MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶಿವಮೊಗ್ಗ: ಕೊಲ್ಲೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ 40 ಜನರಿದ್ದ ಖಾಸಗಿ ಬಸ್ ಮನೆ ಮೇಲೆ ಪಲ್ಟಿ!

ಶಿವಮೊಗ್ಗ: ಕೊಲ್ಲೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ 40 ಜನರಿದ್ದ ಖಾಸಗಿ ಬಸ್ ಮನೆ ಮೇಲೆ ಪಲ್ಟಿ!

ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಕೊಲ್ಲೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ದಾವಣಗೆರೆ ಮೂಲದ ಸುಮಾರು 40 ಮಂದಿ ಪ್ರವಾಸಿಗರ ಸ್ಥತಿ ಏನಾಯ್ತ? ಇಲ್ಲಿದೆ ಮಾಹಿತಿ.

1 Min read
Author : Sathish Kumar KH
Published : Oct 02 2026, 03:05 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಶಿವಮೊಗ್ಗ (ಅ.02): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಪ್ರವಾಸಿ ಬಸ್ ರಸ್ತೆ ಪಕ್ಕದಲ್ಲಿದ್ದ ಮನೆಯೊಂದರ ಮೇಲೆ ಪಲ್ಟಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಕೊಲ್ಲೂರಿನಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ತೆರಳುತ್ತಿದ್ದ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಸುಮಾರು 40 ಮಂದಿ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Articles

Related image1
ಬಿಎಂಟಿಸಿ ಬಸ್ ಹತ್ತೋರಾರೂ ತಪ್ಪಿಸಿಕೊಳ್ಳೋಕೆ ಆಗಲ್ಲ; ಹೊಸ ಎಪಿಸಿ ವ್ಯವಸ್ಥೆ 30 ಬಸ್‌ಗಳಲ್ಲಿ ಜಾರಿ
Related image2
90Km ವೇಗದಲ್ಲಿದ್ದಾಗ ಎದ್ದು ನಿಂತ ಚಾಲಕ! ಜಮೀನಿಗೆ ನುಗ್ಗಿ ನಿಂತ ಖಾಸಗಿ ಬಸ್! ಭಯಾನಕ ವಿಡಿಯೋ ವೈರಲ್!
35
Image Credit : Asianet News

ಘಟನೆಯ ವಿವರ:

ಅಪಘಾತಕ್ಕೀಡಾದ ಬಸ್‌ನಲ್ಲಿ ದಾವಣಗೆರೆ ಮೂಲದ ಗಾರ್ಮೆಂಟ್ಸ್ ಒಂದರ ಕಾರ್ಮಿಕರು ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸಕ್ಕೆ ಬಂದಿದ್ದರು. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿಕೊಂಡು ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ, ಸಾಗರ ತಾಲೂಕಿನ ಕಲ್ಗಲ್-ಹಲಕೊಟ್ಟಿಗೆ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಬಸ್ ರಸ್ತೆಯಿಂದ ಪಕ್ಕಕ್ಕೆ ಜಾರಿ ಸಮೀಪದಲ್ಲಿದ್ದ ಮನೆಯ ಮೇಲ್ಛಾವಣಿಯ ಮೇಲೆ ಬಿದ್ದಿದೆ.

45
Image Credit : Asianet News

ಸ್ಥಳೀಯರಿಂದ ರಕ್ಷಣೆ - ತುಮರಿ ಆಸ್ಪತ್ರೆಗೆ ದಾಖಲು:

ಅಪಘಾತದ ಭೀಕರ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಗ್ರಾಮಸ್ಥರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಬಸ್‌ನೊಳಗೆ ಸಿಲುಕಿಕೊಂಡಿದ್ದ ಸುಮಾರು 40 ಮಂದಿ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

55
Image Credit : Asianet News

ಅಪಘಾತದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಜಖಂಗೊಂಡಿದ್ದು, ಮನೆಯಲ್ಲಿದ್ದವರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಾರ್ಗಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶಿವಮೊಗ್ಗ
ಅಪಘಾತ
ಪ್ರವಾಸ
ಪ್ರವಾಸೋದ್ಯಮ
 

Latest Videos
Recommended Stories
Recommended image1
ಮೆಜೆಸ್ಟಿಕ್ ಅಂಡರ್‌ಪಾಸ್‌, ಮೇಲ್ಸೇತುವೆ ಸುತ್ತಮುತ್ತ ನಡೆಯುವ ರಹಸ್ಯವೇನು? ವಿಡಿಯೋ
Recommended image2
ತಿಂಗಳ ಬಾಡಿಗೆ 70 ಸಾವಿರ ರೂ, 4 ಲಕ್ಷ ರೂ ಡೆಪಾಸಿಟ್, ಬೆಂಗಳೂರು ಮನೆ ಮಾಲೀಕ ಬೇಡಿಕೆಗೆ ಕಂಗಾಲು
Recommended image3
51 ಶಾಲೆಗಳಿಗೆ ಸಹಾಯ ಮಾಡಿ ವಿಶ್ವ ದಾಖಲೆ ನಿರ್ಮಿಸಿದ 15ರ ಬಾಲೆ! ವಿಷ್ಣುಪ್ರಿಯಾ ಹೆಸರಿನ ಹಿಂದಿದೆ ಆ ಮಹಾನ್ ನಟನ ನೆನಪು
Related Stories
Recommended image1
ಬಿಎಂಟಿಸಿ ಬಸ್ ಹತ್ತೋರಾರೂ ತಪ್ಪಿಸಿಕೊಳ್ಳೋಕೆ ಆಗಲ್ಲ; ಹೊಸ ಎಪಿಸಿ ವ್ಯವಸ್ಥೆ 30 ಬಸ್‌ಗಳಲ್ಲಿ ಜಾರಿ
Recommended image2
90Km ವೇಗದಲ್ಲಿದ್ದಾಗ ಎದ್ದು ನಿಂತ ಚಾಲಕ! ಜಮೀನಿಗೆ ನುಗ್ಗಿ ನಿಂತ ಖಾಸಗಿ ಬಸ್! ಭಯಾನಕ ವಿಡಿಯೋ ವೈರಲ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved