ಕಾಂಗ್ರೆಸ್ ನಾಯಕನ ಭೇಟಿಯಾದ ಸಿಎಂ ಆಪ್ತ: ಇಲ್ಲಿದೆ ರೇಣುಕಾಚಾರ್ಯ ದಿಲ್ಲಿ ರೌಂಡ್ಸ್
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಯಾವುದೇ ಕಾರಣಕ್ಕೂ ಬಿಎಸ್‌ವೈ ಬದಲಾವಣೆ ಬೇಡ ಎಂದು ಮಠಾಧೀಶರು ಆಗ್ರಹಿಸುತ್ತಿದ್ದಾರೆ. ಅತ್ತ ಯಡಿಯೂರಪ್ಪನವರ ಆಪ್ತ, ಕಟ್ಟ ಬೆಂಬಲಿಗೆ ಎನಿಸಿಕೊಂಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ದಿಢೀರ್ ದೆಹಲಿಗೆ ಹಾರಿದ್ದು, ಸಂಚಲನ ಮೂಡಿಸಿದೆ. ಹಾಗಾದ್ರೆ ರೇಣುಕಾಚರ್ಯ ಅವರು ದಿಲ್ಲಿಯಲ್ಲಿ ಯಾರನೆಲ್ಲಾ ಭೇಟಿಯಾಗಿದ್ದಾರೆ ಎನ್ನುವುದನ್ನು ನೋಡಿ...

ಇತ್ತ ಬಿಎಸ್‌ವೈ ನಾಯಕತ್ವ ಬದಲಾವಣೆ ಬೆಳವಣಿಗೆ ನಡೆಯುತ್ತಿದ್ರೆ, ಅತ್ತ ಆಪ್ತರು ಎನಿಸಿಕೊಂಡಿರುವ ಎಂಪಿ ರೇಣುಕಾಚಾರ್ಯ ಅವರು ದಿಢೀರ್ ದೆಹಲಿಗೆ ತೆರಳಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇಂದು (ಜು.21) ದೆಹಲಿಗೆ ತೆರಳಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿ ಮಾಡಿದರು.

ದೆಹಲಿಯಲ್ಲಿಯೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಅವರನ್ನ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಚರ್ಚೆಗೆ ಗ್ರಾಸವಾಗಿದೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರನ್ನ ಭೇಟಿ ಮಾಡಿ ಶುಭಕೋರಿದರು,

ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ್ ಖೂಬಾ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಶುಭಕೋರಿದರು.

ಇನ್ನೊಂದು ಪ್ರಮುಖ ಅಂಶ ಅಂದ್ರೆ ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಈ ಬಗ್ಗೆ ಸ್ಪಷ್ಟನೆ ಕೊಡಲು ದೆಹಲಿಗೆ ತೆರಳಿದ್ದಾರೆ ಎನ್ನುವ ಮತುಗಳು ಕೇಳಿಬಂದಿವೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಮಾಡಿಸಿಕೊಡುವಂತೆ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಮಾಡಿದ್ದು, ಬುಧವಾರ ರಾತ್ರಿ ಅಥವಾ ಗುರುವಾರ ರೇಣುಕಾಚಾರ್ಯ ಅವರು ಅರಣ್ ಸಿಂಗ್ ಅವರನ್ನ ಭೇಟಿಯಾಗಲಿದ್ದಾರೆ.