ವಿಜಯಪುರದ ಮಂಗಳೂರಿನಲ್ಲಿ ರೆಡ್ ಬರ್ಡ್ ಪ್ರವೇಟ್ ಜೆಟ್ ಪತನ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಲಘು ವಿಮಾನವೊಂದು ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಈ ವಿಮಾನ ಇಂಧನ ಖಾಲಿಯಾದ ಕಾರಣ ಅಪಘಾತಕ್ಕೀಡಾಗಿದೆ.

ವಿಜಯಪುರದಲ್ಲಿ ವಿಮಾನ ಪತನ
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ಲಘು ವಿಮಾನವೊಂದು ಪತನಗೊಂಡಿದೆ. ಈ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿದ್ದು, ಇಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಂಗಳೂರು ಗ್ರಾಮದಲ್ಲಿ ಘಟನೆ
ರೆಡ್ ಬರ್ಡ್ ಏವಿಯೇಷನ್ ಸಂಸ್ಥೆಗೆ ಸೇರಿದ ಸೆಸ್ನಾ 172 ಟ್ಯಾಂಗೋ ಚಾರ್ಲಿ ಹೆಸರಿನ ಈ ಪ್ರವೇಟ್ ಜೆಟ್ ಪತನಗೊಂಡಿದ್ದು, ಕೂಡಲೇ ವಿಮಾನದಲ್ಲಿದ್ದ ಪೈಲಟ್ ಗೌತಮ್ , ಕಂಪನಿ ಸಿಬ್ಬಂದಿ ಅವರನ್ನು ನಗರದ BLDE ಆಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.
ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವಿಮಾನ
ಈ ವಿಮಾನ ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿತ್ತು. ಇಂಧನ ಖಾಲಿಯಾದ ಕಾರಣ ವಿಮಾನ ಜಮೀನಿನಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಸಿಕ್ಕಿದೆ. ಇಂಧನ ಖಾಲಿಯಾಗಿ ಕೆಳಗೆ ಬಿದ್ದ ಪರಿಣಾಮ ವಿಮಾನದಲ್ಲಿದ್ದವರ ಜೀವಕ್ಕೆ ಅನಾಹುತವಾಗಿಲ್ಲ
ಇಂಧನ ಖಾಲಿಯಾಗಿ ದುರಂತ
ಒಂದು ವೇಳೆ ವಿಮಾನದಲ್ಲಿ ಇಂದನ ತುಂಬಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ವಿಮಾನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ.
ಸ್ಥಳಕ್ಕೆ ಬಂದ ನೂರಾರು ಜನ
ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಆದರೆ ಈ ವಿಚಾರ ತಿಳಿದು ಅಲ್ಲಿ ನೂರಾರು ಜನ ಸೇರಿದ್ದು, ವಿಮಾನದ ಅವಶೇಷಗಳನ್ನು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆ ಹಿಡಿಯುತ್ತಿದ್ದಾರೆ.

