Pre Monsson: 40-60 ಕಿಮೀ ವೇಗದಲ್ಲಿ ಬಿರುಗಾಳಿ; ಕರಾವಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 18ರವರೆಗೆ ಭಾರಿ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಮತ್ತು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ತುರ್ತು ಸೇವೆಗಾಗಿ ಕಂಟ್ರೋಲ್ ರೂಮ್ ಸಂಖ್ಯೆಗಳನ್ನು ಒದಗಿಸಲಾಗಿದೆ.

ಭಾರಿ ಗಾಳಿ ಹಾಗೂ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೇ 18ರವರೆಗೆ ಭಾರಿ ಗಾಳಿ ಹಾಗೂ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಎಂದು ಮುನ್ಸೂಚನೆ ನೀಡಲಾಗಿರುವುದರಿಂದ ಈ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಸಮುದ್ರದಲ್ಲಿ ಅಲೆಗಳು ತೀವ್ರತೆ ಅಧಿಕ
ಮಿನುಗಾರರು ಮೇಲಿನ ದಿನದಂದು ಸಮುದ್ರದಲ್ಲಿ ಅಲೆಗಳು ತೀವ್ರತೆ ಇರುವುದರಿಂದ ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
40-60 ಕಿಮೀ ವೇಗದಲ್ಲಿ ಗಾಳಿ
ಮಳೆಯ ಜೊತೆಗೆ ಗಾಳಿ ಕೂಡಾ 40-60 ಕಿಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳ ಸಮೀಪದ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ.
ತುರ್ತು ಸೇವೆ-ಕಂಟ್ರೋಲ್ ರೂಮ್ ಸಂಖ್ಯೆ
ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ತುರ್ತು ಸೇವೆಗೆ 24x7 ಕಂಟ್ರೋಲ್ ರೂಮ್ ಸಂಖ್ಯೆ 08382-229857 ಮೊ. 9483511015 ನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿರುಗಾಳಿ ಮುನ್ಸೂಚನೆ, ಲಂಗರು ಹಾಕಿದ ಬೋಟುಗಳು
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಹಾಗೂ ಅಲೆಗಳ ಅಬ್ಬರ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಿದ್ದಂತೆ ಮೀನುಗಾರಿಕಾ ಬೋಟುಗಳು ಬೈತಖೋಲ ಬಂದರಿನಲ್ಲಿ ಲಂಗರು ಹಾಕಿವೆ. ಮುಂದಿನ 48 ಗಂಟೆಗಳಲ್ಲಿ ಅರಬ್ಬಿ ಸಮುದ್ರದಲ್ಲಿ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ವಿವಿಧೆಡೆ ಬಿರುಗಾಳಿ, ಮಳೆ ಉಂಟಾಗುತ್ತಿದೆ. ಇದರಿಂದ ಈಗಾಗಲೇ ಮೀನುಗಾರಿಕಾ ಚಟುವಟಿಕೆಗೆ ಹಿನ್ನಡೆ ಉಂಟಾಗಿತ್ತು.

