ವಿರೋಧ ಮಾಡೋದೇ ಪ್ರತಿಪಕ್ಷದ ಕೆಲಸ: ಡಿಸಿಎಂ ಅಶ್ವತ್ಥನಾರಾಯಣ ಕಿಡಿ

First Published 9, Aug 2020, 12:14 PM

ಬೆಂಗಳೂರು(ಆ.09): ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಇಷ್ಟು ದಿನ ಕೋವಿಡ್‌ ಇಟ್ಟುಕೊಂಡು ಟೀಕಿಸಿದರು. ಈಗ ನೆರೆ ವಿಚಾರ ಸಿಕ್ಕಿದೆ. ಒಟ್ಟಿನಲ್ಲಿ ಯಾವುದಾದರೊಂದು ವಿಷಯ ಇಟ್ಟುಕೊಂಡು ಸರ್ಕಾರವನ್ನು ವಿರೋಧ ಮಾಡುವುದೇ ಪ್ರತಿಪಕ್ಷದ ಕೆಲಸವಾಗಿದೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 

<p>ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರ ಪುಣ್ಯತಿಥಿ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿನ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತಿವೃಷ್ಟಿ ಮತ್ತು ನೆರೆಯಂತಹ ಪ್ರಕೃತಿ ವಿಕೋಪದ ವೇಳೆಯಲ್ಲಿಯೂ ಪ್ರತಿಪಕ್ಷ ನಾಯಕರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರ್ಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡಿಕೊಂಡು ಕಾಲಹರಣ ಮಾಡುವುದು ಎಷ್ಟು ಸರಿ ಎಂದು ಹರಿಹಾಯ್ದರು.</p>

ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರ ಪುಣ್ಯತಿಥಿ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿನ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತಿವೃಷ್ಟಿ ಮತ್ತು ನೆರೆಯಂತಹ ಪ್ರಕೃತಿ ವಿಕೋಪದ ವೇಳೆಯಲ್ಲಿಯೂ ಪ್ರತಿಪಕ್ಷ ನಾಯಕರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರ್ಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡಿಕೊಂಡು ಕಾಲಹರಣ ಮಾಡುವುದು ಎಷ್ಟು ಸರಿ ಎಂದು ಹರಿಹಾಯ್ದರು.

<p>ಪ್ರಕೃತಿ ವಿಕೋಪ ಹೇಳಿ ಕೇಳಿ ಬರುವುದಿಲ್ಲ. ಈಗಾಗಲೇ ಕೆಲವು ಕಡೆ ಪ್ರವಾಹ ಬರುತ್ತಿದೆ. ಜನರ ಕಷ್ಟದ ಬಗ್ಗೆ ಅವರು ಸಲಹೆ ಕೊಡಬೇಕು. ಸರ್ಕಾರವನ್ನು ಡಮ್ಮಿ ಮಾಡುವಂತಹ ಪ್ರಯತ್ನ ಹಿನ್ನೆಲೆಯಲ್ಲಿ ಆರೋಪಗಳನ್ನು ಮಾಡಲಾಗುತ್ತಿದೆ. ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ ಎನ್ನುವುದು ಸರಿಯಲ್ಲ. ಜನರ ಮಧ್ಯೆಯೇ ಇದ್ದು, ನಮ್ಮ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್‌ ಕಷ್ಟಕ್ಕೆ ಸ್ಪಂದಿಸಬೇಕು. ಚರ್ಚೆ ಮಾಡಬೇಕೆಂದರೆ ಕಾಂಗ್ರೆಸ್‌ ನಾಯಕರು ಅಧಿವೇಶನದಲ್ಲಿ ಚರ್ಚೆ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡರ ವಿರುದ್ಧ ಕಿಡಿಕಾರಿದರು.</p>

ಪ್ರಕೃತಿ ವಿಕೋಪ ಹೇಳಿ ಕೇಳಿ ಬರುವುದಿಲ್ಲ. ಈಗಾಗಲೇ ಕೆಲವು ಕಡೆ ಪ್ರವಾಹ ಬರುತ್ತಿದೆ. ಜನರ ಕಷ್ಟದ ಬಗ್ಗೆ ಅವರು ಸಲಹೆ ಕೊಡಬೇಕು. ಸರ್ಕಾರವನ್ನು ಡಮ್ಮಿ ಮಾಡುವಂತಹ ಪ್ರಯತ್ನ ಹಿನ್ನೆಲೆಯಲ್ಲಿ ಆರೋಪಗಳನ್ನು ಮಾಡಲಾಗುತ್ತಿದೆ. ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ ಎನ್ನುವುದು ಸರಿಯಲ್ಲ. ಜನರ ಮಧ್ಯೆಯೇ ಇದ್ದು, ನಮ್ಮ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್‌ ಕಷ್ಟಕ್ಕೆ ಸ್ಪಂದಿಸಬೇಕು. ಚರ್ಚೆ ಮಾಡಬೇಕೆಂದರೆ ಕಾಂಗ್ರೆಸ್‌ ನಾಯಕರು ಅಧಿವೇಶನದಲ್ಲಿ ಚರ್ಚೆ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡರ ವಿರುದ್ಧ ಕಿಡಿಕಾರಿದರು.

<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷ ರಚನಾತ್ಮಕವಾಗಿ ಕೆಲಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಸರ್ಕಾರಕ್ಕೆ ಹೆಗಲುಕೊಟ್ಟು ಕೆಲಸ ಮಾಡಬೇಕು. ಹೊಣೆಗಾರಿಕೆಯಿಂದ ಕೆಲಸ ಮಾಡಿ ಲೋಪವಿದ್ದರೆ ತೋರಿಸಬೇಕು. ಕೋವಿಡ್‌ ನಂತರ ತಂದಿರುವ ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.&nbsp;</p>

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷ ರಚನಾತ್ಮಕವಾಗಿ ಕೆಲಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಸರ್ಕಾರಕ್ಕೆ ಹೆಗಲುಕೊಟ್ಟು ಕೆಲಸ ಮಾಡಬೇಕು. ಹೊಣೆಗಾರಿಕೆಯಿಂದ ಕೆಲಸ ಮಾಡಿ ಲೋಪವಿದ್ದರೆ ತೋರಿಸಬೇಕು. ಕೋವಿಡ್‌ ನಂತರ ತಂದಿರುವ ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. 

<p>ಸಂತ್ರಸ್ತರಿಗೆ ತುರ್ತಾಗಿ 10 ಸಾವಿರ ರು., ಮನೆ ಕಳೆದುಕೊಂಡವರಿಗೆ 5 ಲಕ್ಷ ರು. ನೆರವು ಕೊಡಲಾಗುತ್ತದೆ. ಕಳೆದ ವರ್ಷ ಉತ್ತರ ಕರ್ನಾಟಕದ ಪ್ರದೇಶದ ನೆರೆ ಸಂತ್ರಸ್ತರಿಗೆ ನೆರವಾದ ರೀತಿಯಲ್ಲಿಯೇ ಸಕಲ ರೀತಿಯ ಸಹಾಯ ಹಸ್ತ ಚಾಚಲಾಗುವುದು. ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.</p>

ಸಂತ್ರಸ್ತರಿಗೆ ತುರ್ತಾಗಿ 10 ಸಾವಿರ ರು., ಮನೆ ಕಳೆದುಕೊಂಡವರಿಗೆ 5 ಲಕ್ಷ ರು. ನೆರವು ಕೊಡಲಾಗುತ್ತದೆ. ಕಳೆದ ವರ್ಷ ಉತ್ತರ ಕರ್ನಾಟಕದ ಪ್ರದೇಶದ ನೆರೆ ಸಂತ್ರಸ್ತರಿಗೆ ನೆರವಾದ ರೀತಿಯಲ್ಲಿಯೇ ಸಕಲ ರೀತಿಯ ಸಹಾಯ ಹಸ್ತ ಚಾಚಲಾಗುವುದು. ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

loader