ದುಬಾರಿ ಕ್ರೀಮ್‌ಗಳು ಬದಿಗಿಡಿ, ನಿಮ್ಮ ಮುಖದ ಕಾಂತಿ ಹೊಳೆಯಲು ಈ ಆಹಾರಗಳನ್ನು ತಪ್ಪದೇ ತಿನ್ನಿ!
ಇತ್ತೀಚಿನ ದಿನಗಳಲ್ಲಿ ಚರ್ಮದ ಆರೈಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ದುಬಾರಿ ಕ್ರೀಮ್‌ಗಳು ಮತ್ತು ಚಿಕಿತ್ಸೆಗಳಿಂದ ಮಾತ್ರ ಪ್ರಯೋಜನವಿಲ್ಲ. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಕೂಡ ಅಷ್ಟೇ ಮುಖ್ಯ. ನಿಮ್ಮ ಡಯಟ್‌ನಲ್ಲಿ ಇವುಗಳನ್ನು ಸೇರಿಸಿಕೊಳ್ಳಿ.
15

Image Credit : Getty
ಸಿಟ್ರಸ್ ಹಣ್ಣುಗಳು
ಕಿತ್ತಳೆ, ನಿಂಬೆ, ದ್ರಾಕ್ಷಿಯಂತಹ ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇವುಗಳನ್ನು ಪ್ರತಿದಿನ ಸೇವಿಸುವುದರಿಂದ ಚರ್ಮದ ಆರೋಗ್ಯವನ್ನು ಸುಧಾರಿಸಬಹುದು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
Image Credit : Asianet News
ಮೊಟ್ಟೆ
ಮೊಟ್ಟೆಯಲ್ಲಿ ಪ್ರೋಟೀನ್ ಮತ್ತು ಅಮೈನೋ ಆಸಿಡ್‌ಗಳು ಅಧಿಕವಾಗಿವೆ. ಇದು ಕೊಲಾಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಚರ್ಮ ಮತ್ತು ಒಟ್ಟಾರೆ ಆರೋಗ್ಯವನ್ನು ಬೆಂಬಲಿಸುತ್ತದೆ.
35
Image Credit : Getty
ಬೆಟ್ಟದ ನೆಲ್ಲಿಕಾಯಿ
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಹೇರಳವಾಗಿವೆ. ಇದು ಕೊಲಾಜನ್ ಉತ್ಪಾದನೆಯನ್ನು ಹೆಚ್ಚಿಸಿ, ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
45
Image Credit : Getty
ಕೊಬ್ಬಿನಾಂಶದ ಮೀನುಗಳು
ಸಾಲ್ಮನ್, ಬಂಗುಡೆ, ಸಾರ್ಡಿನ್ ಮೀನುಗಳಲ್ಲಿ ಪ್ರೋಟೀನ್ ಮತ್ತು ಅಮೈನೋ ಆಸಿಡ್‌ಗಳು ಹೇರಳವಾಗಿವೆ. ಇದು ಚರ್ಮದ ಆರೋಗ್ಯದ ಜೊತೆಗೆ ಹೃದಯ ಮತ್ತು ಮೆದುಳಿನ ಆರೋಗ್ಯವನ್ನೂ ಸುಧಾರಿಸುತ್ತದೆ.
55
Image Credit : Getty
ಕುಂಬಳಕಾಯಿ ಬೀಜ
ಕುಂಬಳಕಾಯಿ ಬೀಜಗಳಲ್ಲಿ ಸತು (ಜಿಂಕ್) ಮತ್ತು ಖನಿಜಾಂಶಗಳು ಅಧಿಕವಾಗಿವೆ. ಇದು ಕೊಲಾಜನ್ ಉತ್ಪಾದನೆಯನ್ನು ಹೆಚ್ಚಿಸಿ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos

