IPS ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವ ಹಿಂದೆ ಕರ್ನಾಟಕದ ಲೀಡರ್: ಯಾರದು..?
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡಿದ್ದು, ತಮಿಳುನಾಡಿನಲ್ಲಿ ಕೇಸರಿಮಯ ಮಾಡಲು ಅಣ್ಣಾಮಲೈಗೆ ಗಾಳ ಹಾಕಲಾಗಿದೆ. ಹಾಗಾದ್ರೆ, ಅಣ್ಣಾಮಲೈ ಅವರು ಐಪಿಎಸ್ ನಂತಹ ದೊಡ್ಡ ಹುದ್ದೆ ಬಿಟ್ಟು ಬಿಜೆಪಿ ಸೇರಿದ್ಯಾಕೆ? ಇದರ ಹಿಂದಿನ ರೂವಾರಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಅದು ಕರ್ನಾಟಕದ ಲೀಡರ್. ಯಾರದು..?
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡರು.
ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಇನ್ನು ಐಪಿಎಸ್ ನಂತಹ ದೊಡ್ಡ ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವುದರ ಹಿಂದೆ ಯಾರಿದ್ದಾರೆ ಎನ್ನುವ ಕುತೂಹಲಕ್ಕೆ ಸಂಸದ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರ್ಪಡೆ ಹಿಂದಿರುವ ವ್ಯಕ್ತಿ ಬೇರಾರೂ ಅಲ್ಲ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್.
ಹೌದು...ಈ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಗ್ ಟ್ವೀಟ್ ಮೂಲಕ ತಿಳಿಸಿದ್ದಾರೆ.