Bhatkal: ಕಪ್ಪೆಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ ಮೂವರು ನೀರುಪಾಲು; 9 ಮಂದಿ ಗಂಭೀರ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲಾಗಿದ್ದಾರೆ. ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಮೂವರು ನೀರುಪಾಲು
ಕಪ್ಪೆಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ನಡೆದಿದೆ. 9 ಮಂದಿ ಪೈಕಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕೆಲವರ ರಕ್ಷಣೆ, ಉಳಿದವರಿಗಾಗಿ ಹುಡುಕಾಟ
ಕಪ್ಪೆಚಿಪ್ಪು ತೆಗೆಯಲು ಹೋದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಕೆಲವರನ್ನು ರಕ್ಷಣೆ ಮಾಡಲಾಗಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಶಿಕ್ಷಕಿ ಡಿಜಿಟಲ್ ಅರೆಸ್ಟ್: ₹24 ಕೋಟಿ ದೋಚಿದರೂ ತೀರದ ದಾಹ, ಸುಳಿವು ಕೊಟ್ಟ ICICI Bank ಮ್ಯಾನೇಜರ್!
ನದಿಗೆ ಹೋಗಿದ್ದ ಒಟ್ಟು 11 ಜನರು
ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ ನಡೆಸಲಾಗುತ್ತಿದೆ. ಒಟ್ಟು 11 ಜನರು ಒಂದಾಗಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ: ನೆಲಮಂಗಲದಲ್ಲಿ ರಾಶಿ ರಾಶಿ ಕೊಳಕು ಮಂಡಲ ಹಾವುಗಳು ಪತ್ತೆ; ಕೇವಲ 16 ಹಾವು ರಕ್ಷಣೆ, ಉಳಿದೆಲ್ಲವೂ ಪರಾರಿ!

