MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶಿವಾನಂದ ನೀಲಣ್ಣವರ ಪ್ರಕರಣ: ನಟಿ ಸನ್ನಿ ಲಿಯೋನ್‌ಗೆ ನೋಟಿಸ್, ಹಲವರಿಗೆ ಹಣ ವರ್ಗಾವಣೆ

ಶಿವಾನಂದ ನೀಲಣ್ಣವರ ಪ್ರಕರಣ: ನಟಿ ಸನ್ನಿ ಲಿಯೋನ್‌ಗೆ ನೋಟಿಸ್, ಹಲವರಿಗೆ ಹಣ ವರ್ಗಾವಣೆ

ಅಧಿಕ ಲಾಭಾಂಶದ ಆಮಿಷವೊಡ್ಡಿ ಸಾವಿರಾರು ಜನರಿಗೆ ಕೋಟ್ಯಂತರ ರುಪಾಯಿ ವಂಚಿಸಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ, ಜನರಿಂದ ಪಡೆದ ಹಣವನ್ನು ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟರಿಗೆ ನೀಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ.

2 Min read
Author : Kannadaprabha News
Published : Jun 08 2026, 05:23 AM IST
Share this Photo Gallery
  • FB
  • TW
  • Linkdin
  • Whatsapp
15
 ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟ ನಟಿಯರಿಗೆ ನೀಡಿರುವ ವಿಷಯ ಬಹಿರಂಗ
Image Credit : fb

ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟ- ನಟಿಯರಿಗೆ ನೀಡಿರುವ ವಿಷಯ ಬಹಿರಂಗ

ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಸಾವಿರಾರು ಜನರಿಗೆ ಕೋಟ್ಯಂತರ ರುಪಾಯಿ ವಂಚಿಸಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ ಶಿವಾನಂದ ನೀಲಣ್ಣವರ, ಜನರಿಂದ ಸ್ವೀಕರಿಸಿದ ಹಣವನ್ನು ನೀಲಿ ಚಿತ್ರಗಳ ತಾರೆ ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟ- ನಟಿಯರಿಗೆ ನೀಡಿರುವ ವಿಷಯ ಬಹಿರಂಗವಾಗಿದೆ. ಮತ್ತೊಂದೆಡೆ, ನೀಲಣ್ಣವರ ಬಂಧನದ ಬಳಿಕವೂ ಜನರಿಗೆ ಆತನ ಮೇಲೆ ನಂಬಿಕೆ ಕಡಿಮೆಯಾಗಿಲ್ಲ. 20 ದಿನಗಳಲ್ಲಿ 5 ಕೋಟಿ ರು.ಗೂ ಅಧಿಕ ಹಣವನ್ನು ನೀಲಣ್ಣವರ ಖಾತೆಗೆ ವರ್ಗ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸನ್ನಿ ಲಿಯೋನ್‌ಗೆ ನೋಟಿಸ್‌
Image Credit : Facebook

ಸನ್ನಿ ಲಿಯೋನ್‌ಗೆ ನೋಟಿಸ್‌

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ, ಸನ್ನಿ ಲಿಯೋನ್ ಸೇರಿದಂತೆ ಸಿನಿಮಾ ನಟರಿಗೆ ನೀಲಣ್ಣವರ ಹಣ ಕೊಟ್ಟ ಬಗ್ಗೆ ಮಾಹಿತಿ ಇದೆ. ಅವರಿಗೆಲ್ಲ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಿಸುತ್ತೇವೆ ಎಂದು ಹೇಳಿದರು.

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಂ ಅಸೋಸಿಯೇಟ್ಸ್ ಮೇಲೆ ಪ್ರಕರಣ ದಾಖಲಿಸಿಕೊಂಡು ಸಿಐಡಿ ತನಿಖೆ ನಡೆಸುತ್ತಿದೆ. ಸಾಮಾನ್ಯವಾಗಿ ತನಿಖೆ ನಡೆಯುವಾಗ ಸುದ್ದಿಗೋಷ್ಠಿ ಮಾಡುವುದಿಲ್ಲ. ಊಹಾಪೋಹಗಳು ಹಬ್ಬುತ್ತಿವೆ. ಆದ್ದರಿಂದ ಸತ್ಯಾಂಶ ತಿಳಿಸಲು ಸುದ್ದಿಗೋಷ್ಠಿ ಮಾಡಬೇಕಾಯಿತು. ಜನರು ಇವತ್ತಿಗೂ ನೀಲಣ್ಣವರ ಖಾತೆಗೆ ಹಣ ಹಾಕುತ್ತಿದ್ದಾರೆ. ಈ ರೀತಿ ಯಾರೂ ಹಣ ಹಾಕಬಾರದು ಎಂದು ಎಚ್ಚರಿಕೆ ನೀಡಿದರು.

ಶಿವಾನಂದ ನೀಲಣ್ಣವರ, ಆದಿತ್ಯರಾಜ್ ಪ್ರಕರಣದಲ್ಲಿ ಠೇವಣಿ ಸಂಗ್ರಹಕ್ಕೆ ಯಾವುದೇ ಅನುಮತಿ ಇಲ್ಲ. ಭಾರತದಲ್ಲಿ ಎಲ್ಲೂ ಶೇ.30ಕ್ಕಿಂತ ಹೆಚ್ಚು ಲಾಭ ಕೊಡುವ ಕಂಪನಿ ಇಲ್ಲ. ಸಾರ್ವಜನಿಕರು ಬಡ್ಡಿಯ ದುರಾಸೆ ಬಿಡಬೇಕು ಎಂದು ಮನವಿ ಮಾಡಿದರು.

Related Articles

Related image1
Belagavi: ಶಿವಾನಂದ ನೀಲಣ್ಣವರ ₹4500 ಕೋಟಿ ಹಗರಣ ಕೇಸ್; ತನಿಖೆ ಕೈಗೆತ್ತಿಕೊಂಡ ಸಿಐಡಿ
Related image2
ಶಿವಾನಂದ ನೀಲಣ್ಣವರ ಬಹುಕೋಟಿ ವಂಚನೆ ಪ್ರಕರಣ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಶಿಕ್ಷಕ ಸಮುದಾಯಕ್ಕೆ ₹ 200 ಕೋಟಿ ದೋಖಾ!
35
2400 ಕೋಟಿ ರು. ಸಂಗ್ರಹ
Image Credit : Asianet News

2400 ಕೋಟಿ ರು. ಸಂಗ್ರಹ

ಹೊಸದಾಗಿ ಹೂಡಿಕೆ ಆದ ಹಣವನ್ನು ಹಳೆಯ ಹೂಡಿಕೆದಾರರ ಮೊತ್ತಕ್ಕೆ ಬಡ್ಡಿಯಾಗಿ ನೀಲಣ್ಣವರ ಕೊಡುತ್ತಿದ್ದ. 2025ರಲ್ಲಿ ₹1000 ಠೇವಣಿ ಇಟ್ಟಿದ್ದರೆ 2026ರಲ್ಲಿ ಅದಕ್ಕೆ ಬಡ್ಡಿ ಕೊಡಬೇಕು. ಹೊಸಬರ ಠೇವಣಿ ಹಳಬರಿಗೆ ಕೊಡುತ್ತಿದ್ದ. ಎಲ್ಲಿಯವರೆಗೆ ಹೊಸ ಠೇವಣಿ ಬರುತ್ತದೆಯೋ ಅಲ್ಲಿಯವರೆಗೆ ಸ್ಕೀಮ್ ನಡೆಯುತ್ತದೆ. 40700 ಹೂಡಿಕೆದಾರರಿಂದ ನೀಲಣ್ಣವರ 2400 ಕೋಟಿ ರು. ಸಂಗ್ರಹ ಮಾಡಿದ್ದಾನೆ. ₹540 ಕೋಟಿ ಹಣವನ್ನು ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ ₹170 ಕೋಟಿ ಕಳೆದುಕೊಂಡಿದ್ದಾನೆ. ₹660 ಕೋಟಿ ಶೇರಿಂಗ್ ಅಮೌಂಟ್, ₹390 ಕೋಟಿ ಬೇರೆ ಕಡೆಯಿಂದ ಬರುವ ಸಾಧ್ಯತೆ ಇದೆ. ಚಿನ್ನಾಭರಣ, ಆಸ್ತಿ ಖರೀದಿ ಮಾಡಿದ್ದಾನೆ. ಐದು ಕಾರು, 250 ಗ್ರಾಂ ಚಿನ್ನಾಭರಣ ಇವೆ ಎಂದು ತಿಳಿಸಿದರು.

45
ಹೆಚ್ಚು ಲಾಭ ಪಡೆದವರಿಗೂ ನೋಟಿಸ್‌
Image Credit : Asianet News

ಹೆಚ್ಚು ಲಾಭ ಪಡೆದವರಿಗೂ ನೋಟಿಸ್‌

ಕಂಪನಿ ಹಣವನ್ನು ಸ್ವಂತ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ. ₹55 ಕೋಟಿ ಹಣ ವರ್ಗಾವಣೆಯಾಗಿದೆ. ವೆಲ್ಫೈರ್, 2 ಮರ್ಸಿಡಿಸ್, ಡಿಫೆಂಡರ್, ವರ್ನಾ, 11 ವೋಲ್ವೋ ಎಕ್ಸ್‌ಸಿ90 ಕಾರು ಖರೀದಿಸಿದ್ದಾನೆ. 11 ವಾಹನಗಳು ಬೇರೆ ರಾಜ್ಯದಲ್ಲಿ ನೋಂದಣಿಯಾಗಿವೆ. ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇವೆ. ವಾಪಸ್ ಕಂಪನಿಗೆ ಪಡೆದು ಜನರಿಗೆ ತಲುಪಿಸಲಾಗುವುದು. ₹400 ಕೋಟಿ ಹಣ ಹೂಡಿಕೆದಾರರಿಗೆ ಹೆಚ್ಚುವರಿಯಾಗಿ ಹೋಗಿದೆ. ಅದನ್ನೂ ವಸೂಲಿ ಮಾಡುತ್ತೇವೆ. ಆರಂಭದಲ್ಲಿ ನಿಯಮ ಮೀರಿ ಲಾಭ ಪಡೆದವರನ್ನು ವಿಚಾರಿಸುತ್ತೇವೆ.

55
30 ಬ್ಯಾಂಕ್ ಖಾತೆ
Image Credit : Asianet News

30 ಬ್ಯಾಂಕ್ ಖಾತೆ

ಹೆಚ್ಚು ಹಣ ಪಡೆದವರಿಂದ ವಸೂಲಿ ಮಾಡಿಸುತ್ತೇವೆ. 20 ಸಾವಿರ ಠೇವಣಿದಾರರ ದಾಖಲೆ ಪರಿಶೀಲಿಸಿದ್ದೇವೆ. ಇದರಲ್ಲಿ 10 ಸಾವಿರ ಮಹಾರಾಷ್ಟ್ರದವರು ಇದ್ದಾರೆ. ನೀಲಣ್ಣವರ 30 ಬ್ಯಾಂಕ್ ಖಾತೆ ಸಿಕ್ಕಿವೆ. 7 ಖಾತೆಯಲ್ಲಿ ಹೆಚ್ಚು ಹಣ ವರ್ಗಾವಣೆಯಾಗಿದೆ. ಒಂದು ಖಾತೆಯಲ್ಲೇ 36,200 ಪುಟಗಳ ವರ್ಗಾವಣೆ ಹಿಸ್ಟರಿ ಇದೆ ಎಂದು ಮಾಹಿತಿ ನೀಡಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಳಗಾವಿ
ಸನ್ನಿ ಲಿಯೋನ್
ವಂಚನೆ
ನಟಿ
Latest Videos
Recommended Stories
Recommended image1
ಸಿದ್ದರಾಮಯ್ಯ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಯತೀಂದ್ರ ಭಾವನಾತ್ಮಕ ಹೇಳಿಕೆ
Recommended image2
ಸರ್ಕಾರಿ ಆಸ್ಪತ್ರೆಗಳಲ್ಲಿ 900 ಹುದ್ದೆ ಖಾಲಿ: ವಾರದೊಳಗೆ ನೇಮಕಾತಿಗೆ ಸಚಿವ ಖಾದರ್ ಖಡಕ್ ಸೂಚನೆ
Recommended image3
ಆರಂಕಿ ಸಂಬಳ ಪಡಿತಿದ್ರೂ ವೀಕೆಂಡ್ ಬಂದ್ರೆ Rapido ಬೈಕ್ ಓಡಿಸುವ ಸಾಫ್ಟ್‌ವೇರ್ ಇಂಜಿನಿಯರ್, ಇದೇ ಕಾರಣ!
Related Stories
Recommended image1
Belagavi: ಶಿವಾನಂದ ನೀಲಣ್ಣವರ ₹4500 ಕೋಟಿ ಹಗರಣ ಕೇಸ್; ತನಿಖೆ ಕೈಗೆತ್ತಿಕೊಂಡ ಸಿಐಡಿ
Recommended image2
ಶಿವಾನಂದ ನೀಲಣ್ಣವರ ಬಹುಕೋಟಿ ವಂಚನೆ ಪ್ರಕರಣ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಶಿಕ್ಷಕ ಸಮುದಾಯಕ್ಕೆ ₹ 200 ಕೋಟಿ ದೋಖಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved