ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ
ನವದೆಹಲಿ(ಜು.30): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಶುಕ್ರವಾರ) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಅವರನ್ನ ಭೇಟಿಯಾಗಿ ಮನವಿ ಮಾಡಿದ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಆರ್. ಅಶೋಕ್.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ
ಸಿಎಂಗೆ ಸಾಥ್ ನೀಡಿದ ಹಾವೇರಿ-ಗದಗ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ, ಕಲಬುರಗಿ ಸಂಸದ ಉಮೇಶ್ ಜಾಧವ್ ಹಾಗೂ ಮಾಜಿನ ಸಚಿವ ಉಮೇಶ್ ಕತ್ತಿ