ಈ ವರ್ಷ ಪ್ರೊ ಕಬಡ್ಡಿ ಟೂರ್ನಿ ನಡೆಯುತ್ತಾ..?
ಕೊರೋನಾ ಆತಂಕದ ನಡುವೆ ಕ್ರೀಡಾ ಚಟುವಟಿಕೆಗಳು ನಿಧಾನವಾಗಿ ಆರಂಭವಾಗತೊಡಗುವೆ. ಈಗಾಗಲೇ ಕ್ರಿಕೆಟ್ ಜನಕರ ನಾಡಾದ ಇಂಗ್ಲೆಂಡ್‌ನಲ್ಲಿ ವೆಸ್ಟ್ ಇಂಡೀಸ್-ಇಂಗ್ಲೆಂಡ್ ಸರಣಿ ಯಶಸ್ವಿಯಾಗಿ ಮುಗಿದಿದೆ. ಸದ್ಯ ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿ ಆರಂಭವಾಗಿದೆ.
ಇದರ ನಡುವೆ ಐಪಿಎಲ್ ಟೂರ್ನಿ ನಡೆಯುವುದು ಖಚಿತ ಎನಿಸಿದೆ. ಹೀಗಾಗಿ ಈ ವರ್ಷ ದೇಶದ ಜನರನ್ನೇ ತುದಿಗಾಲಿನಲ್ಲಿ ನಿಲ್ಲಿಸಬಲ್ಲ ದೇಸಿ ಕ್ರೀಡೆಯಾದ ಪ್ರೊ ಕಬಡ್ಡಿ ಟೂರ್ನಿ ನಡೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಐಪಿಎಲ್ ಟೂರ್ನಿ ನಡೆಯುವುದು ಖಚಿತ ಎನಿಸಿರುವ ಬೆನ್ನಲ್ಲೇ ಈ ವರ್ಷ ದೇಶದ ಜನರನ್ನೇ ತುದಿಗಾಲಿನಲ್ಲಿ ನಿಲ್ಲಿಸಬಲ್ಲ ದೇಸಿ ಕ್ರೀಡೆಯಾದ ಪ್ರೊ ಕಬಡ್ಡಿ ಟೂರ್ನಿ ನಡೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಈ ವರ್ಷದ ಪ್ರೊ ಕಬಡ್ಡಿ ಟೂರ್ನಿ ರದ್ದುಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಜುಲೈನಿಂದ ಅಕ್ಟೋಬರ್ ವರೆಗೂ ನಡೆಯಬೇಕಿದ್ದ ಟೂರ್ನಿಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಆದರೆ ಸೆಪ್ಟೆಂಬರ್‌ನಿಂದ ನವೆಂಬರ್ ವರೆಗೂ ಐಪಿಎಲ್ ನಡೆಯಲಿರುವ ಕಾರಣ, ಒಂದೇ ಸಮಯದಲ್ಲಿ ಎರಡು ಪ್ರಮುಖ ಟೂರ್ನಿಗಳನ್ನು ನಿಭಾಯಿಸುವುದು ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ವಾಹಿನಿಗೆ ಸವಾಲಾಗಿ ಪರಿಣಮಿಸಲಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಕಬಡ್ಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ ಹೀಗಾಗಿ ಪ್ರೊ ಕಬಡ್ಡಿ ಆಯೋಜನೆ ಕಷ್ಟಸಾಧ್ಯ.
ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಸಹ ಕಷ್ಟ ಎನಿಸಿರುವ ಕಾರಣ, ಈ ವರ್ಷದ ಟೂರ್ನಿಯನ್ನು ರದ್ದುಗೊಳಿಸಲು ಆಯೋಜಕರು ಚಿಂತಿಸಿದ್ದಾರೆ ಎನ್ನಲಾಗಿದೆ.