- Home
- News
- Politics
- Congress Protest: ಸೌಧಕ್ಕೆ ಹಾಸಿಗೆ-ದಿಂಬು.. ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಅಹೋರಾತ್ರಿ ಧರಣಿ
Congress Protest: ಸೌಧಕ್ಕೆ ಹಾಸಿಗೆ-ದಿಂಬು.. ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಅಹೋರಾತ್ರಿ ಧರಣಿ
ಬೆಂಗಳೂರು(ಫೆ. 18) ಸಚಿವ ಈಶ್ವರಪ್ಪ (KS Eshwarappa) ಅವರ ರಾಜೀನಾಮೆಯನ್ನು ಕೂಡಲೇ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ (Congress) ನಾಯಕರು ವಿಧಾನಸಭೆಯಲ್ಲೇ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸ್ಪೀಕರ್ ಆದಿಯಾಗಿ ಬಿಜೆಪಿ (BJP) ಹಿರಿಯ ನಾಯಕರು ಆಗಮಿಸಿ ಮನವೊಲಿಸಿದರೂ ಮಾತು ಕೇಳಿಲ್ಲ.

ಸದನದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಧರಣಿ ಕೈ ಬಿಡುವಂತೆ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಮಾತುಕತೆ ವಿಫಲವಾಗಿದೆ.
ಕೆಎಸ್ ಈಶ್ವರಪ್ಪ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿ ಆರಂಭಿಸಿದ್ದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಎಲ್ಲ ನಾಯಕರು ಇದ್ದಾರೆ.
ಸ್ಪೀಕರ್ ಆದೇಶದಂತೆ ಕಾಂಗ್ರೆಸ್ ನಾಯಕರಿಗೆ ಊಟ ಮತ್ತು ಹಾಸಿಗೆ ವ್ಯವಸ್ಥೆ ಮಾಡಿಸಲಾಗಿದೆ. ಈಶ್ವರಪ್ಪ ರಾಜೀನಾಮೆ ಪಡೆದುಕೊಳ್ಳುವವರೆಗೂ ಹೋರಾಟ ನಿರಂತರ ಎಂದು ಎಚ್ಚರಿಕೆ ನೀಡಿದ್ದಾರೆ.
Congress Protest
ಅಹೋರಾತ್ರಿ ಧರಣಿಯಲ್ಲಿ ವಿಧಾನಸಭೆಯ ಒಟ್ಟು 69 ಜನ ಕಾಂಗ್ರೆಸ್ ಸದಸ್ಯರ ಪೈಕಿ ಸಿದ್ದರಾಮಯ್ಯ, ಯು.ಟಿ.ಖಾದರ್, ಡಿ.ಕæ.ಶಿವಕುಮಾರ್ ಸೇರಿದಂತೆ 33 ಸದಸ್ಯರು ಮಾತ್ರ ಭಾಗವಹಿಸಿದ್ದರು. ಇನ್ನು ವಿಧಾನ ಪರಿಷತ್‌ನ 26 ಸದಸ್ಯರ ಪೈಕಿ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್, ಪ್ರಕಾಶ್ ರಾಥೋಡ್, ಗೋವಿಂದರಾಜು ಸೇರಿದಂತೆ ಒಟ್ಟು 17 ಮಂದಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.