ಎರಡು ಮರಗಳ ಮಧ್ಯೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾದ ಕಾರ್; ಇಬ್ಬರ ಸಾವು, ಓರ್ವ ಗಂಭೀರ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರ್ ಎರಡು ಮರಗಳ ಮಧ್ಯೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಂಡೇಲಿ ಅಪಘಾತ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕರ್ಕಾ ಕ್ರಾಸ್–ಅಜಗಾಂವ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರ ಸಾವು
ಮೃತರನ್ನು ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತಕ್ಕೆ ಕಾರಣ ಏನು?
ಡಿಕ್ಕಿಯ ರಭಸಕ್ಕೆ ಕಾರ್ ಎರಡು ಮರಗಳ ಮಧ್ಯೆ ಸಿಲುಕಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಹೆತ್ತ ತಾಯಿಯ ಶವಕ್ಕೆ ಹೆಗಲು ಕೊಡದ ಮಕ್ಕಳು; ಸಮಾಜ ಸೇವಕರಿಂದ್ಲೇ ಅಂತ್ಯಕ್ರಿಯೆ!
Car Accident Dandeli
ಚಾಲಕನ ಗುರುತು ಪತ್ತೆಯಾಗಿಲ್ಲ. ಕಾರ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು ಮೂರು ಜನರು ಪ್ರಯಾಣಿಸುತ್ತಿದ್ದಾರೆ. ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ: Vijayapura: ಸಿಂದಗಿಯ ಮೌಲಾಲಿ ಕುಟುಂಬದಲ್ಲಿ ಸಂಭ್ರಮದಿಂದ ಬಸವ ಜಯಂತಿ ಆಚರಣೆ

