ಸಕುಟುಂಬ ಸಮೇತ ಉಡುಪಿ, ಕೊಲ್ಲೂರಿಗೆ ಭೇಟಿ ನೀಡಿದ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್!
ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪತ್ನಿ ಹಾಗೂ ಮಕ್ಕಳೊಂದಿಗೆ ಕರಾವಳಿಯ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಉಡುಪಿ, ಶೃಂಗೇರಿ, ಹೊರನಾಡು, ಕೊಲ್ಲೂರು, ಮುರುಡೇಶ್ವರ ಹಾಗೂ ಗೋಕರ್ಣ ಕ್ಷೇತ್ರಗಳ ದರ್ಶನ ಪಡೆದಿದ್ದಾರೆ.
ಟೀಮ್ ಇಂಡಿಯಾ ಮಾಜಿ ಆಟಗಾರ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಬುಧವಾರ ಪತ್ನಿ, ಮಕ್ಕಳೊಂದಿಗೆ ಕರ್ನಾಟಕ ಕರಾವಳಿಯ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿದರು.
ಬುಧವಾರ ವಿವಿಎಸ್ ಲಕ್ಷ್ಮಣ್ ಹಾಗೂ ಅವರ ಪತ್ನಿ ಜಿಆರ್ ಶೈಲಜಾ, ಪುತ್ರ ಸರ್ವಜಿತ್ ಲಕ್ಷ್ಮಣ್ ಹಾಗೂ ಪುತ್ರಿ ಅಚಿಂತ್ಯಾ ಲಕ್ಷ್ಮಣ್ ಜೊತೆಗೂಡಿ ಉಡುಪಿ, ಶೃಂಗೇರಿ ಹಾಗೂ ಹೊರನಾಡು ಕ್ಷೇತ್ರಗಳಿಗೆ ಭೇಟಿ ನೀಡಿದರು.
ಇಂದು ರಾತ್ರಿ ಅವರು ಕೊಲ್ಲೂರಿಗೆ ಭೇಟಿ ನೀಡಲಿದ್ದು, ಅಲ್ಲಿ ಮೂಕಾಂಬಿಕಾ ದೇವಿಯ ದರ್ಶನ ಮಾಡಲಿದ್ದಾರೆ. ಆ ಬಳಿಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರಕ್ಕೆ ಭೇಟಿ ನೀಡಲಿದ್ದಾರೆ.
ಮುರುಡೇಶ್ವರ ಭೇಟಿಯ ಬಳಿಕ ಅವರು ಗೋಕರ್ಣಕ್ಕೆ ಭೇಟಿ ನೀಡಲಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಗ್ಗೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದುಕೊಂಡ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ವೇಳೆ ವಿವಿಎಸ್ ಲಕ್ಷ್ಮಣ್ ಸ್ವಾಮೀಜಿಗಳ ಆಶೀರ್ವಾದವನ್ನೂ ಪಡೆದುಕೊಂಡಿದ್ದಾರೆ. ದೇವಸ್ಥಾನದಲ್ಲಿಯೂ ಕೂಡ ಅವರಿಗೆ ಸನ್ಮಾನ ಮಾಡಲಾಗಿದೆ.
Rule Change: ಎಲ್‌ಪಿಜಿಯಿಂದ ಪಿಂಚಣಿವರೆಗೆ.. ಹೊಸ ವರ್ಷದಿಂದ ಆಗಲಿದೆ ಈ ಬದಲಾವಣೆಗಳು!
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕರಾಗಿರುವ ವಿವಿಎಸ್ ಲಕ್ಷ್ಮಣ್, ಟೀಮ್ ಇಂಡಿಯಾ ಪ್ರಧಾನ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ತಂಡದ ಕೋಚ್ ಆಗಿಯೂ ಕೆಲಸ ಮಾಡಿದ್ದರು.
ನೆಲಮಂಗಲ ಜನರಿಗೆ ಮತ್ತೆ ಕಾಡಿದ 'ನಂಬರ್ 6', ಹೆದ್ದಾರಿ ಅಪಘಾತಕ್ಕೂ ನಂಬರ್ ಪ್ಲೇಟ್‌ಗೂ ಏನಿದೆ ಲಿಂಕ್?