MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • BJP Hyderabad Candidate: ಓವೈಸಿ ವಿರುದ್ಧ ಹೋರಾಟಕ್ಕೆ ಮಾಧವಿ ಲತಾಗೆ ಮುಸ್ಲಿಂ ಹೆಣ್ಮಕ್ಕಳ ಬೆಂಬಲ!

BJP Hyderabad Candidate: ಓವೈಸಿ ವಿರುದ್ಧ ಹೋರಾಟಕ್ಕೆ ಮಾಧವಿ ಲತಾಗೆ ಮುಸ್ಲಿಂ ಹೆಣ್ಮಕ್ಕಳ ಬೆಂಬಲ!

ಹೈದರಾಬಾದ್‌ನಲ್ಲಿ ಅಸಾಸುದ್ದೀನ್‌ ಓವೈಸಿ ವಿರುದ್ಧ ಬಿಜೆಪಿ ಬೆಂಕಿ ಚೆಂಡು ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಕಣಕ್ಕಿಳಿಸಿದೆ. ವಿಶೇಷವೆಂದರೆ, ಟಿಕೆಟ್‌ ಘೋಷಣೆ ಮಾಡುವ ವೇಳೆ ಮಾಧವಿ ಲತಾ ಬಿಜೆಪಿಯ ಸದಸ್ಯೆ ಕೂಡ ಆಗಿರಲಿಲ್ಲ.

2 Min read
Author : Santosh Naik
| Updated : Apr 10 2024, 03:09 PM IST
Share this Photo Gallery
  • FB
  • TW
  • Linkdin
  • Whatsapp
113

ಈ ಬಾರಿ ಬಿಜೆಪಿ ಹೈದರಾಬಾದ್‌ನಲ್ಲಿ ಅಸಾದುದ್ದೀನ್‌ ಓವೈಸಿ ವಿರುದ್ಧ ಕನಿಷ್ಠ ಹೋರಾಟ ತೋರುವ ಸ್ಪರ್ಧಿಯನ್ನು ಕಣಕ್ಕೆ ಇಳಿಸಿದೆ.

213

ವಿರಿಂಚಿ ಹಾಸ್ಪಿಟಲ್ಸ್‌ನ ಚೇರ್ಮನ್‌ ಆಗಿರುವ ಸನಾತನ ಶಕ್ತಿಯಾಗಿ ಗುರುತಿಸಿಕೊಂಡಿರುವ ಮಾಧವಿ ಲತಾ ಅವರನ್ನು ಬಿಜೆಪಿ ಇಲ್ಲಿಂದ ಕಣಕ್ಕಿಳಿಸಿದೆ.

313

ಕೊಂಪೆಲ್ಲಾ ಮಾಧವಿ ಲತಾ ಅಥವಾ ಮಾಧವಿ ಲತಾ ಅವರು ಸಾಂಸ್ಕೃತಿಕ ಕಾರ್ಯಕರ್ತೆ. 2019 ರಲ್ಲಿ ಕಾನೂನುಬಾಹಿರವಾದ ತ್ರಿವಳಿ ತಲಾಖ್ ವಿರುದ್ಧ ಇವರು ಮಾಡಿದ್ದ ಪ್ರಚಾರ ಪ್ರಧಾನಿ ಮೋದಿ ಅವರ ಗಮನಸೆಳೆದಿತ್ತು.

413

ಇತ್ತೀಚೆಗೆ ಆಪ್‌ ಕೀ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಧವಿ ಲತಾಗೆ ಪ್ರಮುಖ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಮುಸ್ಲಿಂ ಸಮುದಾಯದ ಆಂತರಿಕ ವಿಚಾರಗಳಲ್ಲಿ ನೀವು ಮೂಗು ತೂರಿಸೋದ್ಯಾಕೆ? ಎಂದು ಪ್ರಶ್ನಿಸಲಾಗಿತ್ತು.

513

ಇದಕ್ಕೆ ಅಷ್ಟೇ ಸ್ಪಷ್ಟವಾಗಿ ಉತ್ತರ ನೀಡಿದ್ದ ಮಾಧವಿ ಲತಾ ಮುಸ್ಲಿಂ ಹೆಣ್ಣುಮಕ್ಕಳು ಬೇರೆಯವರಲ್ಲ. ಅವರೂ ನಮ್ಮ ಪ್ರಜೆಗಳು. ದೇಶದ ಪ್ರಜೆಯಾಗಿ ನಾನು ಇದರ ಬಗ್ಗೆ ಮಾತನಾಡಬಹುದು ಎಂದಿದ್ದರು.

613

ಇತ್ತೀಚೆಗೆ ಅವರ ಪ್ರಚಾರದ ವೇಳೆ ಬುರ್ಕಾ ಧರಿಸಿದ್ದ ಸಾಕಷ್ಟು ಮುಸ್ಲಿಂ ಹೆಣ್ಣುಮಕ್ಕಳು ಇವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಫೋಟೋ ವೈರಲ್‌ ಆಗಿತ್ತು.

713

ನಿಜಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಾಂಸ್ಕೃತಿಕ ಕಾರ್ಯಕರ್ತೆ ಮಾಧವಿ ಲತಾ.

813

ಮಾಧವಿ ಲತಾ ಅವರು 2019 ರಲ್ಲಿ ಕಾನೂನುಬಾಹಿರವಾದ ತ್ರಿವಳಿ ತಲಾಖ್ ವಿರುದ್ಧ ಸಕ್ರಿಯವಾಗಿ ಪ್ರಚಾರ ಮಾಡಿದರು. ಅವರು ಹಳೇ ಹೈದರಾಬಾದ್‌ನಲ್ಲಿ ಈ ಸಮಸ್ಯೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಈ ಪದ್ಧತಿಯನ್ನು ರದ್ದುಗೊಳಿಸುವಂತೆ ಮುಸ್ಲಿಂ ಹೆಣ್ಣುಮಕ್ಕಳೊಂದಿಗೆ ಸೇರಿ ಒತ್ತಾಯಿಸಿದ್ದರು.

913

49 ವರ್ಷದ ಶ್ರೀಮತಿ ಲತಾ ಅವರು ಪ್ರಸ್ತುತ ಹೈದರಾಬಾದ್ ಮೂಲದ ಪ್ರಮುಖ ಆರೋಗ್ಯ ಸಂಸ್ಥೆಯಾದ ವಿರಿಂಚಿ ಹಾಸ್ಪಿಟಲ್ಸ್‌ನ  ಅಧ್ಯಕ್ಷರಾಗಿದ್ದಾರೆ.

1013

ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ನಂತರ ಆರೋಗ್ಯ ಅಧಿಕಾರಿಗಳು ಕೋವಿಡ್‌-19 ಚಿಕಿತ್ಸೆಗಾಗಿ ಅದರ ಪರವಾನಗಿಯನ್ನು ರದ್ದುಗೊಳಿಸಿದಾಗ ವಿರಿಂಚಿ ಹಾಸ್ಪಿಟಲ್ಸ್‌ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

1113

ಮುಸ್ಲಿಂ ಹೆಣ್ಣುಮಕ್ಕಳು ಹಾಗೂ ಹಿಂದೂ ಮಹಿಳೆಯರ ವೋಟ್‌ಗಳ ಮೇಲೆ ಹೆಚ್ಚಾಗಿ ನೆಚ್ಚಿಕೊಂಡಿರುವ ಮಾಧವಿ ಲತಾ, ಓವೈಸಿ ವಿರುದ್ಧ ದೊಡ್ಡ ಮಟ್ಟದ ಸ್ಪರ್ಧೆ ನೀಡಲು ಸಜ್ಜಾಗಿದ್ದಾರೆ.

1213

ಮೂವರು ಮಕ್ಕಳನ್ನು ಹೊಂದಿರುವ ಮಾಧವಿ ಲತಾ ಅವರ ಇಬ್ಬರು ಮಕ್ಕಳೀಗ ಐಐಟಿ ಮದ್ರಾಸ್‌ನಲ್ಲೊ ಓದುತ್ತಿದ್ದಾರೆ. ಹೋಮ್‌ ಸ್ಕೂಲಿಂಗ್‌ ನಡೆಸಿಯೇ ಮಕ್ಕಳನ್ನು ಐಐಟಿಯನ್‌ ಮಾಡಿರುವುದು ವಿಶೇಷವಾಗಿದೆ.

1313

ವೃತ್ತಿಪರ ಭರತನಾಟ್ಯಂ ಡಾನ್ಸರ್‌ ಆಗಿರುವ ಮಾಧವಿ ಲತಾ ಅವರು ಹೆಣ್ಣುಮಕ್ಕಳ ಶಿಕ್ಷಣದ ಪ್ರಾಯೋಜಕರಾಗಿದ್ದಾರೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವಲ್ಲಿ ಮತ್ತು ಪ್ರವಾಹ ನೆರವು ನೀಡುವಲ್ಲಿ ಅವರ ಪ್ರಯತ್ನಗಳಿಗೆ ಹೆಸರುವಾಸಿಯಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಅಸಾದುದ್ದೀನ್ ಓವೈಸಿ
ಬಿಜೆಪಿ
ಹೈದರಾಬಾದ್

Latest Videos
Recommended Stories
Recommended image1
ಪ್ರಧಾನಿ ಮೋದಿ ಅಪಹಾಸ್ಯ ಮಾಡಿದ್ದ ಕೈ ಕಾರ್ಯಕರ್ತೆ ವಿರುದ್ಧ ದೂರು!
Recommended image2
''ಮತ್ತೆ ಮೊಳಗಲಿದೆ ಜೆಡಿಎಸ್ ಕಹಳೆ: ಎಚ್ಡಿಕೆ 2028ಕ್ಕೆ ಸಿಎಂ''
Recommended image3
ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ : ಸಿಎಂ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved