ಆಗಬೇಕಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕೆರೆಯ ತಡೆಗೋಡೆಗೆ ಹೊಡೆದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ.

ಶಿವಮೊಗ್ಗ: ಕೆರೆಯ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ
ಡಿಕ್ಕಿಯಾದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ನಲ್ಲಿ 48 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಈ ಘಟನೆಯಲ್ಲಿ ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು, ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸಾಗರ: ಕೆರೆಯ ತಡೆಗೋಡೆಗೆ ಬಸ್ ಡಿಕ್ಕಿ, ಹತ್ತಕ್ಕೂ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!
ಘಟನೆ ಹೇಗಾಯ್ತು?
48 ಜನ ಪ್ರಯಾಣಿಕರನ್ನು ಹೊತ್ತು ಬಸ್ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ದುರಂತವೆಂದರೆ ಇದೇ ದಿನ ಸಾಗರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಆನಂದಪುರಕ್ಕೆ ಹಿಂದಿರುಗಲು ಬಸ್ ಕಾಯುತ್ತಿದ್ದವರಿಗೆ ಇದೇ ಬಸ್ ಸಿಕ್ಕಿದೆ. ಎಲ್ಲ ವಿದ್ಯಾರ್ಥಿಗಳು ಬಸ್ ಹತ್ತಿದ್ದಾರೆ. ಬಸ್‌ನಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರು ಸೇರಿ 48 ಜನರು ಪ್ರಯಾಣಿಸುತ್ತಿದ್ದರು. ಇನ್ನೇನು ಆನಂದಪುರ ಸಮೀಪಿಸಿತ್ತು.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಬಸ್ ಕಾಸ್ಪೋಡಿ ಕೆರೆಯ ಬಳಿ ಹೋಗುತ್ತಲೇ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ನೋಡನೋಡುತ್ತಿದ್ದಂತೆ ಬಸ್ ಕೆರೆಯ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ವಿದ್ಯಾರ್ಥಿಗಳು ಹೆಚ್ಚು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

